Site icon Vistara News

Lok Sabha Election 2024: ಸೋಮಣ್ಣಗೆ ತುಮಕೂರು ಲೋಕಸಭೆ ಟಿಕೆಟ್; ಗುಟ್ಟು ಬಿಚ್ಚಿಟ್ಟ ಹಾಲಿ ಸಂಸದ

Ex Minister V Somanna and MP GS Basavaraj

#image_title

ತುಮಕೂರು: ಲೋಕಸಭೆ ಚುನಾವಣೆಗೆ (Lok Sabha Election 2024) ವಿವಿಧ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಆದರೆ, ಚುನಾವಣಾ ಕಣದಿಂದ ದೂರವಿರುವುದಾಗಿ ಈ ಹಿಂದೆಯೇ ಬಿಜೆಪಿ ಹಾಲಿ ಸಂಸದ ಜಿ.ಎಸ್. ಬಸವರಾಜು ಅವರು ಘೋಷಿಸಿದ್ದರು. ಹೀಗಾಗಿ ಮಾಜಿ ಸಚಿವ ವಿ.ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಸಂಸದ ಜಿ.ಎಸ್. ಬಸವರಾಜು ಅವರು ಮಾತನಾಡಿರುವ ಆಡಿಯೊ ವೈರಲ್‌ ಆಗಿದೆ.

ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿರುವ ಆಡಿಯೋ ವೈರಲ್‌ ಆಗಿದೆ. ಇದರಲ್ಲಿ ವಿ.ಸೋಮಣ್ಣ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ನೀವು ನಿಲ್ಲಬೇಕು ಎಂದು ವೀರಶೈವ ಸಮಾಜಕ್ಕೆ ಸಂಸದ ಜಿ.ಎಸ್.ಬಸವರಾಜು ಮನವಿ ಮಾಡಿದ್ದಾರೆ.

ಇದನ್ನೂ ಓದಿ | MLC Election: ಕಾಂಗ್ರೆಸ್‌ ಸರ್ಕಾರಕ್ಕೆ 3ನೇ ಸವಾಲು: 3 ಪರಿಷತ್‌ ಸ್ಥಾನಕ್ಕೆ 19 ಆಕಾಂಕ್ಷಿಗಳು, ನಾಲ್ಕೈದು ಬಣಗಳು!

ಸಮಾಜ ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮಲ್ಲೇ ಕಿತ್ತಾಡಿದರೆ ಒದ್ದು ಓಡಿಸುತ್ತಾರೆ. ಆ ಸಮಯ ಕೂಡ ಸನ್ನಿಹಿತವಾಗಿದೆ. ಯಾವಾಗ ಒಗ್ಗಟ್ಟು ಮುರಿಯುತ್ತದೆಯೋ ಆಗ ಏನೇನು ಮಾಡಬೇಕು ಎಂಬುವುದು ಅವರಿಗೆ (ವಿರೋಧ ಪಕ್ಷಗಳಿಗೆ) ಗೊತ್ತಿದೆ. ಕೆಲವೇ ಜನ ಇದ್ದೀರಿ ಒಗ್ಗಟ್ಟಾಗಿರಬೇಕು ಎಂದು ಸಂದೇಶ ನೀಡಿದ್ದಾರೆ.

ನನ್ನ ಅವಧಿ ಮುಗಿಯಿತು, ಈಗ ನನ್ನ ಸೀಟ್ ಸೋಮಣ್ಣಗೆ ಕೊಡುತ್ತಾರೆ. ನಾನು ಚುನಾವಣೆಯಲ್ಲಿ ನಿಲ್ಲಲ್ಲ, ಈ ಬಗ್ಗೆ ದೆಹಲಿಗೆ ಹೋಗಿದ್ದಾಗ ಹಿರಿಯ ನಾಯಕರಿಗೆ ಹೇಳಿದ್ದೇನೆ ಎಂದಿರುವ ಸಂಸದರು, ಮುಂದೆ ಬರುವವರನ್ನು ಉಪಯೋಗಿಸಿಕೊಳ್ಳಿ. 8 ಸಲ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಸಲ ಸೋತಿದ್ದೇನೆ. ಈ ಹಿಂದೆ ನಮ್ಮವರೇ ನನ್ನ ಸೋಲಿಸಿದ್ದರು. ನಾನು ಸೋತರೂ ಒಂದೇ, ಗೆದ್ದರೂ ಒಂದೇ, ಕೆಲಸ ಮಾಡಿಸಿಕೊಂಡು ಬರುತ್ತಿದ್ದೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ | BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

ಸಂಸದ ಜಿ.ಎಸ್‌.ಬಸವರಾಜು ರಾಜಕೀಯ ನಿವೃತ್ತಿ

ತುಮಕೂರು ಕ್ಷೇತ್ರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ವಿರುದ್ಧ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಗೆದ್ದಿದ್ದರು. ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಜನವರಿಯಲ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಕ್ಷೇತ್ರದಿಂದ ಹೊಸ ಈ ಬಾರಿ ಹೊಸ ಅಭ್ಯರ್ಥಿ ಕಣಕ್ಕಿಳಿವುದು ಖಚಿತವಾಗಿದೆ.

ಇದನ್ನೂ ಓದಿ | Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

ಇನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಚಾಮರಾಜನಗರ ಹಾಗೂ ವರುಣ ಕ್ಷೇತ್ರದಲ್ಲಿ ವಿ.ಸೋಮಣ್ಣ ಸ್ಪರ್ಧಿಸಿದ್ದರು. ಆದರೆ, ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ಹೈಕಮಾಂಡ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್‌ ನಾಯಕರ ಮಾತು ಕೇಳಿ ಚಿನ್ನದಂತಹ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಹೋದೆ ಎಂದು ಕಿಡಿಕಾರಿದ್ದರು. ಹೀಗಾಗಿ ಸಮಾಧಾನಪಡಿಸಲು ತುಮಕೂರು ಲೋಕಸಭಾ ಕ್ಷೇತ್ರ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

Exit mobile version