Sowjanya Murder : ಸೌಜನ್ಯ ಸಾವಿಗೆ ನ್ಯಾಯ ಒದಗಿಸಿ; ಸರ್ಕಾರ, ಸಿಬಿಐಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಮನವಿ, ವಿಹಿಂಪ ಬೆಂಬಲ - Vistara News

ಕರ್ನಾಟಕ

Sowjanya Murder : ಸೌಜನ್ಯ ಸಾವಿಗೆ ನ್ಯಾಯ ಒದಗಿಸಿ; ಸರ್ಕಾರ, ಸಿಬಿಐಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಮನವಿ, ವಿಹಿಂಪ ಬೆಂಬಲ

Sowjanya Murder : ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆದು ಕುಟುಂಬಕ್ಕೆ ನ್ಯಾಯ ನೀಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಮನವಿ ಮಾಡಿದ್ದಾರೆ. ಇದಕ್ಕೆ ವಿಶ್ವಹಿಂದು ಪರಿಷತ್‌ ಕೂಡಾ ಬೆಂಬಲ ನೀಡಿದೆ.

VISTARANEWS.COM


on

Sowjanya murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಗಳೂರು: 2012ರಲ್ಲಿ ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ನಡೆದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಹತ್ಯೆ (Sowjanya Murder) ಪ್ರಕರಣದ ತನಿಖೆಯನ್ನು ನಡೆಸಿದ ಕೇಂದ್ರೀಯ ತನಿಖಾ ಮಂಡಳಿ (Central bureau of Investigation -CBI) ಆರೋಪಿಯೊಂದು ಗುರುತಿಸಲಾದ ಸಂತೋಷ್‌ ರಾವ್‌ (Santosh Rao) ಅವರನ್ನು ದೋಷಮುಕ್ತಗೊಳಿಸಿದೆ. ಪೊಲೀಸರು ಅಂದು ಸಂತೋಷನೇ ಕೊಲೆಗಾರ ಎಂದು ಹೇಳಿತ್ತು. ಈಗ ಸಿಬಿಐ ಆತನನ್ನು ದೋಷಮುಕ್ತಗೊಳಿಸಿದೆ. ಹಾಗಿದ್ದರೆ ಸೌಜನ್ಯಳನ್ನು ಕೊಂದವರು ಯಾರು ಎನ್ನುವ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂಬ ಆಗ್ರಹ ಜೋರಾಗಿದೆ. ಇದಕ್ಕೆ ಧರ್ಮಸ್ಥಳದ (Sri Kshetra Dharmasthala) ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ (Dr. D Veerendra Heggade) ಅವರೂ ಧ್ವನಿಗೂಡಿಸಿದ್ದಾರೆ.

ಸಂತೋಷ್‌ ರಾವ್‌ ಖುಲಾಸೆಯ ಬಳಿಕ ಕೆಲವು ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಮತ್ತೆ ಧರ್ಮಸ್ಥಳ ಕ್ಷೇತ್ರದತ್ತ ಬೆಟ್ಟು ಮಾಡುತ್ತಿರುವುದರಿಂದ ಪ್ರಕರಣದ ಸಮಗ್ರ ತನಿಖೆಯಾಗಲಿ ಎಂಬ ಅಭಿಪ್ರಾಯವನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಹೇಳಿಕೆಯನ್ನೇ ಬಿಡುಗಡೆ ಮಾಡಿದ್ದಾರೆ.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪತ್ರಿಕಾ ಹೇಳಿಕೆಯಲ್ಲಿ ಏನಿದೆ?

  1. 2012ರಲ್ಲಿ ನಡೆದ ಪಾಂಗಳದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು.
  2. ಹಾಗೂ ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ, ಸದರಿ ಇಲಾಖೆ ಆರೋಪ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ. ನಂತರದಲ್ಲಿ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಸದರಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು, ತಿಳಿದಿದೆ.
  3. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇದರಿಂದ ಶ್ರೀ ಕ್ಷೇತ್ರದ ಭಕ್ತರಲ್ಲಿ ಹಾಗು ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ಖೇದ ಉಂಟಾಗಿದೆ.
  4. ಈ ಪತ್ರಿಕಾ ಹೇಳಿಕೆ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗೂ ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಹಾಗು ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.
  5. ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ, ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ.
  6. ಪ್ರಸ್ತುತ ಸದರಿ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಕು. ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಮಾನ್ಯ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವಂತೆ ಒತ್ತಾಯಿಸುತ್ತೇನೆ.
  7. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ. ಹಾಗೂ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಚ್ಚಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಬೇಡಿ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಎಂಟ್ರಿ ಕೊಟ್ಟ ವಿಶ್ವ ಹಿಂದೂ ಪರಿಷತ್

ಈ ನಡುವೆ ಸೌಜನ್ಯ ಪ್ರಕರಣಕ್ಕೆ ವಿಶ್ವ ಹಿಂದೂ ಪರಿಷತ್‌ ಎಂಟ್ರಿ ಕೊಟ್ಟಿದೆ. ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಶ್ವ ಹಿಂದೂ ಪರಿಷತ್‌ ನಾಯಕರು, ಪ್ರಕರಣ ಇತ್ಯರ್ಥ ಆಗದೆ ಇರುವುದು ವ್ಯವಸ್ಥೆಗೆ ಕಪ್ಪು ಚುಕ್ಕೆ. ಹಾಲಿ ನ್ಯಾಯಧೀಶರಿಂದ ನ್ಯಾಯಾಂಗ ತನಿಖೆ ಆಗಲಿ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಹಿಂಪ ಮುಖಂಡ ಎಂ.ಬಿ. ಪುರಾಣಿಕ್ ಅವರು, ಯಾವ ರೀತಿ ತನಿಕೆ ಆಗಬೇಕು ಅನ್ನೋದು ವ್ಯವಸ್ಥೆಗೆ ಬಿಟ್ಟಿದ್ದು. ನಿಜವಾದ ಆರೋಪಿ ಯಾರು ಎಂದು ಗೊತ್ತಾಗಬೇಕು. ಆರೋಪಿಗಳಿಗೆ ಶಿಕ್ಷೆಯಾಗದೆ ಪ್ರಕರಣ ಅಂತ್ಯವಾಗೋದಿಲ್ಲ ಎಂದು ಹೇಳಿದರು.

ಎಲ್ಲ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ

ʻʻಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ದೇವರ ಹೋಗಲು ತೀರ್ಮಾನ ಮಾಡಲಾಗಿದೆ. ಎಲ್ಲಾ ದೇವಸ್ಥಾನ ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಕಾರ್ಯಕರ್ತರ ಮೂಲಕ ಎಲ್ಲಾ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾರ್ಥನೆ ನಡೆಸಲು ತೀರ್ಮಾನಿಸಲಾಗಿದೆʼʼ ಎಂದು ಅವರು ಹೇಳಿದ್ದಾರೆ.

ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು

ಈ ನಡುವೆ, ಸೌಜನ್ಯ ಸಾವಿನ ಹೆಸರಿನಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಅಪಮಾನ ಮಾಡುವುದನ್ನು ನಿಲ್ಲಿಸುವಂತೆ ವಿಹಿಂಪ ಆಗ್ರಹಿಸಿದೆ. ʻʻಧರ್ಮಸ್ಥಳ ಕ್ಷೇತ್ರಕ್ಕೆ ಅದರದ್ದೇ ಆದ ಐತಿಹಾಸಿಕ ಹಿನ್ನೆಲೆ ಇದೆ. ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದುಕೊಂಡಿದೆ. ಧಾರ್ಮಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಕ್ಕೆ ಕೊಡುಗೆ ನೀಡಿದೆ. ಸನಾತನ ಧರ್ಮದ ರಕ್ಷಣೆ ಧರ್ಮಸ್ಥಳದಲ್ಲಿ ಆಗುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಅದನ್ನು ವಿಶ್ವಹಿಂದೂ ಪರಿಷತ್‌ ಸಹಿಸುವುದಿಲ್ಲʼʼ ಎಂದು ಎಂ.ಬಿ. ಪುರಾಣಿಕ್‌ ಹೇಳಿದರು.

ʻʻಕ್ಷೇತ್ರ ಹಾಗೂ ಧರ್ಮಕ್ಕೆ ಅಪಚಾರ ಆಗಬಾರದು. ಅಪಚಾರ ಆದರೆ ವಿಶ್ವ ಹಿಂದೂ ಪರಿಷತ್ ವಿರೋಧಿಸುತ್ತದೆ. ಧರ್ಮಸ್ಥಳಕ್ಕೆ ಅಪಚಾರ ಆಗುವುದನ್ನ ನಾವೂ ಸಹಿಸೋದಿಲ್ಲ. ಧರ್ಮಸ್ಥಳಕ್ಕೆ ಮುತ್ತಿಗೆ ಹಾಕುವುದನ್ನು ನಾವು ಸಹಿಸುವುದಿಲ್ಲ. ಸೌಜನ್ಯ ಪ್ರಕರಣಕ್ಕೂ ಕ್ಷೇತ್ರಕ್ಕೂ ತಾಳೆ ಹಾಕಬಾರದುʼʼ ಎಂದು ಹೇಳಿರುವ ವಿಹಿಂಪ ನಾಯಕರು,
ಯಾವ ಬೆಲೆ ಕೊಟ್ಟಾದ್ರೂ ಕ್ಷೇತ್ರದ ಪ್ರತಿಷ್ಠೆಯನ್ನು ಉಳಿಸುತ್ತೇವೆ ಎಂದರು.

ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಲಿ, ಆದರೆ, ಧರ್ಮಸ್ಥಳಕ್ಕೆ ಅಪಮಾನ ಸಲ್ಲದು

ಹುಬ್ಬಳ್ಳಿ: ಸೌಜನ್ಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಕ್ಷೇತ್ರದ ಹೆಸರು ಹಾಳು ಮಾಡಲು ಯತ್ನಿಸುತ್ತಿರುವ ಪ್ರಯತ್ನವನ್ನು ಹುಬ್ಬಳ್ಳಿಯ ವರೂರು ನವಗೃಹ ತೀರ್ಥ ಕ್ಷೇತ್ರದ ಜೈನಮುನಿ ಆಚಾರ್ಯ ಗುಣಧರನಂದಿ ಮಹಾರಾಜ್ ಆಕ್ಷೇಪಿಸಿದ್ದಾರೆ.

ʻʻಸೌಜನ್ಯ ಸಾವಿನಿಂದ ಮನಸ್ಸಿಗೆ ಬಹಳ ನೋವಾಗಿದೆ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಹೀಗಂತ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿದ್ರೆ ನಾನು ಸಹಿಸುವುದಿಲ್ಲʼʼ ಎಂದು ಹೇಳಿದರು.

ಒಂದು ವೇಳೆ ಹೆಗ್ಗಡೆಯವರಾಗಲೀ ಅವರ ಕುಟುಂಬವಾಗಲೀ ಅಪರಾಧಿ ಆಗಿದ್ದರೆ ಅವರನ್ನು ಬಂಧಿಸಿ ಜೈಲಿಗೆ ಹಾಕಲಿ. ಆದರೆ, ಅವರು ಅಪರಾಧಿ ಎಂದು ಯಾರೋ ನಿರ್ಧಾರ ಮಾಡಲು ಸಾಧ್ಯವಿಲ್ಲ. ಅದಕ್ಕೆ ಅದರದ್ದೇ ಆದ ತನಿಖಾ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಇದೆ. ನಮಗೆ ಗೃಹ ಸಚಿವರು, ಪೊಲೀಸರ ಮೇಲೆ ನಂಬಿಕೆ ಇದೆ. ಒಳ್ಳೆ ಆಡಳಿತ ನೀಡಿದ ಸಿದ್ದರಾಮಯ್ಯ ಇದಾರೆ, ಅವರ ಮೇಲೆ ನಂಬಿಕೆ ಇದೆ ಎಂದು ಗುಣಧರ ನಂದಿ ಮಹಾರಾಜರು ಹೇಳಿದ್ದಾರೆ.

ಧರ್ಮಸ್ಥಳ ಕ್ಷೇತ್ರದ ಬಗ್ಗೆ ಪದೇಪದೆ ಅಪಪ್ರಚಾರ ಮಾಡಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ಮಾನಸಿಕ ಹಿಂಸೆ ಕೂಡ ಒಂದು ದೊಡ್ಡ ಹಿಂಸೆ. ದೇಹದ ನೋವಿಗಿಂತ ಮನಸ್ಸಿಗೆ ಆಗುವ ನೋವು ಕಷ್ಟ ಕೊಡುತ್ತದೆ. ಆಧಾರ ರಹಿತವಾಗಿ ಧರ್ಮಸ್ಥಳ ಕ್ಷೇತ್ರವನ್ನು ಟಾರ್ಗೆಟ್ ಮಾಡೋದು ಸರಿಯಲ್ಲ ಎಂದು ಹೇಳಿದರು ಜೈನ ಮುನಿ ಗುಣಧರನಂದಿ ಸ್ವಾಮೀಜಿ.

ಸರ್ಕಾರಕ್ಕೆ ಜೈನ ಮುನಿಗಳ ಮನವಿ

ʻʻಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸುವಂತೆ ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಬೇಕುʼʼ ಎಂದು ಆಗ್ರಹಿಸಿರುವ ಅವರು, ಅವಶ್ಯಕತೆಯಿದ್ದರೆ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಯಲಿ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading
Advertisement
Latest10 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌