ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಅನಾರೋಗ್ಯ ಉಂಟಾಗಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ರಾತ್ರಿಯೇ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಏನೂ ತೊಂದರೆ ಇಲ್ಲ
ಎಸ್.ಎಂ.ಕೃಷ್ಣ ಆರೋಗ್ಯದ ಬಗ್ಗೆ ಅವರ ಆಪ್ತಕಾರ್ಯದರ್ಶಿ ಮಾಹಿತಿ ನೀಡಿದ್ದು, ‘ಎಸ್.ಎಂ.ಕೃಷ್ಣ ಅವರಿಗೆ ರಾತ್ರಿ ಜ್ವರ ಕಾಣಿಸಿಕೊಂಡಿದ್ದಕ್ಕೆ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊವಿಡ್ ಮತ್ತು ಇನ್ನಿತರ ಪರೀಕ್ಷೆ ಮಾಡಲಾಗಿದೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಯಾರೂ ಆಸ್ಪತ್ರೆಯ ಬಳಿ ಬರಬಾರದು. ಊಹಾಪೋಹದ ಮಾಹಿತಿಗಳನ್ನೂ ಹಬ್ಬಿಸಬಾರದು ಎಂದು ಹೇಳಿದ್ದಾರೆ.
90 ವರ್ಷ ವಯಸ್ಸಿನ ಎಸ್.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಮೊದಲು ಕಾಂಗ್ರೆಸ್ನಲ್ಲಿದ್ದು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ, ನಂತರ ಪಕ್ಷ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಕೆಂಪೇಗೌಡರು ಯಾರೊಬ್ಬರ ಸ್ವತ್ತಲ್ಲ: ಮಾಜಿ ಸಿಎಂ ಎಸ್.ಎಂ. ಕೃಷ್ಣ