ಬೆಂಗಳೂರು: ಖ್ಯಾತ ಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ (Spandana Vijay Raghavendra) ಅವರ ಅಕಾಲಿಕ ಸಾವಿಗೆ ನಾಡು ಕಂಬನಿ ಮಿಡಿಯುತ್ತಿದೆ. ಅವರ ಪ್ರತಿನಿಧಿಗಳಾಗಿ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivkumar), ಮಾಜಿ ಮುಖ್ಯಮಂತ್ರಿ ಗಳಾದ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಬಿ.ಎಸ್. ಯಡಿಯೂರಪ್ಪ (BS Yediyurappa), ಬಸವರಾಜ ಬೊಮ್ಮಾಯಿ (Basavaraja Bommai) ಅವರು ಕಂಬನಿ ಮಿಡಿದಿದ್ದಾರೆ.
ಅಕಾಲಿಕ ನಿಧನದಿಂದ ಆಘಾತ ಎಂದ ಸಿಎಂ ಸಿದ್ದರಾಮಯ್ಯ
ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು.
ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ.
— CM of Karnataka (@CMofKarnataka) August 7, 2023
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು.
– ಮುಖ್ಯಮಂತ್ರಿ @siddaramaiah pic.twitter.com/jL12KK4RiT
ಚಿಕ್ಕ ವಯಸ್ಸಿನಲ್ಲಿ ಯಾಕೆ ಹೀಗಾಯ್ತೋ ಎಂದ ಡಿ.ಕೆ ಶಿವಕುಮಾರ್
ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್.
ಅವ್ರ ತಂದೆ, ಕುಟುಂಬ ನನಗೆ ತುಂಬಾ ಆತ್ಮೀಯ. ಚಿಕ್ಕ ವಯಸ್ಸಿನಲ್ಲಿ ಹೀಗೆ ಆಗಿದ್ದಕ್ಕೆ ದುಃಖ ಇದೆ. ಭಗವಂತ ಯಾಕೆ ಈ ನಿರ್ಧಾರ ಮಾಡಿದಾನೋ ಅರ್ಥ ಆಗ್ತಿಲ್ಲ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ಬರಲಿ ಎಂದಿದ್ದಾರೆ.
ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು… pic.twitter.com/V75n6YPcGK
— DK Shivakumar (@DKShivakumar) August 7, 2023
ಸಣ್ಣ ವಯಸ್ಸಿನವರ ಸಾವು ವಿಚಲಿಗೊಳಿಸಿದೆ ಎಂದ ದಿನೇಶ್ ಗುಂಡೂರಾವ್
ನಟ ವಿಜಯ ರಾಘವೇಂದ್ರರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತಿ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತಗೊಳಿಸಿವೆ. ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ್ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನೂ ಭಾಗಿ ಎಂದಿದ್ದಾರೆ.
ಎಲ್ಲರೂ ಹೃದಯ ಚೆಕಪ್ ಮಾಡಿಕೊಳ್ಳಿ ಎಂದು ಸಲಹೆ ನೀಡಿದ ಕುಮಾರಸ್ವಾಮಿ
ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ ಎಂದಿದ್ದಾರೆ ಎಚ್.ಡಿ. ಕುಮಾರಸ್ವಾಮಿ.
ʻʻಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಇದರ ಮೂಲಕ ಹಿನ್ನಲೆ ಕೊವಿಡ್ ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗ್ತಿದೆ. ಪ್ರತಿಯೊಬ್ಬರು ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಎಚ್ಚರವಹಿಸಬೇಕು.. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಅ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಅ ನೋವು ಭರಿಸುವ ಶಕ್ತಿ ಭಗವಂತ ನೀಡಲಿʼʼ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಆಘಾತ ವ್ಯಕ್ತಪಡಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ನಿಧನ ಹೊಂದಿದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬ ಹಾಗೂ ಆಪ್ತೇಷ್ಟರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ.
ಇದನ್ನೂ ಓದಿ: Heart Attack : ಸೋಮವಾರವೇ ಹೃದಯಾಘಾತ ಯಾಕೆ ಹೆಚ್ಚು?; ಏನಿದು Blue Monday? ಇಲ್ಲಿವೆ 5 ಸಂಭಾವ್ಯ ಕಾರಣ
ಸ್ಪಂದನಾ ನಿಧನದಿಂದ ಆಘಾತ ಎಂದ ಬಸವರಾಜ ಬೊಮ್ಮಾಯಿ
ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ನಟ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ.
— Basavaraj S Bommai (@BSBommai) August 7, 2023
ನಟ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ… pic.twitter.com/xn3kAGtwXy