Solar Grid: ಸೋಲಾರ್‌ ಗ್ರಿಡ್‌ನಲ್ಲಿ ಭ್ರಷ್ಟಾಚಾರ; ಕರ್ನಾಟಕಕ್ಕೆ ಸಿಗದ ಟೆಂಡರ್ ಕೇರಳದ ಕಂಪನಿಗೆ ಸಿಕ್ಕಿದ್ಹೇಗೆ? - Vistara News

ಕರ್ನಾಟಕ

Solar Grid: ಸೋಲಾರ್‌ ಗ್ರಿಡ್‌ನಲ್ಲಿ ಭ್ರಷ್ಟಾಚಾರ; ಕರ್ನಾಟಕಕ್ಕೆ ಸಿಗದ ಟೆಂಡರ್ ಕೇರಳದ ಕಂಪನಿಗೆ ಸಿಕ್ಕಿದ್ಹೇಗೆ?

Solar Grid: 33KV ಸೋಲಾರ್ ಗ್ರಿಡ್ ಅಳವಡಿಕೆಗೆ ಸದ್ಯದ ಮಾರ್ಕೆಟ್ ದರ 2.68 ಲಕ್ಷ ರೂ. ಇದ್ದು, ಮಾರ್ಕೆಟ್ ದರಕ್ಕಿಂತ ದುಪ್ಪಟ್ಟು ದರದಲ್ಲಿ ಟೆಂಡರ್ ಅನ್ನು ಅಂತಿಮಗೊಳಿಸಲಾಗಿದೆ. ಹೀಗಾಗಿ ಈ ಕಾಮಗಾರಿಯಲ್ಲಿ ಭಾರೀ ಗೋಲ್ಮಾಲ್ ನಡೆದಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

VISTARANEWS.COM


on

Solar plant shivamogga
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Super Speciality Hospital

ವಿವೇಕ ಮಹಾಲೆ, ಶಿವಮೊಗ್ಗ
ರಾಜ್ಯದಲ್ಲಿ ಸೋಲಾರ್ ಗ್ರಿಡ್ (Solar Grid) ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿ ಭಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದು ರಾಜ್ಯದಲ್ಲಿಯೇ ಅತಿ ದೊಡ್ಡ ಹಗರಣಗಳಲ್ಲೊಂದಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ.

ರಾಜ್ಯದ 6022 ಗ್ರಾಮ ಪಂಚಾಯಿತಿ ಕಟ್ಟಡಗಳ ಮೇಲ್ಭಾಗದಲ್ಲಿ ಅಳವಡಿಸಿರುವ 3 ಕೆವಿ ಸೋಲಾರ್ ಗ್ರಿಡ್ ಕಾಮಗಾರಿಯಲ್ಲಿ ಗೋಲ್ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗೆ 4.98 ಲಕ್ಷ ರೂ. ಖರ್ಚು ಮಾಡಿ, ಸೋಲಾರ್ ಪ್ಲಾಂಟ್ ಅಳವಡಿಸಲಾಗಿದ್ದು, ಒಟ್ಟಾರೆ ಸುಮಾರು 300 ಕೋಟಿಯಷ್ಟು ಹಣ ಖರ್ಚು ಮಾಡಲಾಗಿದೆ. ಈ ಯೋಜನೆ ಅನುಷ್ಠಾನಕ್ಕಾಗಿ 2020ರ ಅ.22ರಂದು ಇ-ಟೆಂಡರ್ ಆಹ್ವಾನಿಸಲಾಗಿದ್ದು, ಎರಡು ಹಂತದಲ್ಲಿ ಬಿಡ್ ಅಂತಿಮಗೊಳಿಸಲಾಗಿದೆ. 2020ರ ನ.2ರಂದು ಜಿಲ್ಲಾವಾರು ಗುರಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದ್ದು, ಕೇರಳದ Inkel Limited ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಆದರೆ, 33KV ಸೋಲಾರ್ ಗ್ರಿಡ್ ಅಳವಡಿಕೆಗೆ ಸದ್ಯದ ಮಾರ್ಕೆಟ್ ದರ 2.68 ಲಕ್ಷ ರೂ. ಇದ್ದು, ಮಾರ್ಕೆಟ್ ದರಕ್ಕಿಂತ ದುಪ್ಪಟ್ಟು ದರದಲ್ಲಿ ಟೆಂಡರ್ ಅಂತಿಮಗೊಳಿಸಲಾಗಿದೆ.

ರಾಜ್ಯದ ವಿವಿಧ ಕಂಪನಿಗಳ ಅಂದಾಜು ಪಟ್ಟಿಗೂ ಕೇರಳ ಮೂಲದ ಕಂಪನಿಗೂ ತುಂಬಾ ವ್ಯತ್ಯಾಸ ಇರುವುದು ಸಂಶಯ ಮೂಡಿಸಿದ್ದು, ಪ್ರಕರಣದಲ್ಲಿ ಭಾರೀ ಗೋಲ್ಮಾಲ್ ನಡೆದಿರುವ ಸಾಧ್ಯತೆ ಹೆಚ್ಚಾಗಿದೆ. ಪ್ರತಿ ಸೋಲಾರ್ ಪ್ಲಾಂಟ್ ಗೆ ಸುಮಾರು 2.50 ಲಕ್ಷ ರೂ. ಹೆಚ್ಚುವರಿ ಖರ್ಚು ಮಾಡಲಾಗಿದ್ದು, ಒಟ್ಟಾರೆ ಇಡೀ ರಾಜ್ಯದಲ್ಲಿ ಸುಮಾರು 150 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಲಾಗಿದೆ.

ಇದನ್ನೂ ಒದಿ: Naatu Naatu: ನಾಟು ನಾಟು ಹಾಡನ್ನು ಗೂಗಲ್‌ನಲ್ಲಿ ಹುಡುಕಿದವರ ಸಂಖ್ಯೆಯಲ್ಲಿ ಶೇ.1105 ಏರಿಕೆ!

ಗ್ರಾಪಂಗಳಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದ ಅವಧಿಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ಯೋಜನೆ ಅನುಷ್ಠಾನಗೊಂಡಿದೆ. ಇದಲ್ಲದೆ ಎಲ್ಲ ಮುಕ್ತಾಯಗೊಳ್ಳದ ಯೋಜನೆಗಳನ್ನು ಬದಿಗಿಟ್ಟು, ಪ್ರಥಮಾದ್ಯತೆಯಲ್ಲಿ ಸೋಲಾರ್ ಗ್ರಿಡ್ ಅಳವಡಿಕೆ ಕಾಮಗಾರಿ ಅನುಷ್ಠಾನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚಿಸಿತ್ತು. ಅಂದಿನ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ರಾಜ್ಯದ ಎಲ್ಲ ಜಿಪಂ ಸಿಇಒಗಳಿಗೆ ಈ ಕುರಿತು ನಿರ್ದೇಶನ ನೀಡಿದ್ದರು. ಗ್ರಾಪಂಗಳಿಗೆ ಚುನಾವಣೆ ನಡೆಯುವ ಪೂರ್ವದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಹಣ ಎತ್ತುವ ಉದ್ದೇಶಕ್ಕಾಗಿ ನಡೆದಿತ್ತೇ? ತರಾತುರಿಯ ಯೋಜನೆ ಅನುಷ್ಠಾನ ಮಾಡಲಾಯಿತಾ ಎಂಬ ಪ್ರಶ್ನೆ ಎದ್ದಿದೆ.

ಲೋಕಾಯುಕ್ತದಲ್ಲಿ ದಾಖಲಾಯ್ತು ದೂರು

ಭದ್ರಾವತಿಯ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಅವರಿಂದ ಮಾ.6 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಅವ್ಯವಹಾರದ ಶಂಕೆ ವ್ಯಕ್ತಪಡಿಸಿ, ತನಿಖೆಗೆ ಮನವಿ ಮಾಡಿಕೊಂಡಿದ್ದು, ಕಳಪೆ ಗುಣಮಟ್ಟದ ಸಾಮಗ್ರಿ ಅಳವಡಿಕೆ ಮಾಡಲಾಗಿದೆ. ಟೆಂಡರ್‌ನಲ್ಲಿ ಕಾಣಿಸಿದಂತೆ ಸೋಲಾರ್ ಪ್ಯಾನೆಲ್, ಬ್ಯಾಟರಿ, ನೆಟ್ ಮೀಟರಿಂಗ್ (Power Plants) ಮಾಡಿಲ್ಲ. ಇದುವರೆಗೂ ಇದರ ನಿರ್ವಹಣೆ ಆಗುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಸ್ತುವಾರಿಯಲ್ಲಿ ಈ ಕಾಮಗಾರಿ ನಡೆದಿದ್ದು, ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ನೇರ ಹೊಣೆ ಎಂದು ದೂರುದಾರ ಆರೋಪಿಸಿದ್ದಾರೆ.

ಇದನ್ನೂ ಓದಿ: Chewing Gum : ಚ್ಯೂಯಿಂಗ್‌ ಗಮ್‌ ನುಂಗಿದಿರೇ? ಹೆದರಬೇಡಿ, ಜೀವ ಹೋಗುವುದಿಲ್ಲ!

ಒಟ್ಟಿನಲ್ಲಿ ರಾಜ್ಯದಲ್ಲೇ ಗುತ್ತಿಗೆದಾರರಿದ್ದರೂ ಹೊರ ರಾಜ್ಯದವರಿಗೆ ಮಣೆ ಹಾಕಿರುವುದು ಭ್ರಷ್ಟಾಚಾರದ ವಾಸನೆ ಹೊಡೆಯಲು ಪ್ರಮುಖ ಕಾರಣವಾಗಿದ್ದು, ಅದರಲ್ಲೂ, ದುಪ್ಪಟ್ಟು ದರದಲ್ಲಿ ಗುತ್ತಿಗೆ ನೀಡಿರುವುದು ಮತ್ತು ತರಾತುರಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿರುವುದು ಹಲವಾರು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಲೋಕಾಯುಕ್ತ ತನಿಖೆಯಿಂದ ಈ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಸಂಸತ್‌ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಕರಡಿ ರಾಜೀನಾಮೆ; ನಾಳೆ ಕಾಂಗ್ರೆಸ್‌ ಸೇರ್ಪಡೆ?

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಬಂಡಾಯದ ಕಹಳೆ ಊದಿದ್ದರು. ಆದರೆ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಮಾಡಿದ್ದರು. ಆದರೆ, ಒಳಗೊಳಗೇ ಕುದಿಯುತ್ತಿದ್ದ ಸಂಗಣ್ಣ ಕರಡಿ ಕೊನೆಗೂ ಕಾಂಗ್ರೆಸ್‌ ಕದ ತಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಂಸತ್‌ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆ ಇದೆ.

VISTARANEWS.COM


on

Lok Sabha Election 2024 Sanganna Karadi resigns from primary membership of BJP
Koo

ಕೊಪ್ಪಳ: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ (Sanganna Karadi) ಅವರು ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ (CM Siddaramaiah) ಸಮ್ಮುಖದಲ್ಲಿ ಕಾಂಗ್ರೆಸ್‌ (Congress Karnataka) ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಬಂಡಾಯದ ಕಹಳೆ ಊದಿದ್ದರು. ಆದರೆ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಮಾಡಿದ್ದರು. ಅಲ್ಲದೆ, ಅವರಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಭರವಸೆಯನ್ನೂ ನೀಡಲಾಗಿತ್ತು. ಕೊನೆಗೆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವುದಾಗಿ ಸಂಗಣ್ಣ ಕರಡಿ ಸಹ ಒಪ್ಪಿಕೊಂಡಿದ್ದರು.

ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎಂದು ಅಂದುಕೊಳ್ಳುವಷ್ಟರಲ್ಲಿ ಸಂಗಣ್ಣ ಕರಡಿ ತಮ್ಮ ಮನಸ್ಸನ್ನು ಬದಲಾಯಿಸಿದ್ದರು. ಕೆಲವು ಕಾಂಗ್ರೆಸ್‌ ಮುಖಂಡರು ಅವರನ್ನು ಸಂಪರ್ಕ ಮಾಡಿದ್ದರು. ಈ ವೇಳೆ ಕೆಲವು ಸುತ್ತಿನ ಚರ್ಚೆಗಳು ಸಹ ನಡೆದಿವೆ. ಹೀಗಾಗಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ತಮ್ಮ ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಲೋಕಸಭಾಧ್ಯಕ್ಷರಿಗೆ ಇ- ಮೇಲ್ ಮೂಲಕ ರಾಜಿನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ಹತ್ತು ವರ್ಷದಿಂದ ಲೋಕಸಭಾ ಸದಸ್ಯರಾಗಿದ್ದ ಸಂಗಣ್ಣ ಕರಡಿ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು. ಆದರೆ, ಬಿಜೆಪಿಯೊಂದಿಗಿನ ತಮ್ಮ ಹಲವು ವರ್ಷಗಳ ಸಂಬಂಧವನ್ನು ಕಡಿದುಕೊಂಡಿದ್ದು, ಈಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

ಇದರ ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ಸಂಗಣ್ಣ ಕರಡಿ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇ-ಮೇಲ್ ಮೂಲಕ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ?

ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಸಂಬಂಧ ಕೆಲವು ಸುತ್ತಿನ ಮಾತುಕತೆ ಸಹ ನಡೆದಿವೆ ಎನ್ನಲಾಗಿದೆ. ಅಲ್ಲದೆ, ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಇರುವುದಕ್ಕೆ ಮುನಿಸಿಕೊಂಡಿರುವ ಕರಡಿಯನ್ನು ಪಕ್ಷಕ್ಕೆ ಸೆಳೆದರೆ ಲಾಭವಾಗುತ್ತದೆ ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ಹಾಕಿಕೊಂಡಿತ್ತು. ಹೀಗಾಗಿ ನಿರಂತರವಾಗಿ ಸಂಪರ್ಕ ಸಾಧಿಸಿ ಕರಡಿಯನ್ನು ಕಾಂಗ್ರೆಸ್‌ನತ್ತ ಸೆಳೆಯುವಲ್ಲಿ ಯಶ ಕಾಣಲಾಗಿದೆ ಎಂದೇ ಹೇಳಲಾಗುತ್ತಿದೆ. ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಲಿರುವ ಸಂಗಣ್ಣ ಕರಡಿ, ತಮ್ಮ ಕೆಲವು ಷರತ್ತುಗಳನ್ನು ಇಡಲಿದ್ದಾರೆ. ಇದಕ್ಕೆ ಅವರು ಒಪ್ಪಿದಲ್ಲಿ ಕೂಡಲೇ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ವಿಧಾನಸಭೆ ಚುನಾವಣೆಯಲ್ಲಿ ಸೊಸೆಗೆ ಟಿಕೆಟ್‌

ಇನ್ನು ಕಳೆದ ವಿಧಾನಸಭಾ ಚುನಾವಣೆ ವೇಳೆ ಸಂಗಣ್ಣ ಕರಡಿ ಸೊಸೆ ಮಂಜುಳಾ ಅಮರೇಶ್ ಸ್ಪರ್ಧೆ ಮಾಡಿದ್ದರು. ಇವರನ್ನೇ ಕಣಕ್ಕಿಳಸಬೇಕು ಎಂದು ಸಂಗಣ್ಣ ಕರಡಿ ಪಟ್ಟು ಹಿಡಿದಿದ್ದರು. ಕೊನೆಗೆ ಇವರ ಒತ್ತಡಕ್ಕೆ ಬಿಜೆಪಿ ಹೈಕಮಾಂಡ್‌ ಮಣಿದಿತ್ತು. ಆದರೆ, ಚುನಾವಣೆಯಲ್ಲಿ ಮಂಜುಳಾ ಅವರು ಸೋಲು ಕಂಡಿದ್ದರು. ಆದರೆ, ಸಂಗಣ್ಣ ಕರಡಿ ಅವರಿಗೆ ಕೊಪ್ಪಳ ಭಾಗದಲ್ಲಿ ಒಳ್ಳೆಯ ಹಿಡಿತವಿದೆ. ಈ ಹಿನ್ನೆಲೆಯಲ್ಲಿ ಅವರ ಕಾಂಗ್ರೆಸ್‌ ಸೇರ್ಪಡೆ ಹಿಂದೆ ತಂತ್ರಗಾರಿಕೆ ಅಡಗಿದೆ ಎನ್ನಲಾಗಿದೆ.

Continue Reading

ತುಮಕೂರು

Lok Sabha Election 2024: ಚಿತ್ರದುರ್ಗದ ಸರ್ವತೋಮುಖ ಅಭಿವೃದ್ಧಿಗಾಗಿ ಕಾರಜೋಳಗೆ ಬೆಂಬಲಿಸಲು ಮನವಿ

Lok Sabha Election 2024: ಶಿರಾ ನಗರದಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ, ಬಳಿಕ ಮತಪ್ರಚಾರ ನಡೆಸಿದರು.

VISTARANEWS.COM


on

BJP and JDS leaders Meeting in shira, Support Govinda Karajola for all round development of Chitradurga says Umesh Karajola
Koo

ಶಿರಾ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ (Lok Sabha Election 2024) ಸರ್ವತೋಮುಖ ಅಭಿವೃದ್ಧಿಗೆ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಅತ್ಯಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ತಿಳಿಸಿದರು.

ಶಿರಾ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರನ್ನು ಭೇಟಿ ಮಾಡಿ, ಮತಪ್ರಚಾರ ನಡೆಸಿ, ಬಳಿಕ ಅವರು ಮಾತನಾಡಿದರು.

ಗೋವಿಂದ ಕಾರಜೋಳ ಅವರು ಮುಧೋಳ ಕ್ಷೇತ್ರದಲ್ಲಿ ಶಾಸಕರಾಗಿ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಳೆಯನ್ನೇ ಹರಿಸಿ, ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಪಡಿಸುವ ಸಂಕಲ್ಪ ಹೊಂದಿದ್ದಾರೆ ಎಂದರು.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಗೋವಿಂದ ಕಾರಜೋಳ ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಬೆಂಬಲ ಸಹ ಬಿಜೆಪಿಗೆ ದೊರಕಿದ್ದು ಆನೆ ಬಲ ಬಂದಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ಜನಪರ ಯೋಜನೆಗಳಿಗೆ ಸರಿಸಾಟಿಯೇ ಇಲ್ಲ, ಜನರೇ ಅವುಗಳನ್ನು ಮೆಚ್ಚಿಕೊಂಡಿದ್ದಾರೆ. ಚಿತ್ರದುರ್ಗ ಜನತೆ ಈ ಬಾರಿ ಗೋವಿಂದ ಕಾರಜೋಳರಿಗೆ ಒಂದು ಅವಕಾಶ ನೀಡಿ, ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಈ ಸಂದರ್ಭದಲ್ಲಿ ಮುಖಂಡರಾದ ಸತ್ಯಪ್ರಕಾಶ್, ಉಗ್ರೇಶ್, ಎಸ್.ಆರ್ ಗೌಡ್ರು, ಚಿಕ್ಕಣ್ಣ, ಗಿರಿಧರ್ , ಮಂಜಣ್ಣ, ಚಂಗಾವರ ಮಾರಣ್ಣ, ನರಸಿಂಹರಾಜು, ರಂಗನಾಥ, ನಟರಾಜ, ಕೃಷ್ಣಮೂರ್ತಿ, ಶಿವಕುಮಾರ ಬರಗೂರು, ಪ್ರಕಾಶ್ ಮುದ್ದರಾಜು, ಲಕ್ಷ್ಮೀನಾರಾಯಣಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Continue Reading

ಕಲಬುರಗಿ

Kalaburagi News: ಅಫಜಲಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಎಸ್.ಪಾಟೀಲ್‌

Kalaburagi News: ಅಫಜಲಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನ್ಯಾಯವಾದಿ ಎಸ್.ಎಸ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

VISTARANEWS.COM


on

S S Patil as the new president of Afazalpur Taluk Bar Association
Koo

ಅಫಜಲಪುರ: ತಾಲೂಕು ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನ್ಯಾಯವಾದಿ ಎಸ್.ಎಸ್. ಪಾಟೀಲ್ ಅವಿರೋಧವಾಗಿ (Kalaburagi News) ಆಯ್ಕೆಯಾದರು.

ಪಟ್ಟಣದ ವಕೀಲರ ಸಂಘದ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಉಮೇದುವಾರರಾಗಿ ಎಸ್.ಎಸ್ ಪಾಟೀಲರನ್ನು ಹೊರತುಪಡಿಸಿ ಉಳಿದ ಯಾವುದೇ ಆಕಾಂಕ್ಷಿಗಳು ನಾಮಪತ್ರ ಸಲ್ಲಿಕೆ ಮಾಡದೆ ಇರುವುದರಿಂದ ಎಸ್.ಎಸ್. ಪಾಟೀಲ್ ಅವರನ್ನು ತಾಲೂಕಿನ ವಕೀಲರ ಸಂಘಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಶಂಕರರಾವ ಜಿ. ಹುಲ್ಲೂರ ಘೋಷಿಸಿದರು ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿ ದತ್ತು ಪೂಜಾರಿ ಕಾರ್ಯ ನಿರ್ವಹಿಸಿದರು.

ಇದನ್ನೂ ಓದಿ: Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

ನೂತನವಾಗಿ ಆಯ್ಕೆಯಾದ ಎಸ್.ಎಸ್. ಪಾಟೀಲ್ ಮಾತನಾಡಿ, ಸಂಘದ ಎಲ್ಲ ಹಿರಿಯ ವಕೀಲರ ಸಲಹೆ, ಸೂಚನೆ, ಮಾರ್ಗದರ್ಶನ ಪಡೆದು ಸಂಘದ ಏಳಿಗೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಹೀಗಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದರು.

ನಿಕಟಪೂರ್ವ ಅಧ್ಯಕ್ಷ ಎಂ.ಎಲ್. ಪಟೇಲ್ ಬಳೂಂಡಗಿ ಮಾತನಾಡಿದರು.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಈ ಸಂದರ್ಭದಲ್ಲಿ ವಕೀಲರಾದ ಶರದ್ ಪೂಜಾರಿ, ಬಿ.ಎಸ್. ಧಾನಮ್ಮಗುಡಿ, ಎಫ್.ಎಂ. ಇನಾಮದಾರ್, ಕೆ.ಜಿ ಪೂಜಾರಿ, ಡಿ.ಡಿ ದೇಶಪಾಂಡೆ, ಎಸ್.ಜೆ ಗುತ್ತೇದಾರ್, ವಾಸಿಮ್ ಜಾಗೀರದಾರ್, ಸುಧೀರ ಹತ್ತಿ, ಸಿ.ಎಸ್ ಹಿರೇಮಠ, ಅರ್ಜುನ ಕೆರೂರ, ಮಂಜುನಾಥ ಕೊಳ್ಳಿ, ಎಂ.ಎಸ್ ಪಾಟೀಲ್, ರಾಜೇಂದ್ರ ಸರದಾರ, ಅನಿತಾ ದೊಡ್ಮನಿ, ಮಹಿಬೂಬಿ ಪಟೇಲ್, ಸುಪ್ರಿಯಾ ಅಂಕಲಗಿ, ಪದ್ಮರಾಜ ಪೂಜಾರಿ, ಪ್ರಶಾಂತ ಪಾಟೀಲ, ಎಸ್.ಟಿ ರಾಠೋಡ, ಸಿದ್ಧರಾಮ ಇಸ್ಪೂರ, ಅನೀಲ ಜಮಾದಾರ, ಮಂಜುನಾಥ ಧರಿಗೊಂಡ, ರೇವಣಸಿದ್ಧ ಹೊಳ್ಳಿಕೇರಿ ಸೇರಿದಂತೆ ಅನೇಕ ವಕೀಲರು ಉಪಸ್ಥಿತರಿದ್ದರು.

Continue Reading

ಹುಬ್ಬಳ್ಳಿ

Lok Sabha Election 2024: ಮೋದಿ ನೇತೃತ್ವದಲ್ಲಿ ಭಾರತ ವಿಶ್ವದ ಹಿರಿಯಣ್ಣ ಆಗಲಿದೆ: ಪ್ರಲ್ಹಾದ್‌ ಜೋಶಿ

Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ದಶಕದಲ್ಲಿ ಭಾರತ ಅಭೂತಪೂರ್ವ ಅಭಿವೃದ್ಧಿ ಸಾಧಿಸಿದ್ದು, ಮೋದಿಯವರ ಸಮರ್ಥ ನಾಯಕತ್ವ ಭಾರತದ ಅಭಿವೃದ್ಧಿಯ ಪಥವನ್ನೇ ಬದಲಿಸಿತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

union Minister Pralhad joshi statement in hubli
Koo

ಹುಬ್ಬಳ್ಳಿ: ಮುಂಬರುವ ದಿನಗಳಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ವಿಶ್ವದ ಹಿರಿಯಣ್ಣನಾಗಿ ಜಗತ್ತನ್ನೇ ಮುನ್ನಡೆಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ಹೇಳಿದರು.

ಮಂಗಳವಾರ ನಡೆದ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದ ಸವಿತಾ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವದಲ್ಲೇ ಭಾರತ ನಂಬರ್ ಒನ್ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ದಶಕದಲ್ಲಿ ಭಾರತ ಅಭೂತಪೂರ್ವ ಅಭಿವೃದ್ಧಿ ಸಾಧಿಸಿದೆ. ಮೋದಿಯವರ ಸಮರ್ಥ ನಾಯಕತ್ವ ಭಾರತದ ಅಭಿವೃದ್ಧಿಯ ಪಥವನ್ನೇ ಬದಲಿಸಿತು ಎಂದು ಹೇಳಿದರು.

ಮುಂಬರುವ ದಿನಗಳಲ್ಲೂ ಭಾರತದ ಅಭಿವೃದ್ಧಿಯ ನಾಗಲೋಟ ಹೀಗೇ ಸಾಗಬೇಕು. ಈ ಮಹತ್ಕಾರ್ಯಕ್ಕಾಗಿ ಮತ್ತೆ ಮೋದಿ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಬೇಕಿದ್ದು, ಈ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿ ಗೆಲುವಿಗೆ ಶ್ರಮಿಸಬೇಕಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಸಂಜಯ್ ಕಪಟ್ಕರ್, ಕೃಷ್ಣ ಉಪ್ಪೇರ್, ರಘುನಾಥ ನಾರಾಯಣದಾಸ, ಮೋಹನ ಗೋಲಿ, ಬುಚ್ಚಣ್ಣ ಮುಷ್ಟಿಪಲ್ಲೆ, ಮಂಜು ಬಿಜವಾಡ, ಕೃಷ್ಣ ಗಣಗಾಳಕರ, ಮಾಸಣ್ಣ ಅಮರಜಿಂತಾ ಹಾಗೂ ಸವಿತಾ ಸಮಾಜದ ಪ್ರಮುಖರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Advertisement
IPL 2024
ಪ್ರಮುಖ ಸುದ್ದಿ8 mins ago

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

Money Guide
ಮನಿ-ಗೈಡ್9 mins ago

Money Guide: ನಿಮ್ಮ ಷೇರಿನಿಂದಲೂ ಸಾಲ ಪಡೆದುಕೊಳ್ಳಬಹುದು; ಹೇಗೆ ಎನ್ನುವ ವಿವರ ಇಲ್ಲಿದೆ

Lok Sabha Election 2024 Sanganna Karadi resigns from primary membership of BJP
Lok Sabha Election 202415 mins ago

Lok Sabha Election 2024: ಸಂಸತ್‌ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಕರಡಿ ರಾಜೀನಾಮೆ; ನಾಳೆ ಕಾಂಗ್ರೆಸ್‌ ಸೇರ್ಪಡೆ?

BJP and JDS leaders Meeting in shira, Support Govinda Karajola for all round development of Chitradurga says Umesh Karajola
ತುಮಕೂರು15 mins ago

Lok Sabha Election 2024: ಚಿತ್ರದುರ್ಗದ ಸರ್ವತೋಮುಖ ಅಭಿವೃದ್ಧಿಗಾಗಿ ಕಾರಜೋಳಗೆ ಬೆಂಬಲಿಸಲು ಮನವಿ

S S Patil as the new president of Afazalpur Taluk Bar Association
ಕಲಬುರಗಿ18 mins ago

Kalaburagi News: ಅಫಜಲಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಎಸ್.ಪಾಟೀಲ್‌

union Minister Pralhad joshi statement in hubli
ಹುಬ್ಬಳ್ಳಿ20 mins ago

Lok Sabha Election 2024: ಮೋದಿ ನೇತೃತ್ವದಲ್ಲಿ ಭಾರತ ವಿಶ್ವದ ಹಿರಿಯಣ್ಣ ಆಗಲಿದೆ: ಪ್ರಲ್ಹಾದ್‌ ಜೋಶಿ

Hardik Pandya
ಕ್ರೀಡೆ39 mins ago

Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

DK Shivakumar attack on HD Kumaraswamy
ಕರ್ನಾಟಕ52 mins ago

DK Shivakumar: ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೊಡುತ್ತೇನೆ: ಡಿ.ಕೆ. ಶಿವಕುಮಾರ್

2nd PUC Exam
ಕರ್ನಾಟಕ1 hour ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಏ.18ರವರೆಗೆ ಅವಕಾಶ

Lok Sabha Election
ದೇಶ1 hour ago

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ15 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌