ಬೆಂಗಳೂರು: ಸಣ್ಣ ನೇಕಾರರಿಗೆ ಅನುಕೂಲವಾಗಲು 10 ಎಚ್.ಪಿ.ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಎಚ್.ಪಿ.ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಕುರಿತು ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಈ ಮಹತ್ವದ ತೀರ್ಮಾನವನ್ನು ಸಿಎಂ ಪ್ರಕಟಿಸಿದ್ದಾರೆ.
ಈ ಕುರಿತು ಹಿಂದೆ ನೇಕಾರರಿಗೆ ನೀಡಿದ ಭರವಸೆಯಂತೆ ಅದನ್ನೂ ಮನ್ನಾ ಮಾಡಲಾಗುವುದು. ಇದರಿಂದ ಸಣ್ಣ ನೇಕಾರರಿಗೆ ದೊಡ್ಡ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ | CM Siddaramaiah: ಅಂಬಾನಿ, ಅದಾನಿ ಜೇಬಿನಲ್ಲಿ ಹಣವಿದ್ದರೆ ಬಡವರು ಉದ್ಧಾರವಾಗಲ್ಲ ಎಂದ ಸಿದ್ದರಾಮಯ್ಯ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್ ಉಪಸ್ಥಿತರಿದ್ದರು.
ಅಂಬಾನಿ, ಅದಾನಿ ಜೇಬಿನಲ್ಲಿ ಹಣವಿದ್ದರೆ ಬಡವರು ಉದ್ಧಾರವಾಗಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು: ಬರೀ ಅಂಬಾನಿ, ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರು, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ. ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ದುಡಿಯುವವರು, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ ತಿಳಿಸಿದರು.
ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನಂತಹ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.
ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ, ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಸಿಎಂ ಪ್ರಶ್ನಿಸಿದರು.
ಇದನ್ನೂ ಓದಿ | Caste Certificate : ಜಾತಿ ಪ್ರಮಾಣಪತ್ರ ನೀಡುವುದು ವಿಳಂಬವಾದರೆ ಜಿಲ್ಲಾಧಿಕಾರಿ ಮೇಲೆಯೇ ಕ್ರಮ; ಸಿಎಂ ಎಚ್ಚರಿಕೆ
ಸಿದ್ದಲಿಂಗಯ್ಯನವರ ಕವನಗಳು ಸಮಾಜದ ವಸ್ತು ಸ್ಥಿತಿಗೆ ಕನ್ನಡಿ ಹಿಡಿದಿವೆ. ಅಸಮಾನತೆ, ತಾರತಮ್ಯದ ವಿರುದ್ಧ ಸಮಾಜವನ್ನು ಎಚ್ಚರಿಸುವ ಧ್ವನಿ ಸಿದ್ದಲಿಂಗಯ್ಯ ಅವರ ಕವನಗಳಲ್ಲಿವೆ. ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.