ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ (Karnataka legislative council) 6 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಿ ಆದೇಶಿಸಲಾಗಿದೆ. ಹಾಲಿ ಸದಸ್ಯರ ಅವಧಿ ಜೂನ್ 21ಕ್ಕೆ ಮುಕ್ತಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಹೀಗಾಗಿ ಜೂನ್ 3ಕ್ಕೆ ಈ ಆರೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.
3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ
- ಈಶಾನ್ಯ ಪದವೀಧರ ಕ್ಷೇತ್ರ
ನೈರುತ್ಯ ಪದವೀಧರ ಕ್ಷೇತ್ರ
ಬೆಂಗಳೂರು ಪದವೀಧರ ಕ್ಷೇತ್ರ - ಆಗ್ನೇಯ ಶಿಕ್ಷಕರ ಕ್ಷೇತ್ರ
ನೈರುತ್ಯ ಶಿಕ್ಷಕರ ಕ್ಷೇತ್ರ
ದಕ್ಷಿಣ ಶಿಕ್ಷಕರ ಕ್ಷೇತ್ರ
ನಾಮಪತ್ರ ಸಲ್ಲಿಕೆಗೆ ಮೇ 16 ಕೊನೇ ದಿನ
ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಒಂದು ವೇಳೆ ನಾಮಪತ್ರದಲ್ಲಿ ದೋಷಗಳು ಕಂಡುಬಂದಲ್ಲಿ ಚುನಾವಣಾ ಆಯೋಗವು ಅಂತಹ ನಾಮಪತ್ರವನ್ನು ತಿರಸ್ಕೃತ ಮಾಡಲಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ 20 ಕೊನೆಯ ದಿನ ಎಂದು ಚುನಾವಣಾ ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ. ಜೂನ್ 3ರಂದು ಮತದಾನ ನಡೆದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.
ನೀತಿ ಸಂಹಿತೆ ಜಾರಿ
ಈ ಆರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅನುಷ್ಠಾನಕ್ಕೆ ಬರುವಂತೆ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದರ ಅನುಸಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅವಧಿ ಪೂರೈಸುತ್ತಿರುವ ಪರಿಷತ್ ಸದಸ್ಯರು ಇವರು
ಈಶಾನ್ಯ ಪದವೀಧರ ಕ್ಷೇತ್ರ – ಡಾ. ಚಂದ್ರಶೇಖರ್ ಬಿ. ಪಾಟೀಲ್
ನೈರುತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್ (2023ರ ಏಪ್ರಿಲ್ 19ಕ್ಕೆ ರಾಜೀನಾಮೆ)
ಬೆಂಗಳೂರು ಪದವೀಧರ ಕ್ಷೇತ್ರ – ಎ. ದೇವೇಗೌಡ
ಇದನ್ನೂ ಓದಿ: Prajwal Revanna Case: ಪ್ರಜ್ವಲ್ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ವೈರಲ್ ಮಾಡಿದ್ದು ಸಚಿವ ಜಮೀರ್ ಅಹ್ಮದ್ ಆಪ್ತ?
ಆಗ್ನೇಯ ಶಿಕ್ಷಕರ ಕ್ಷೇತ್ರ – ವೈ.ಎ. ನಾರಾಯಣಸ್ವಾಮಿ
ನೈರುತ್ಯ ಶಿಕ್ಷಕರ ಕ್ಷೇತ್ರ – ಎಸ್.ಎಲ್. ಭೋಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರ – ಮರಿತಿಬ್ಬೇಗೌಡ (2024ರ ಮಾರ್ಚ್ 21ಕ್ಕೆ ರಾಜೀನಾಮೆ)