Site icon Vistara News

Snake Bite : ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿಗೆ ಕಚ್ಚಿದ ಹಾವು! ಹಾರಿ ಹೋಯ್ತು ಪ್ರಾಣ

Snake bites student who came for convocation

ತುಮಕೂರು: ಒಂದೇ ವಾರದಲ್ಲಿ ಹಾವು ಕಡಿತದಿಂದ (Snake Bite) ಮೂವರು ಮೃತಪಟ್ಟಿದ್ದಾರೆ. ಘಟಿಕೋತ್ಸವದಲ್ಲಿ ಪದವಿ ಪಡೆದ ಕೇರಳ ಮೂಲದ ವಿದ್ಯಾರ್ಥಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ನಿನ್ನೆ ಬುಧವಾರ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಘಟಿಕೋತ್ಸವ ನಡೆದಿತ್ತು. ಇದರಲ್ಲಿ ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಎಂಬಿಬಿಎಸ್ ಪದವಿ ಪಡೆದಿದ್ದ. ಪದವಿ ಪಡೆದು ಪಾರ್ಕಿನಲ್ಲಿ ನಿಂತಿದ್ದವನಿಗೆ ಹಾವು ಕಡಿದಿರುವ ಶಂಕೆ ವ್ಯಕ್ತವಾಗಿದೆ.

ಹಾವು ಕಡಿತ ಗಮನಿಸದೇ ಮನೆಗೆ ಬಂದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತದೇಹವನ್ನು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Elephant Attack : ರಸ್ತೆ ದಾಟುವಾಗ ಅಡ್ಡ ಬಂದ ಸವಾರ; ಬೈಕ್‌ ಪುಡಿ ಮಾಡಿ ಪ್ರಾಣ ತೆಗೆದ ಕಾಡಾನೆಗಳು!

ಹಾವು ಕಡಿತಕ್ಕೆ ಬಲಿಯಾಗಿದ್ದ ಮಕ್ಕಳು

ರಾಜ್ಯದಲ್ಲಿ ಹಾವು ಕಡಿತಕ್ಕೆ (Snake Bite) ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಧಾರವಾಡದಲ್ಲಿ ನ.27ರಂದು ಹಾವು ಕಡಿತದಿಂದ ಬಾಲಕ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಾಲಕಿಯೊಬ್ಬಳು ಸಹ ಹಾವಿನ ಕಡಿತದಿಂದ ಮೃತಪಟ್ಟಿದ್ದಳು.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ಸೋನಿಕಾ ಪಾಟೀಲ್ (10) ಎಂಬಾಕೆ ಹಾವು ಕಡಿದು ಮೃತಪಟ್ಟಿದ್ದಳು. ಸೋನಿಕಾ ಬಿಲ್ವಾಡ್ (ಬಿ) ಗ್ರಾಮದ ಸರ್ಕಾರಿ‌ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿ ಓದುತ್ತಿದ್ದಳು. ಶಾಲೆ ಮುಗಿಸಿ ಮನೆಗೆ ಬರುತ್ತಿದ್ದಾಗ ಹಾವು ಕಡಿದಿತ್ತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸೋನಿಕಾ ಮೃತಪಟ್ಟಿದ್ದಾಳೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಧಾರವಾಡ: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ ಹಾವು ಕಡಿತದಿಂದ ಅರುಣ್ ಬಡಿಗೇರ್ (9) ಎಂಬ ಬಾಲಕ ಮೃತಪಟ್ಟಿದ್ದ. ಅರುಣ್‌ ಮನೆಯ ಪಕ್ಕದಲ್ಲೇ ಆಟವಾಡಲು ಹೋಗಿದ್ದಾಗ ಹಾವು ಕಚ್ಚಿತ್ತು. ಕೂಡಲೇ ಚಿಕಿತ್ಸೆಗೆ ಆಸ್ಪತ್ರೆಗೆ ಕರೆತಂದರೂ ಫಲಕಾರಿಯಾಗಲಿಲ್ಲ.

ಇತ್ತ ಹಾವು ಕಡಿತದಿಂದ ಮಹಿಳೆ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯಲ್ಲಿ ನಡೆದಿತ್ತು. ನ. 13 ಸೋಮವಾರ ಸಂಜೆ ತೋಟದಲ್ಲಿ ಬೆಳೆದಿದ್ದ ಹೂಗಳನ್ನ ಕೊಯ್ಯಲು ಹೋಗಿದ್ದಾಗ ಮಹಿಳೆಗೆ ಹಾವು ಕಚ್ಚಿತ್ತು. ಶಾರದಮ್ಮ (42) ಮೃತ ದುರ್ದೈವಿ. ಹಾವು ಕಚ್ಚಿದ ಕೂಡಲೇ ಅವರನ್ನು ಕೊರಟಗೆರೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯತ್ತಿದ್ದಾಗ ಮಾರ್ಗ ಮಧ್ಯೆ ಮಹಿಳೆ ಮೃತಪಟ್ಟಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version