Site icon Vistara News

Belagavi News: ಹಣಕಾಸು ವಿಚಾರಕ್ಕೆ ಯೋಧನಿಂದಲೇ ಯೋಧನ ಮೇಲೆ ಗುಂಡಿನ ದಾಳಿ

Soldier

ಬೆಳಗಾವಿ: ಹಣಕಾಸಿನ ವಿಚಾರಕ್ಕೆ ಯೋಧನ ಮೇಲೆ ಮತ್ತೊಬ್ಬ ಯೋಧ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯೋಧನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ನಂಜುಂಡಿ

ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಸುತ್ತಿರುವ ಬಸಪ್ಪ ಮೈಲಪ್ಪ ಬಂಬರಗಾ (32) ಗಾಯಾಳು ಯೋಧ. ನಂಜುಂಡಿ ಲಕ್ಷ್ಮಣ ಬೂದಿಹಾಳ (32) ಗುಂಡಿನ ದಾಳಿಗೈದ ಆರೋಪಿ. ಇಬ್ಬರೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಣಕಾಸಿನ ವಿಚಾರಕ್ಕೆ ನಡುವೆ ಗಲಾಟೆಯಾಗಿದೆ. ಈ ವೇಳೆ ಬಸಪ್ಪ ಮೈಲಪ್ಪ ಬಂಬರಗಾ ಮೇಲೆ ನಂಜುಂಡಿ ಲಕ್ಷ್ಮಣ ಬೂದಿಹಾಳ ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಗಾಯಾಳು ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Great robbery: ಅಂಗಡಿಯ ಗೋಡೆಗೆ ರಂಧ್ರ ಕೊರೆದು 25 ಕೋಟಿ ರೂ. ಮೌಲ್ಯದ ಆಭರಣ ದೋಚಿದ ಖತರ್ನಾಕ್ ಕಳ್ಳರು!

ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು

ಕಲಬುರಗಿ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ (Bike Accident).

ಅಂಬಿಕಾ ನಗರದ ಅಲಿ ಅಬ್ಬಾಸ್ ಹಾಗೂ ರೆಹಮತ್ ನಗರದ ಇರ್ಫಾನ್ ಮೃತ ವಿದ್ಯಾರ್ಥಿಗಳು. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಬ್ಬಾಸ್ ಅಲಿ, ಸ್ನೇಹಿತ ಇರ್ಫಾನ್ ಜತೆ ಬೈಕ್‌ನಲ್ಲಿ ಪಾರ್ಟಿಗೆ ಹೊರಟಿದ್ದ. ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು 10ನೇ ತರಗತಿ ಓದುತ್ತಿದ್ದರು. ಸ್ಥಳಕ್ಕೆ ಸಂಚಾರ-2 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!

ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಯುವಕರಿಂದ ಥಳಿತ

ಯಾದಗಿರಿ: ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಥಳಿಸಿರುವ ಘಟನೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಕಬಡ್ಡಿ ಪಂದ್ಯದ ವೇಳೆ ದೈಹಿಕ ಶಿಕ್ಷಕ ಔಟ್ ಎಂದು ತೀರ್ಪು ನೀಡಿದ್ದಕ್ಕೆ ಕೋಪಗೊಂಡು ಯುವಕನೊಬ್ಬ, ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ. ಹೀಗಾಗಿ ಆತನ ಮೇಲೆ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಗಲಾಟೆ ಬಿಡಿಸಲು ಅಧಿಕಾರಿಗಳು, ಸಿಬ್ಬಂದಿ ಹರಸಾಹಸಪಟ್ಟರು.

Exit mobile version