ಶಿರಸಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ನಾಡಿನ ಸ್ವಾಮೀಜಿಗಳು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ಸ್ವರ್ಣವಲ್ಲೀ ಸೋಂದಾ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮತದಾನ ಮಾಡಿದ್ದಾರೆ.
ಶಿರಸಿ ವಿಧಾನಸಭಾ ಕ್ಷೇತ್ರದ ಸೋಂದಾದ ಖಾಸಾಪಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದ ಸ್ವರ್ಣವಲ್ಲೀ ಸೋಂದಾ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, “ಪ್ರತಿಯೊಬ್ಬ ಮತದಾರರು ಕೂಡ ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತದಾನ ಮಾಡುವುದು ದೇವರ ಕೆಲಸವಿದ್ದಂತೆ. ಬೇರೆ ರಾಜ್ಯದಲ್ಲಿ ಶೇ.50ರಷ್ಟು ಮತದಾನವಾಗುತ್ತದೆ ಎಂದು ಕೇಳಿದ್ದೇವೆ. ಆದರೆ, ರಾಜ್ಯದಲ್ಲಿ ಅಷ್ಟು ಕಡಿಮೆ ಮತದಾನವಾಗುವುದಿಲ್ಲ. ಈ ಭಾರಿ ಹೆಚ್ಚು ಮತದಾನವಾಗುವ ನಿರೀಕ್ಷೆ ಇದೆ” ಎಂದು ಹೇಳಿದರು.
ರಾಜ್ಯಭಾರ ನಡೆಸುವುದು ಕೂಡ ದೇವರ ಕೆಲಸ. ಪ್ರಜಾಪ್ರಭುತ್ವದಲ್ಲಿ ಸೂಕ್ತ ವ್ಯಕ್ತಿಯ ಆಯ್ಕೆ ಹಾಗೂ ಸರ್ಕಾರವನ್ನು ರಚನೆ ಮಾಡುವ ಅಧಿಕಾರವು ಮತದಾರರ ಕೈಯಲ್ಲಿದೆ. ಎಲ್ಲರಿಗೂ ಒಪ್ಪುವ ಸರ್ಕಾರ ಬರಬೇಕಾದರೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.
ಅಂಕೋಲಾದ ಬಡಗೇರಿಯಲ್ಲಿ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಮತದಾನ
ರಾಜ್ಯದಲ್ಲಿ ಹಿರಿಯರು, ಶತಾಯುಷಿಗಳೂ ಸಹ ಮತದಾನಕ್ಕೆ ಉತ್ಸಾಹ ತೋರುತ್ತಿದ್ದು, ಬೆಳಗ್ಗೆಯಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ವ್ಹೀಲ್‌ಚೇರ್ ಮೇಲೆ ಬಂದು ಮತದಾನ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಡಗೇರಿಯ ಮತಗಟ್ಟೆ ಸಂಖ್ಯೆ 182ರಲ್ಲಿ ಮತದಾನ ನೆರವೇರಿಸಿದ್ದು, ಎಲ್ಲರೂ ಕಡ್ಡಾಯವಾಗಿ ಹಕ್ಕು ಚಲಾಯಿಸುವಂತೆ ಕರೆ ನೀಡಿದ್ದಾರೆ.
ವ್ಹೀಲ್‌ಚೇರ್‌ನಲ್ಲಿ ಬಂದು ಮತದಾನ ಮಾಡಿದ ಸುಕ್ರಿ ಬೊಮ್ಮಗೌಡ
ಇದನ್ನೂ ಓದಿ: Karnataka Election: ಪತ್ನಿ ಚೆನ್ನಮ್ಮ ಜತೆ ಬಂದು ಮತ ಹಾಕಿದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು
ಊರನ್ನು ಅಭಿವೃದ್ಧಿ ಮಾಡುವವರು ಆಯ್ಕೆಯಾಗಬೇಕು. ಹಾಲಕ್ಕಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಮುಂದಿನ ನಾಯಕರನ್ನು ಆಯ್ಕೆ ಮಾಡಬೇಕೆಂದರೆ ಎಲ್ಲರೂ ಕಡ್ಡಾಯವಾಗಿ ಮತ ಚಲಾವಣೆ ಮಾಡಬೇಕು ಎಂದು ಸುಕ್ರಿ ಬೊಮ್ಮಗೌಡ ಮನವಿ ಮಾಡಿದ್ದಾರೆ.
ಕರ್ನಾಟಕ ಚುನಾವಣೆಯ ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ