Site icon Vistara News

ವಿಷ ಕುಡಿದು ಎಎಸ್‌ಐ ಪುತ್ರ ಆತ್ಮಹತ್ಯೆ

ರಾತ್ರೋರಾತ್ರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಪುತ್ರ

ಆನೇಕಲ್: ಪೊಲೀಸ್‌ ಡ್ಯೂಟಿ ಮುಗಿಸಿ ಬಂದ ಎಚ್‌ಎಸ್‌ಆರ್‌ ಪೊಲೀಸ್‌ ಠಾಣೆಯ ಎಎಸ್‌ಐ ನಾಗರಾಜ್‌ ಅವರಿಗೆ ಶಾಕ್‌ ಕಾದಿತ್ತು. ಯಾಕೆಂದರೆ ‌ಅವರ ಮಗ ಪ್ರಶಾಂತ್ ರಾತ್ರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ.

ಆತನನ್ನು ಕೂಡಲೇ ಬೆಂಗಳೂರಿನ ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟ. ಪ್ರಶಾಂತ್‌ ನಗರದ ವಿಜಯ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ. ಯಾವ ಕಾರಣಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಎಂಬುದು ತಿಳಿದು ಬಂದಿಲ್ಲ.

ಇದನ್ನೂ ಓದಿ:ಮೂರನೇ ಬಾರಿಯೂ ಪಿಯು ಪರೀಕ್ಷೆಯಲ್ಲಿ ಫೇಲ್‌; ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Exit mobile version