Somanna succeeds in quelling chamarajanagar rebellion Nagashree announces support Karnataka Election 2023 updates Karnataka Election 2023: ಚಾಮರಾಜನಗರ ಬಂಡಾಯ ಶಮನಗೊಳಿಸಿದ ಬಿ.ಎಲ್‌. ಸಂತೋಷ್‌; ಸೋಮಣ್ಣಗೆ ಬೆಂಬಲ ಘೋಷಿಸಿದ ನಾಗಶ್ರೀ - Vistara News

ಕರ್ನಾಟಕ

Karnataka Election 2023: ಚಾಮರಾಜನಗರ ಬಂಡಾಯ ಶಮನಗೊಳಿಸಿದ ಬಿ.ಎಲ್‌. ಸಂತೋಷ್‌; ಸೋಮಣ್ಣಗೆ ಬೆಂಬಲ ಘೋಷಿಸಿದ ನಾಗಶ್ರೀ

Assembly Election: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿ. ಸೋಮಣ್ಣ ಅವರ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಗಳು ಬಂಡಾಯದ ಕಹಳೆ ಊದಿದ್ದರು. ಆದರೆ, ಈಗ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್‌ ಮಧ್ಯ ಪ್ರವೇಶ ಮಾಡಿ ನಾಗಶ್ರೀ ಪ್ರತಾಪ್‌ ಅವರನ್ನು ಸಮಾಧಾನ ಪಡಿಸಿದ್ದಾರೆ.

VISTARANEWS.COM


on

Somanna succeeds in quelling chamarajanagar rebellion Nagashree announces support Karnataka Election 2023 updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಎಲ್ಲ ಪಕ್ಷಗಳಿಗೂ ಬಂಡಾಯದ್ದೇ ಒಂದು ಚಿಂತೆಯಾಗಿದೆ. ಮೂರು ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಅಭ್ಯರ್ಥಿಗಳನ್ನು ಪ್ರಕಟ ಮಾಡುತ್ತಿದ್ದಂತೆ ವಂಚಿತ ಟಿಕೆಟ್‌ ಆಕಾಂಕ್ಷಿಗಳು ಬಂಡಾಯ ಏಳುತ್ತಿದ್ದಾರೆ. ಇದೇ ವೇಳೆ ಚಾಮರಾಜನಗರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಅಲ್ಲಿನ ಪ್ರಮುಖ ಟಿಕೆಟ್‌ ಆಕಾಂಕ್ಷಿಗಳಾದ ನಾಗಶ್ರೀ ಪ್ರತಾಪ್‌ ಹಾಗೂ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆಪ್ತ ಎಂ.ಆರ್. ರುದ್ರೇಶ್‌ ಬಂಡಾಯ ಎದ್ದಿದ್ದರು. ಈಗ ನಾಗಶ್ರೀ ಅವರ ಮನವೊಲಿಸುವಲ್ಲಿ ಸೋಮಣ್ಣ ಯಶಸ್ವಿಯಾಗಿದ್ದಾರೆ.

ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗಶ್ರೀ ಪ್ರತಾಪ್‌ ಅವರು ಪಕ್ಷದ ತೀರ್ಮಾನದಿಂದ ಮುನಿಸಿಕೊಂಡಿದ್ದರು. ಸದ್ಯ ನಾಗಶ್ರೀ ಪ್ರತಾಪ್ ಜತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ನಿಮ್ಮನ್ನು ಗುರುತಿಸುತ್ತದೆ. ಸೂಕ್ತ ಸ್ಥಾನಮಾನಗಳನ್ನು ಕೊಡಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆನ್ನಲಾಗಿದೆ.

ಇದನ್ನೂ ಓದಿ: BJP Karnataka: ಶೆಟ್ಟರ್‌, ಸವದಿ ವಾಪಸಾದರೆ ಸ್ವಾಗತ: ಈ ಹಿಂದೆ ನಾನೂ ಅಕ್ಷಮ್ಯ ಅಪರಾಧ ಮಾಡಿದ್ದೆ ಎಂದ ಬಿ.ಎಸ್‌. ಯಡಿಯೂರಪ್ಪ

ಈ ಹಿನ್ನೆಲೆಯಲ್ಲಿ ಬಂಡಾಯ ಎದ್ದಿದ್ದ ನಾಗಶ್ರೀ ಪ್ರತಾಪ್‌ ತುಸು ಶಾಂತಗೊಂಡಿದ್ದು, ಇದೀಗ ನಾಗಶ್ರೀ ಪ್ರತಾಪ್ ಬೆಂಬಲಿಗರ ಸಭೆ ಕರೆದು ಸೋಮಣ್ಣ ಅವರಿಗೆ ಬೆಂಬಲ ಸೂಚಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ನಾನು ಬಿಜೆಪಿಯಿಂದ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಸಹಜವಾಗಿಯೇ ಟಿಕೆಟ್ ಕೈ ತಪ್ಪಿದಾಗ ನೋವಾಗಿತ್ತು. ಈ ವಿಚಾರವಾಗಿ ಬೆಂಬಲಿಗರು ಅಭಿಪ್ರಾಯ ವ್ಯಕ್ತಪಡಿಸಿದರು. 15 ವರ್ಷದಿಂದ ಕ್ಷೇತ್ರದಲ್ಲಿ ನಮ್ಮ ಶಾಸಕರು ಇಲ್ಲ. ನಮ್ಮದು ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವ ತತ್ವ ಇದೆ. ಈ ಕಾರಣದಿಂದ ನನ್ನ ಬೆಂಬಲಿಗರು ಹಿತೈಷಿಗಳು ಎಲ್ಲರೂ ಸೇರಿ ಈಗ ಪಕ್ಷ ಘೋಷಣೆ ಮಾಡಿರುವ ಅಭ್ಯರ್ಥಿ ವಿ. ಸೋಮಣ್ಣ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಘೋಷಿಸಿದರು.

ಇದನ್ನೂ ಓದಿ: Karnataka Election 2023: ಪಕ್ಷ ಸ್ಥಾನಮಾನ ಕೊಟ್ಟಿದ್ದರೂ ಯಡಿಯೂರಪ್ಪ ಏಕೆ ಕೆಜೆಪಿ ಕಟ್ಟಿದ್ದರು: ಬಿಎಸ್‌ವೈಗೆ ಶೆಟ್ಟರ್‌ ತಿರುಗೇಟು

ಪಕ್ಷ ಯಾವುದೇ ಭರವಸೆ ಕೊಟ್ಟಿಲ್ಲ

ನನಗೆ ಯಾವುದೇ ಭರವಸೆಯನ್ನು ಬಿಜೆಪಿ ವತಿಯಿಂದ ಕೊಟ್ಟಿಲ್ಲ. ಈ ವಿಚಾರವಾಗಿ ಬಿ.ಎಲ್.‌ ಸಂತೋಷ್ ಅವರು ಕರೆ ಮಾಡಿ ಮಾತನಾಡಿದ್ದಾರೆ. ಪಕ್ಷಕ್ಕಾಗಿ ಕೆಲಸ ಮಾಡುವಂತೆ ಅವರು ಕೋರಿಕೊಂಡರು. ನಿನಗೆ ನೋವಾಗಿದೆ ಎಂಬ ವಿಚಾರ ನನಗೆ ಗೊತ್ತಿದೆ. ಸಮಯ ತೆಗೆದುಕೊಂಡು ನಿರ್ಧಾರ ತಿಳಿಸು ಅಂತ ಅವರು ಹೇಳಿದರು. ಅದರಂತೆ ಎರಡು ದಿನದ ಸಮಯಾವಕಾಶ ತೆಗೆದುಕೊಂಡಿದ್ದೆ. ಆ ಬಳಿಕ ನಂತರ ಎಲ್ಲರ ಅಭಿಪ್ರಾಯವನ್ನು ಪಡೆದು ನಾನು ನಿರ್ಧಾರಕ್ಕೆ ಬಂದಿದ್ದೇನೆ‌. ಅದರಂತೆ ನಾನು‌ ಚಾಮರಾಜನಗರ ಅಭ್ಯರ್ಥಿಯಾಗಿರುವ ಸೋಮಣ್ಣ ಅವರ ಪರ ಕೆಲಸ ಮಾಡುತ್ತೇನೆ ಎಂದು ನಾಗಶ್ರೀ ಪ್ರತಾಪ್ ಮಾಧ್ಯಮದವರಿಗೆ ಹೇಳಿಕೆ ನೀಡಿದ್ದಾರೆ. ಇನ್ನು ಸಿಎಂ ಬಿ.ಎಸ್.‌ ಯಡಿಯೂರಪ್ಪ ಆಪ್ತ ಎಂ.ಆರ್. ರುದ್ರೇಶ್‌ ಅವರನ್ನು ಸಮಾಧಾನಪಡಿಸುವ ಕೆಲಸವೊಂದು ಬಾಕಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

RCB vs GT: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore)ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ನಡುವಣ ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore) ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ತವರಿನ ಅಭಿಮಾನಿಗಳು ಕಾತದಿಂದ ಕಾದು ಕುಳಿತಿದ್ದಾರೆ. ಕ್ರಿಕೆಟ್​ ಅಭಿಮಾನಿಗಳಿಗಾಗಿಯೇ ನಮ್ಮ ಮೆಟ್ರೋ(namma metro) ಕೂಡ ವಿಶೇಷ ರೈಲು ಸೇವೆಯನ್ನು ನೀಡಲಿದೆ.

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ಮತ್ತು ಬಿಎಂಟಿಸಿ ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಪೇಪರ್‌ ಟಿಕೆಟ್‌ ಮಾರಾಟ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ (QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

ಮಳೆ ಸಾಧ್ಯತೆ


ಬೆಂಗಳೂರಿನಲ್ಲಿ ಮೇ 4ರ ಸಂಜೆವರೆಗೆ ಮಳೆ ಬರುವ ಮುನ್ಸೂಚನೆ ಇದೆಯಾದರೂ ಆಟವನ್ನೇ ನಿಲ್ಲಿಸುವಷ್ಟು ಜೋರಾಗಿ ಬರುವ ಸಾಧ್ಯತೆ ಇಲ್ಲ. ಸಣ್ಣಗೆ ತುಂತುರು ಮಳೆ ಬರಲೂಬಹುದು. ಹೀಗೆ ಸ್ವಲ್ಪ ಹೊತ್ತು ಮಳೆ ಬಂದರೂ ಬೇಗನೆ ಅದರ ಪರಿಣಾಮಗಳನ್ನು ನಿವಾರಿಸಿ ಆಟಕ್ಕೆ ಅಣಿ ಮಾಡುವ ತಂತ್ರಜ್ಞಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ.

ಇದನ್ನೂ ಓದಿ RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

ಪಾರ್ಕಿಂಗ್​ ವ್ಯವಸ್ಥೆ

ಚಿನ್ನಸ್ವಾಮಿ ಕ್ರೀಡಾಂಗಣದತ್ತ ವಾಹನಗಳ ದಂಡೇ ಬರುವುದರಿಂದ ಕೆಲವು ಕಡೆ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಇನ್ನು ಕೆಲವು ಕಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಮೇ 4ರಂದು ಸಂಜೆ ನಾಲ್ಕರಿಂದ ರಾತ್ರಿ 11ರವರೆಗಿನ ಮಾರ್ಗಸೂಚಿ ಇಲ್ಲಿದೆ.

ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿರ್ಬಂಧ

ಕ್ವೀನ್ಸ್‌ ರೋಡ್‌, ಎಂಜಿ ರೋಡ್‌ನಿಂದ ಕಬ್ಬನ್‌ ಪಾರ್ಕ್‌ ರಸ್ತೆ, ರಾಜಭವನ್‌ ರೋಡ್‌-ಸೆಂಟ್ರಲ್‌ ಸ್ಟ್ರೀಟ್‌ ರೋಡ್‌, ಕಬ್ಬನ್‌ ರಸ್ತೆ, ಸೈಂಟ್‌ ಮಾರ್ಕ್‌ ರಸ್ತೆ, ಮ್ಯೂಸಿಯಂ ರೋಡ್‌, ಕಸ್ತೂರ್ಬಾ ರೋಡ್‌, ಅಂಬೇಡ್ಕರ್‌ ವೀದಿ, ಟ್ರಿನಿಟಿ, ಲಾವೆಲ್ಲೆ ರೋಡ್‌, ವಿಠಲ್‌ ಮಲ್ಯ ರೋಡ್‌, ನೃಪತುಂಗ ರಸ್ತೆ

ಪಾರ್ಕಿಂಗ್‌ಗೆ ಎಲ್ಲೆಲ್ಲಿ ವ್ಯವಸ್ಥೆ

ಕಿಂಗ್ಸ್‌ ರೋಡ್‌, ಯುಬಿ ಸಿಟಿ ಪಾರ್ಕಿಂಗ್‌, ಬಿಎಂಟಿಸಿ ಟಿಟಿಎಂಸಿ ಶಿವಾಜಿ ನಗರ್‌ ಫಸ್ಟ್‌ ಫ್ಲೋರ್‌, ಹಳೆ ಕೆಜಿಐಡಿ ಬಿಲ್ಡಿಂಗ್‌, ಮೆಟ್ರೋ ಲೇನ್‌ ಕೆಳಗಿನ ಬಿಆರ್‌ವಿ ಗ್ರೌಂಡ್‌

Continue Reading

ಬೆಂಗಳೂರು

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Kidnap Case: ಆರ್ಮಿ ಆಫೀಸರ್‌ ಮಗನ ಬಳಿ ಸಿಕ್ಕಾಪಟ್ಟೆ ಹಣ ಇರುತ್ತೆ ಎಂದು ಭಾವಿಸಿದ ಕಿಡಿಗೇಡಿ ಗೆಳೆಯರು ಗಾಂಜಾ ಮತ್ತಲ್ಲಿ ವಿದ್ಯಾರ್ಥಿಯನ್ನು ಅಪಹರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

VISTARANEWS.COM


on

By

Kidnap case in Bengaluru
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಣಕ್ಕಾಗಿ ಯುವಕನೊಬ್ಬ ತನ್ನ ಸಹಚರರೊಂದಿಗೆ ಸೇರಿ ಗೆಳೆಯನನ್ನೇ ಕಿಡ್ನ್ಯಾಪ್‌ ಮಾಡಿ (Kidnap Case) ಜೈಲುಪಾಲಾಗಿದ್ದಾನೆ. ಕೇರಳ ಮೂಲದ ಸಾಹೀಲ್ ಸಲೀಂ ಕಿಡ್ನ್ಯಾಪ್‌ ಆದವನು. ಪ್ರಮುಖ ಆರೋಪಿ ಮುಬಾರಕ್‌ ಎಂಬಾತ ತನ್ನ ಸ್ನೇಹಿತ ಸುಂದರ್‌ ಜತೆಗೆ ಮತ್ತೊಂದಿಷ್ಟು ಜನರೊಟ್ಟಿಗೆ ಪ್ಲ್ಯಾನ್‌ ಮಾಡಿ ಸಾಹೀಲ್‌ನನ್ನು ಕಿಡ್ನ್ಯಾಪ್‌ ಮಾಡಿದ್ದರು.

ಪದವಿ ವ್ಯಾಸಂಗ ಮಾಡುತ್ತಿದ್ದ ಸಾಹೀಲ್‌ ಬೆಂಗಳೂರಿನ ಸಂಪಿಗೆಹಳ್ಳಿಯ ಪಿಜಿವೊಂದರಲ್ಲಿ ವಾಸವಿದ್ದ. ಮುಬಾರಕ್ ಹಾಗೂ ಸಾಹೀಲ್ ಇಬ್ಬರು ಪಿಯುಸಿಯಲ್ಲಿ ಕ್ಲಾಸ್ ಮೇಟ್ಸ್ ಆಗಿದ್ದರು.

ಸಾಹೀಲ್ ಆರ್ಮಿ ಆಫೀಸರ್‌ ಮಗ.. ಆತನ ಬಳಿ ಸಿಕ್ಕಾಪಟ್ಟೆ ಹಣ ಇರುತ್ತೆ ಎಂದು ಕಿಡ್ನ್ಯಾಪ್‌ ಪ್ಲಾನ್ ಮಾಡಿದ್ದ. ಪಿಜಿಯಲ್ಲಿದ್ದ ಸಾಹೀಲ್‌ನನ್ನು ಕರೆಸಿ ಶೆಡ್‌ವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಈ ವೇಳೆ ಸಾಹೀಲ್‌ನಿಂದ 25 ಸಾವಿರ ರೂ. ಹಣ ಪಡೆದು ಬಿಟ್ಟು ಕಳಿಸಿದ್ದರು. ಇದರಿಂದ ಹೆದರಿದ ಸಾಹೀಲ್‌ ಕೇರಳ ಸೇರಿದ್ದ.

ಮಗ ಪಿಜಿ ತೊರೆದು ಮನೆ ಸೇರಿದ್ದು ಪೋಷಕರಿಗೆ ಅನುಮಾನ ಮೂಡಿಸಿತ್ತು. ಹೀಗಾಗಿ ವಿಚಾರಿಸಿದಾಗ ಸಾಹಿಲ್‌ ತನ್ನ ತಂದೆ ಬಳಿ ನಡೆದಿದ್ದನ್ನು ತಿಳಿಸಿದ್ದ. ಸದ್ಯ ಸಾಹೀಲ್ ತಂದೆ ನೀಡಿದ ದೂರಿನನ್ವಯ ಸಂಪಿಗೆಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಿಗಾಗಿ ಬಲೆಬೀಸಿದ್ದಾರೆ.

ಇದನ್ನೂ ಓದಿ: Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ

ಯಾದಗಿರಿ: ಹಾಡಹಗಲೆ ದುಷ್ಕರ್ಮಿಯೊಬ್ಬ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು (kidnap case) ಯತ್ನಿಸಿದ್ದಾರೆ. ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ (Crime News) ನಡೆದಿದೆ. 6 ವರ್ಷದ ಸಂಜನಾ ಎಂಬಾಕೆ ಎಂದಿನಂತೆ ಸ್ನೇಹಿತೆ ಮನೆಯಿಂದ ಟ್ಯೂಶನ್‌ಗೆ ತೆರಳುತ್ತಿದ್ದಳು.

ಈ ವೇಳೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೊರ್ವ ಬಾಲಕಿಯ ಕಣ್ಣಿಗೆ ಸ್ಪ್ರೇ ಮಾಡಿದ್ದಾನೆ. ಬಳಿಕ ಅಪಹರಿಸಲು ಯತ್ನಿಸಿದಾಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಬಂದಿದ್ದಾಳೆ. ಸದ್ಯ ಪೋಷಕರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains: ಬೆಂಗಳೂರು ಸುತ್ತಮುತ್ತ ಗಾಳಿ ಜತೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ದೇವಸ್ಥಾನ ಜೀರ್ಣೋದ್ಧಾರದಲ್ಲಿ ಊಟ ಮಾಡುತ್ತಿದ್ದಾಗ ದಿಢೀರ್‌ ಮಳೆಯಿಂದ ಜನರು ಊಟ ಬಿಟ್ಟು ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಕೆಲವೆಡೆ ಮಳೆ ಅನಾಹುತಗಳು ಸಂಭವಿಸಿವೆ.

VISTARANEWS.COM


on

By

Bengaluru Rains
Koo

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

Bengaluru Rains

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ

ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಮಂಡ್ಯ ಜನರು ಖುಷಿಯಾಗಿದ್ದಾರೆ. ಭಾರಿ ಶಬ್ಧದೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮೈಸೂರಿನಲ್ಲಿ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣ ಸಿಂಚನವಾಗಿದೆ. ತಿ.ನರಸೀಪುರ ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಜೋರು ಗಾಳಿ ನಡುವೆ ಆಲಿಕಲ್ಲು ಮಳೆಯಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

Prajwal Revanna Case: ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ. ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದ್ದಾರೆ.

VISTARANEWS.COM


on

Prajwal Revanna Case Who leaked the pen drive Devaraje Gowda gives evidence to SIT
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ಮಹತ್ವದ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆಯೂ ಹೇಳಿಕೆ ನೀಡಿದ್ದೇನೆ. ಇದನ್ನು ಇಲ್ಲಿ ಹೇಳಲಾಗುವುದಿಲ್ಲ. ಆದರೆ, ಇನ್ನೊಂದು ವಾರದಲ್ಲಿ ಎಲ್ಲವೂ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.

ಎಸ್‌ಐಟಿ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದರು. ಅದರಂತೆ ಇಂದು ಹಾಜರಾಗಿ ನಾನು ಎಲ್ಲ ಸಂಗತಿಗಳನ್ನು ಹೇಳಿದ್ದೇನೆ. ಈ ವಿಡಿಯೊಗಳನ್ನು ವೈರಲ್ ಮಾಡಿದವರು ಯಾರು ಎನ್ನುವ ಮಾಹಿತಿ ನನಗೆ ಗೊತ್ತಿದೆ. ಅದನ್ನು ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದೇನೆ. ಯಾರು ಎಂಬುದನ್ನು ನಾನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಎಚ್‌ಡಿಕೆಯಿಂದ ಮಹತ್ವದ ನಿರ್ಧಾರ

ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ ಎಂದು ದೇವರಾಜೇಗೌಡ ತಿಳಿಸಿದರು.

ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದರು.

ರಾಜಕೀಯಕ್ಕಾಗಿಯೇ ಇದೆಲ್ಲ ನಡೆಯುತ್ತಿದೆ

ಈ ಎಲ್ಲ ಬೆಳವಣಿಗೆಗಳು ರಾಜಕೀಯ ಕುತಂತ್ರದಿಂದ ನಡೆದಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಇದೆಲ್ಲ ನಡೆಯುತ್ತಿರುವುದೇ ರಾಜಕೀಯವಾಗಿ. ಎಲ್ಲ ದಿಕ್ಕಿನಲ್ಲಿಯೂ ತನಿಖೆ ನಡೆಸುತ್ತಿರುವುದು ಖುಷಿಯನ್ನು ತಂದಿದೆ. ಯಾರೂ ಈ ತನಿಖೆಯಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಅನ್ನಿಸುತ್ತಿಲ್ಲ ಎಂದು ಹೇಳಿದರು.

ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌?

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ನೇರವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಭಯಾನಕ ಸತ್ಯಗಳು ಹೊರಬಂದಿದ್ದು, ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಈಗ ಕೇಳಿಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಜೆಡಿಎಸ್‌ ನಾಯಕಿ, ಸಂತ್ರಸ್ತೆ ದೂರಿನಲ್ಲಿ ತನಗಾದ ಅನ್ಯಾಯವನ್ನು ಹಾಗೂ ಅತ್ಯಾಚಾರದ ಸಂಗತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಮಾತಿಗೆ ಹೋದಾಗ ರೇಪ್‌?

ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಗಂಡನ ಬಗ್ಗೆ ಬೆದರಿಸಿ ಬಲಾತ್ಕಾರ

ದೈಹಿಕ ಸಂಪರ್ಕ ಬೆಳೆಸಲು ಪ್ರಜ್ವಲ್‌ ಮುಂದಾಗುತ್ತಿದ್ದಂತೆ ನಾನು ನಿರಾಕರಣೆ ಮಾಡಿದೆ. ಆಗ “ನಿನ್ನ ಗಂಡನನ್ನು ನಾನು ಬಿಡಲ್ಲ” ಎಂದು ಹೆದರಿಸಿ ದೌರ್ಜನ್ಯ ನಡೆಸಿದರು ಎಂದು ಎಸ್‌ಐಟಿಗೆ ಸಂತ್ರಸ್ತೆ ನೀಡಿದ್ದ ದೂರು ಆಧಾರದಲ್ಲಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್‌) ಹಾಗೂ ಐಟಿ ಆ್ಯಕ್ಟ್‌ನಲ್ಲಿ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ. ಹೇಗೆಲ್ಲ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

ರೇಪ್‌ ಮತ್ತು ಚಿತ್ರೀಕರಣ ಆರೋಪ

ತಮ್ಮ ಮೇಲೆ ಬಲಾತ್ಕಾರ ಮಾಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಬಾಯಿ ಬಿಟ್ಟರೆ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನ ವಿಡಿಯೊವನ್ನು ಬಿಡುತ್ತೇನೆ ಎಂಧು ಬೆದರಿಕೆ ಒಡ್ಡಿದ್ದಾರೆ. ನಾನು ಕರೆದಾಗೆಲ್ಲ ನೀನು ಬರಬೇಕು. ಇಲ್ಲದಿದ್ದರೆ ನನ್ನ ಬಳಿ ಇರುವ ವಿಡಿಯೊವನ್ನು ಹರಿಬಿಡುತ್ತೇನೆ ಎಂದು ಬೆದರಿಸಿ ಕಳುಹಿಸಿದ್ದಾರೆ. ಇಷ್ಟೇ ಅಲ್ಲದೆ, ಪದೇ ಪದೆ ವಿಡಿಯೊ ಕಾಲ್‌ ಮಾಡಿ ಬೆತ್ತಲೆಯಾಗು ತಾನು ನೋಡಬೇಕು ಎಂದು ಕಿರುಕುಳ ಕೊಟ್ಟು ನಗ್ನತೆಯನ್ನು ನೋಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌ಅಲ್ಲದೆ, ಪದೇ ಪದೆ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿ ಬಲಾತ್ಕಾರ ಮಾಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Continue Reading
Advertisement
RCB vs GT
ಕ್ರೀಡೆ8 mins ago

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

Kidnap case in Bengaluru
ಬೆಂಗಳೂರು10 mins ago

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Costly wedding gift
ವಾಣಿಜ್ಯ17 mins ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

kareena kapoor out from yash starrer toxic
ಬಾಲಿವುಡ್27 mins ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ28 mins ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Stock Market
ದೇಶ32 mins ago

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Bengaluru Rains
ಮಳೆ39 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Smrithi Irani
ರಾಜಕೀಯ42 mins ago

Smirthi Irani: ಅಮೇಥಿಯಲ್ಲಿ ಕಾಂಗ್ರೆಸ್‌ ಸೋಲನ್ನು ಒಪ್ಪಿಕೊಂಡಿದೆ; ಸ್ಮೃತಿ ಇರಾನಿ ವ್ಯಂಗ್ಯ

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ45 mins ago

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

RCB vS GT:
ಕ್ರೀಡೆ48 mins ago

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ39 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ12 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ22 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌