ಸೊರಬ: ಕಲ್ಯಾಣ ಕ್ರಾಂತಿಯ ಇತಿಹಾಸದಲ್ಲಿ ಶ್ರೀ ಮಡಿವಾಳ ಮಾಚಿದೇವರು ಶ್ರೇಷ್ಠ ವಚನಕಾರರಲ್ಲಿ ಒಬ್ಬರಾಗಿದ್ದಾರೆ ಎಂದು ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಹೇಳಿದರು.
ತಾಲೂಕು ಆಡಳಿತ, ತಾಪಂ, ಪುರಸಭೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಮಡಿವಾಳ ಮಾಚಿದೇವ ಸಂಘದ ಸಹಯೋಗದಲ್ಲಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ (ಫೆ.೧) ಹಮ್ಮಿಕೊಂಡ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
12ನೇ ಶತಮಾನದ ಅವಧಿಯಲ್ಲಿ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ, ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾನ್ ಪುರುಷರ ತತ್ವಾದರ್ಶಗಳು ಮುಂದಿನ ಪೀಳಿಗೆಗೆ ತಿಳಿಯಲಿ ಎಂಬ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತಿದೆ ಎಂದರು.
ಇದನ್ನೂ ಓದಿ | US- china relation: ಅಮೆರಿಕದ ʼಚೀನಾ ಪ್ರಭಾವ ತಡೆ ಸಮಿತಿʼಗೆ ಭಾರತೀಯ ಮೂಲದ ರಾಜಾ ಕೃಷ್ಣಮೂರ್ತಿ ಸದಸ್ಯ
ಶ್ರೀ ಮಾಚಿದೇವ ಮಡಿವಾಳ ಸಂಘದ ಅಧ್ಯಕ್ಷ ಕೆ.ಪಿ. ಗುಡ್ಡಪ್ಪ ತುಮರಿಕೊಪ್ಪ ಮಾತನಾಡಿ, ಮಡಿವಾಳ ಸಮಾಜಕ್ಕೆ 18 ರಾಜ್ಯಗಳಲ್ಲಿ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದೆ. ಜತೆಗೆ ಪ್ರೊ. ಅನ್ನಪೂರ್ಣಮ್ಮ ವರದಿಯಂತೆ ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜಕ್ಕೆ ಎಲ್ಲ ಅರ್ಹತೆಯಿದ್ದು, ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ತಾಲೂಕಿನಲ್ಲಿ ಮಡಿವಾಳ ಸಮಾಜಕ್ಕಾಗಿ ಮೊದಲು ಸಮುದಾಯ ಭವನಕ್ಕೆ ಅನುದಾನ ನೀಡಿದ್ದರು. ಪ್ರಸ್ತುತ ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರ ಅನುದಾನದಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿಯನ್ನು ಕೊರೆಸಲಾಗಿದೆ. ವಿ.ಪ. ಸದಸ್ಯೆ ಭಾರತಿ ಶೆಟ್ಟಿ ಅವರು 5 ಲಕ್ಷ ರೂ. ಅನುದಾನ ನೀಡಿದ್ದಾರೆ ಮತ್ತು ಸಮಾಜಕ್ಕೆ ಸುಮಾರು 1.25 ಎಕರೆ ಪ್ರದೇಶವನ್ನು ನೀಡಲಾಗಿದೆ. ತುಳಜಪ್ಪನವರು ಸಮಾಜಕ್ಕೆ ದಾನವಾಗಿ ನೀಡಿದ ಜಾಗಕ್ಕೆ 1 ಕೋಟಿ ರೂ., ಅನುದಾನ ದೊರೆತಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲಿ ಸುಸಜ್ಜಿತ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆಯು ನಡೆಯಲಿದೆ ಎಂದರು.
ಇದನ್ನೂ ಓದಿ | Ramesh Jarkiholi : ರಮೇಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳಿಂದ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಎಂಎಲ್‌ಸಿ ರವಿ
ಮಡಿವಾಳ ಮಾಚಿದೇವರ ಕುರಿತು ಮಡಿವಾಳ ಸಮಾಜದ ಮಾಜಿ ಅಧ್ಯಕ್ಷ ಈಶ್ವರಪ್ಪ ಚನ್ನಪಟ್ಟಣ ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ, ಮಡಿವಾಳ ಸಮಾಜದ ಪ್ರಮುಖರಾದ ತುಳಜಪ್ಪ, ಗಣಪತಿ ಮಾಸ್ತರ್, ಹನುಮಂತಪ್ಪ, ರಾಮಮೂರ್ತಿ, ಕೃಷಿ ಇಲಾಖೆಯ ಕಾಂತರಾಜ್, ಸಿಡಿಪಿಒ ಕಚೇರಿಯ ಹಿರಿಯ ಮೇಲ್ವಿಚಾರಕಿ ತಯ್ಯಬಾ ಕೌಸರ್, ಉಪತಹಶೀಲ್ದಾರ್ ಎನ್.ಜೆ. ನಾಗರಾಜ್, ಕಂದಾಯ ಇಲಾಖೆಯ ಬಿ.ಜೆ. ವಿನೋದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರಿದ್ದರು.
ಇದನ್ನೂ ಓದಿ | Actor Yash: ರಾಕಿಂಗ್ ಸ್ಟಾರ್ ಯಶ್ ಭೇಟಿಗೆ ಹರಿದುಬಂದ ಅಭಿಮಾನಿಗಳ ದಂಡು!