Site icon Vistara News

Multi Speciality Hospital | ಉ.ಕ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಿರಂತರ ಪ್ರಯತ್ನ: ಕಾಗೇರಿ

Multi Speciality Hospital

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ (Multi Speciality Hospital) ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಜತೆ ಮಾತನಾಡಿದ್ದೇನೆ. ಅವರು ಕೂಡ ಇದು ವಿಶೇಷ ಪ್ರಕರಣ, ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.‌

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ “”ಹಲವು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಇದೆ. ಆಸ್ಪತ್ರೆಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಈ ಬಗ್ಗೆ ಅಧಿಕಾರಿಗಳು ಮತ್ತು ಶಾಸಕರ ಜತೆ ಚರ್ಚೆ ಮಾಡಿದ್ದೇನೆ. ಆರೋಗ್ಯ ಸಚಿವ ಸುಧಾಕರ್‌ ಅವರು ಮುಖ್ಯಮಂತ್ರಿ ಜತಗೆ ಚರ್ಚಿಸಿ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದಾಗಿ ಹೇಳಿದ್ದಾರೆʼʼ ಎಂದು ತಿಳಿಸಿದರು.

“”ಹಲವು ವರ್ಷಗಳಿಂದ ಆಸ್ಪತ್ರೆ ಮಂಜೂರಾಗಿಲ್ಲ. ಈಗ ಡಾ. ಕೆ. ಸುಧಾಕರ್ ಅಗತ್ಯ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆʼʼ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ | Multi specialty | ಆಸ್ಪತ್ರೆ ನಿರ್ಮಾಣಕ್ಕೆ ಸ್ಪೀಕರ್ ಕಾಗೇರಿ ಮನವಿಗೆ ಸ್ಪಂದಿಸಿದ ಸಚಿವ ಸುಧಾಕರ್‌

Exit mobile version