ಬೆಂಗಳೂರು: ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಶಬರಿಮಲೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ ಹಾಗೂ ಹುಬ್ಬಳ್ಳಿಯಿಂದ ಕೊಲ್ಲಂಗೆ ವಿಶೇಷ ರೈಲುಗಳನ್ನು (Special Train) ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಕೊಲ್ಲಂಗೆ ರೈಲು ಸೇವೆ ಆರಂಭಿಸಲು, ಬೆಳಗಾವಿ ಸಂಸದೆ ಮಂಗಲ ಸುರೇಶ್ ಅಂಗಡಿ ಅವರು ರೈಲ್ವೆ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ರೈಲ್ವೆ ಸಚಿವಾಲಯ ಸ್ಪಂದಿಸಿದೆ.
ಬೆಳಗಾವಿ-ಕೊಲ್ಲಂ ಮತ್ತು ಹುಬ್ಬಳ್ಳಿ-ಕೊಲ್ಲಂ ನಡುವಿನ ವಿಶೇಷ ರೈಲುಗಳ ಮಾಹಿತಿ ಈ ಕೆಳಗಿನಂತಿದೆ:
೧) ರೈಲು ಸಂಖ್ಯೆ 07357/07358 ಬೆಳಗಾವಿ-ಕೊಲ್ಲಂ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 07357 ಬೆಳಗಾವಿ-ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 20 ರಂದು ಬೆಳಗ್ಗೆ 11:30 ಗಂಟೆಗೆ ಬೆಳಗಾವಿಯಿಂದ ಹೊರಟು ಮರುದಿನ ಮಧ್ಯಾಹ್ನ 03.15 ಕ್ಕೆ ಕೊಲ್ಲಂ ತಲುಪಲಿದೆ. ಇದೇ ಮಾರ್ಗದಲ್ಲಿ ಹಿಂದಿರುಗುವ, ರೈಲು ಸಂಖ್ಯೆ 07358 ಕೊಲ್ಲಂ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 21 ರಂದು ಕೊಲ್ಲಂನಿಂದ ಸಾಯಂಕಾಲ 05:10ಕ್ಕೆ ಹೊರಟು ಮರುದಿನ ರಾತ್ರಿ 11 ಗಂಟೆಗೆ ಬೆಳಗಾವಿ ತಲುಪಲಿದೆ.
ಇದನ್ನೂ ಓದಿ | Train Service | ವಿಜಯಪುರ-ಕೊಟ್ಟಾಯಮ್, ಹುಬ್ಬಳ್ಳಿ-ವಿಜಯಪುರ ನಡುವೆ ವಿಶೇಷ ರೈಲುಗಳ ಸಂಚಾರ
ಈ ವಿಶೇಷ ರೈಲು ನಿಲುಗಡೆಗೆ ಖಾನಾಪುರ, ಲೋಂಡಾ, ಧಾರವಾಡ, ಎಸ್.ಎಸ್.ಎಸ್ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಲಂ, ಸಸ್ತಾನ್ಕೋಟ್ಟ ನಿಲ್ದಾಣಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.
ಈ ವಿಶೇಷ ರೈಲಿನಲ್ಲಿ ಒಂದು 2ನೇ ಹವಾನಿಯಂತ್ರಿತ ದರ್ಜೆ, ಎಂಟು 3ನೇ ಹವಾನಿಯಂತ್ರಿತ ದರ್ಜೆ, ಒಂಬತ್ತು ಸ್ಲೀಪರ್ ಕ್ಲಾಸ್ ಸೇರಿದಂತೆ 20 ಬೋಗಿಗಳಿವೆ.
೨) ರೈಲು ಸಂಖ್ಯೆ 07359/07360 ಎಸ್.ಎಸ್.ಎಸ್ ಹುಬ್ಬಳ್ಳಿ – ಕೊಲ್ಲಂ – ಎಸ್.ಎಸ್.ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 07359 ಎಸ್.ಎಸ್.ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 27 ರಂದು ಮಧ್ಯಾಹ್ನ 02:40 ಗಂಟೆಗೆ ಎಸ್.ಎಸ್.ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 03.15 ಕ್ಕೆ ಕೊಲ್ಲಂ ತಲುಪಲಿದೆ. ಇದೇ ಮಾರ್ಗದಲ್ಲಿ ಹಿಂದಿರುಗುವ, ರೈಲು ಸಂಖ್ಯೆ 07360 ಕೊಲ್ಲಂ – ಎಸ್.ಎಸ್.ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 28 ರಂದು ಕೊಲ್ಲಂನಿಂದ ಸಾಯಂಕಾಲ 05:10ಕ್ಕೆ ಹೊರಟು ಮರುದಿನ ರಾತ್ರಿ 8 ಗಂಟೆಗೆ ಎಸ್.ಎಸ್.ಎಸ್ ಹುಬ್ಬಳ್ಳಿ ತಲುಪಲಿದೆ.
ಈ ವಿಶೇಷ ರೈಲು ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಲಂ, ಸಸ್ತಾನ್ಕೋಟ್ಟ ನಿಲ್ದಾಣಗಳಲ್ಲಿ ಎರಡೂ ಮಾರ್ಗದಲ್ಲಿ ನಿಲುಗಡೆಗೊಳ್ಳಲಿದೆ.
೩) ರೈಲು ಸಂಖ್ಯೆ 07361/07362 ಬೆಳಗಾವಿ-ಕೊಲ್ಲಂ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (7 ಟ್ರಿಪ್):
ಬೆಳಗಾವಿ-ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 07361) ರೈಲು ಡಿಸೆಂಬರ್ 4 ರಿಂದ ಜನವರಿ 15ರ ವರೆಗೆ ಬೆಳಗಾವಿಯಿಂದ ಪ್ರತಿ ಭಾನುವಾರದಂದು ಬೆಳಗ್ಗೆ 11:30 ಗಂಟೆಗೆ ಹೊರಡಲಿದ್ದು, ಮರುದಿನ ಮಧ್ಯಾಹ್ನ 03.15 ಕ್ಕೆ ಕೊಲ್ಲಂ ತಲುಪಲಿದೆ. ಇದೇ ಮಾರ್ಗದಲ್ಲಿ ಹಿಂದಿರುಗುವ ಕೊಲ್ಲಂ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 07362) ರೈಲು ಡಿಸೆಂಬರ್ 5 ರಿಂದ ಜನವರಿ 16ರ ವರೆಗೆ ಕೊಲ್ಲಂನಿಂದ ಪ್ರತಿ ಸೋಮವಾರದಂದು ಸಾಯಂಕಾಲ 05:10 ಗಂಟೆಗೆ ಹೊರಟು ಮರುದಿನ ರಾತ್ರಿ 11 ಗಂಟೆಗೆ ಬೆಳಗಾವಿ ತಲುಪಲಿದೆ.
ಈ ವಿಶೇಷ ರೈಲು ಖಾನಾಪುರ, ಲೋಂಡಾ, ಧಾರವಾಡ, ಎಸ್.ಎಸ್.ಎಸ್ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಲಂ, ಸಸ್ತಾನ್ಕೋಟ್ಟ ನಿಲ್ದಾಣಗಳಲ್ಲಿ ಎರಡೂ ಮಾರ್ಗದಲ್ಲಿ ನಿಲುಗಡೆಗೊಳ್ಳಲಿದೆ.
ಈ ಮೇಲೆ ತಿಳಿಸಿದ ವಿಶೇಷ ರೈಲುಗಳು (07359/07360 ಮತ್ತು 07361/07362) ಒಂದು ಬೋಗಿಯು 2ನೇ ಹವಾನಿಯಂತ್ರಿತ ದರ್ಜೆ, ಎರಡನೇಯದ್ದು 3ನೇ ಹವಾನಿಯಂತ್ರಿತ ದರ್ಜೆ, ಹತ್ತು ಸ್ಲೀಪರ್ ಕ್ಲಾಸ್ ಮತ್ತು ಎರಡು ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್-ವ್ಯಾನ್‌ಗಳಿಂದ ಕೂಡಿದ/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ ಒಳಗೊಂಡಿರುವ 15 ಬೋಗಿಗಳನ್ನು ಹೊಂದಿವೆ.
ಇದನ್ನೂ ಓದಿ | 108 ambulance | ಚಾಲಕರಿಗೆ ಸಿಗದ 3 ತಿಂಗಳ ಸಂಬಳ; ಜಿವಿಕೆಗೆ ಕೊನೇ ಡೆಡ್‌ಲೈನ್ ನೀಡಿದ ಆರೋಗ್ಯ ಇಲಾಖೆ