Murder sketch reopened | ಶಾಸಕ ಎಸ್‌.ಆರ್‌. ವಿಶ್ವನಾಥ್‌ ಕೊಲೆ ಯತ್ನ ಪ್ರಕರಣಕ್ಕೆ ಮರುಜೀವ - Vistara News

ಕರ್ನಾಟಕ

Murder sketch reopened | ಶಾಸಕ ಎಸ್‌.ಆರ್‌. ವಿಶ್ವನಾಥ್‌ ಕೊಲೆ ಯತ್ನ ಪ್ರಕರಣಕ್ಕೆ ಮರುಜೀವ

ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರ ಹತ್ಯೆಗೆ ನಡೆದ ಸಂಚಿನ ಪ್ರಕರಣಕ್ಕೆ ಮರುಜೀವ ದೊರಕಿದೆ.

VISTARANEWS.COM


on

SR Vishwanath MLA yelahanka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅದು ಬರೋಬ್ಬರಿ ಒಂದು ವರ್ಷದ ಹಿಂದೆ ದಾಖಲಾದ ಪ್ರಕರಣ. ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದರೆಂದು ಸಂಚಲನ ಸೃಷ್ಟಿಸಿದ್ದ ಪ್ರಕರಣ. ಆದರೆ, ತಾಂತ್ರಿಕ ಕಾರಣಗಳಿಂದ ಆ ಕೇಸ್ ಕೋರ್ಟ್‌ನಲ್ಲಿ ವಜಾ ಆಗಿತ್ತು. ಆದರೆ, ಮತ್ತೆ ಕೋರ್ಟ್ ಮೆಟ್ಟಿಲೇರಿದ ಶಾಸಕರು ಪ್ರಕರಣ ಮರು ತನಿಖೆ ನಡೆಸಬೇಕೆಂದು ಮಾಡಿಕೊಂಡ ಮನವಿ ಹಿನ್ನೆಲೆ ಪ್ರಕರಣಕ್ಕೆ ಮರುಜೀವ ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡಿರುವ ರಾಜಾನುಕುಂಟೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳಿಗೆ ಮತ್ತೆ ಸಂಕಷ್ಟ ಶುರುವಾಗಲಿದೆ.

ಒಂದು ವರ್ಷದ ಹಿಂದೆ, 2021 ರ ಡಿಸೆಂಬರ್‌ನಲ್ಲಿ ದಾಖಲಾಗಿದ್ದ ಕೇಸ್. ಪೊಲೀಸರು ತನಿಖೆ ನಡೆಸಿದ್ದರೂ ಕೂಡ ಕೋರ್ಟ್‌ನಲ್ಲಿ ಎಫ್ಐಆರ್ ವಜಾ ಆಗಿತ್ತು. ಇನ್ನೇನು ಪ್ರಕರಣ ಮರೆತೇ ಹೋಯಿತು ಎನ್ನುವ ಸಂದರ್ಭದಲ್ಲಿ ಹಳೇ ಕೇಸಿಗೆ ಮರುಜೀವ ಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ 2021ರ ಡಿಸೆಂಬರ್‌ನಲ್ಲಿ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್‌ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸಿದ್ದರು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಕೋರ್ಟ್‌ನಲ್ಲಿ ವಜಾಗೊಂಡಿತ್ತು.

ಇದೀಗ ಹಳೇ ಕೇಸ್ ಬಗ್ಗೆ ಮರು ತನಿಖೆ ನಡೆಸಲು ಕೋರ್ಟ್ ಆದೇಶಿಸಿದ್ದು, ಇದರಿಂದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್‌ಗೆ ಸಂಕಷ್ಟ ಎದುರಾಗಿದೆ. ಈ ಹಿಂದೆ ದಾಖಲಿಸಿದ್ದ ಎಫ್ಐಆರ್ ವಜಾಗೊಂಡ ಬಳಿಕ ಶಾಸಕ ಎಸ್ ಆರ್ ವಿಶ್ವನಾಥ್ ಕೇಸ್ ಮರು ತನಿಖೆಗೆ ಆಗ್ರಹಿಸಿ ಪಿಸಿಆರ್ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ ಎರಡನೇ ಎಸಿಜೆಎಂ ನ್ಯಾಯಾಲಯ ಪ್ರಕರಣದ ಮರು ತನಿಖೆಗೆ ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎಫ್ಐಆರ್ ದಾಖಲು ಮಾಡಲಾಗಿದೆ.

ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು ಕುಳ್ಳ ದೇವರಾಜ್ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಎರಡನೇ ಎಸಿಜೆಎಂ ನ್ಯಾಯಾಲಯದಿಂದ ಪಿಸಿಆರ್ ವರದಿ ಬಂದಿದೆ. ಅದರಂತೆ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಎರಡನೇ ಆರೋಪಿ ಕುಳ್ಳ ದೇವರಾಜ್ ನನ್ನ ಬಂಧನ ಮಾಡಲಾಗಿದೆ.

ಪ್ರಕರಣ ರೀಓಪನ್ ಆಗಿದ್ದು, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣಗೆ ಹೊಸ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆ ತಯಾರಿ ವೇಳೆಯಲ್ಲೆ ಪೊಲೀಸರ ತನಿಖೆ ಸಹ ಆರಂಭವಾಗಿದ್ದು, ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ | Murder case | ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ?; ಉದ್ಯಮಿ ಪುತ್ರನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: ಇಂದು ಕೊಡಗು, ಬೆಳಗಾವಿ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

Karnataka Weather: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಭದ್ರಾ ನದಿಯು ಅತಿ ಹೆಚ್ಚು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ, ಮುಂಜಾಗ್ರತೆಯಿಂದ ಸುರಕ್ಷಿತ ಸ್ಥಳಗಳಿಗೆ ಹೋಗಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮನವಿ ಮಾಡಿದೆ.

VISTARANEWS.COM


on

ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕವಲುಗುಂದಿ ಗ್ರಾಮದಲ್ಲಿ 30 ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಅಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
Koo

ಬೆಂಗಳೂರು: ರಾಜ್ಯದಲ್ಲಿ ಆ.1ರಂದು ಗುರುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಅಲ್ಲದೇ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಭದ್ರಾ ನದಿಯು ಕೂಡ ಅತಿ ಹೆಚ್ಚು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ, ಮುಂಜಾಗ್ರತೆಯಿಂದ ಸುರಕ್ಷಿತ ಸ್ಥಳಗಳಿಗೆ ಹೋಗಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮನವಿ ಮಾಡಿದೆ.

ಆ.2ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅದೇ ರೀತಿ ಆ.3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆ.5ರಂದು ಇದೇ ರೀತಿಯ ಹವಾಮಾನ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆ. 6ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ. ನಿಂದ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20-C ಆಗಿರಬಹುದು.

Continue Reading

ಕರ್ನಾಟಕ

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

ಕಬಿನಿ ಡ್ಯಾಂ ಒಡೆಯುವ ಭೀತಿಯಲ್ಲಿ ಸುತ್ತಮುತ್ತಲ ಗ್ರಾಮಗಳ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯದ ಒಳಹರಿವು ಜಾಸ್ತಿಯಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರಿ ಪ್ರಮಾಣದ ಬಿರುಕು ಮೂಡಿಸಿರುವುದು ಭೀತಿ ಹುಟ್ಟಿಸಿದೆ.

VISTARANEWS.COM


on

Kabini Dam
Koo

ಮೈಸೂರು: ಜಿಲ್ಲೆಯ ಕಬಿನಿ ಜಲಾಶಯದ (Kabini Dam) ಬಲದಂಡೆ ನಾಲೆ ಬಳಿ ಭಾರಿ ಪ್ರಮಾಣದ ಬಿರುಕು ಉಂಟಾಗಿದ್ದು, ನಾಲೆ ಹೊಡೆದರೆ ಅಪಾರ ಪ್ರಮಾಣದ ಹಾನಿಯುಂಟಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕು ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿರುವುದು ಈಗ ಭಾರಿ ಆತಂಕ ಸೃಷ್ಟಿಸಿದೆ.

ಕಬಿನಿ ಡ್ಯಾಂ ಒಡೆಯುವ ಭೀತಿಯಲ್ಲಿ ಸುತ್ತಮುತ್ತಲ ಗ್ರಾಮಗಳ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯದ ಒಳಹರಿವು ಜಾಸ್ತಿಯಾಗಿದೆ. ಮತ್ತೊಂದೆಡೆ ಬಲದಂಡೆ ಬಳಿ ಭಾರಿ ಪ್ರಮಾಣದ ಬಿರುಕು ಮೂಡಿಸಿರುವುದು ಭೀತಿ ಹುಟ್ಟಿಸಿದೆ. ಕಾಲುವೆಯನ್ನು ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಬೆಳೆ ಹಾನಿಯೂ ಆಗಲಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪೋಲಾಗುತ್ತಿರುವ ನೀರು

ನಿತ್ಯ 300ರಿಂದ 500 ಕ್ಯುಸೆಕ್ ನೀರು ಪೋಲಾಗುತ್ತಿದೆ. ನೀರಾವರಿ ಇಲಾಖೆಯ ಬೇಜವಾಬ್ದಾರಿತನಕ್ಕೆ ಜಲಾಶಯದ ಕೆಳಭಾಗದ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2,284 ಅಡಿ ಎತ್ತರದ ಜಲಾಶಯಕ್ಕೆ ಮೂರು ದಿನಗಳ ಹಿಂದಷ್ಟೆ ಬಾಗಿನ ಅರ್ಪಣೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದರು. ಆದರೆ ಈಗ ನಾಲೆ ಬಿರುಕು ಬಿಟ್ಟಿರುವುದು ಭೀತಿ ಹೆಚ್ಚಿಸಿದೆ. ಬಲದಂಡೆ ನಾಲೆ‌ ಒಡೆದರೆ ಸರಗೂರು ತಿ.ನರಸೀಪುರ, ನಂಜನಗೂಡು ತಾಲೂಕಿನ ನಾಲೆಗಳಿಗೆ ಹಾನಿಯಾಗಲಿದೆ ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ.

ವಾಹನ ಸಂಚಾರ ನಿಷೇಧ

ಬೆಂಗಳೂರು ಹಾಗೂ ಮಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಹಾದುಹೋಗುವ ಶಿರಾಡಿ ಘಾಟ್‌ ರಸ್ತೆಯ ಮೇಲೆ ಮತ್ತೆ ಭೂಕೂಸಿತ ಉಂಟಾಗಿದೆ. ಹಾಗಾಗಿ, ಶಿರಾಡಿ ಘಾಟ್‌ (Shiradi Ghat) ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಗೊಳಿಸಲಾಗಿದೆ. ಈಗ ಕುಸಿದಿರುವ ಮಣ್ಣು ಹಾಗೂ ಕಲ್ಲನ್ನು ತೆರವುಗೊಳಿಸುವುದು ಹಾಗೂ ಮತ್ತೆ ಭೂಕುಸಿತ ಉಂಟಾಗುವ ಭೀತಿ ಇರುವುದರಿಂದ ಶಿರಾಡ್‌ ಘಾಟ್‌ನಲ್ಲಿ ಮತ್ತೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ

ಇದನ್ನೂ ಓದಿ: Snake Bite: ಮಳೆಗಾಲದಲ್ಲಿ ಹಾವುಗಳ ಕಾಟ ಹೆಚ್ಚು; ಕಚ್ಚಿದರೆ ಈ ಕ್ರಮ ಅನುಸರಿಸಿ ಅಪಾಯದಿಂದ ಪಾರಾಗಿ!

Continue Reading

ಕರ್ನಾಟಕ

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Shiradi Ghat: ಮಣ್ಣಿನಡಿ ಎರಡು ಕಂಟೇನರ್ ಹಾಗೂ ಟ್ಯಾಂಕರ್ ಸಿಲುಕಿದ್ದು, ಮಣ್ಣು ತೆರವುಗೊಳಿಸಿ ವಾಹನಗಳನ್ನು ತೆಗೆಯಬೇಕು. ಅಲ್ಲದೆ, ಮಳೆ ಸುರಿಯುತ್ತಿರುವ ಕಾರಣ ಕಂಟೇನರ್‌ ಹಾಗೂ ಟ್ಯಾಂಕರ್‌ ಹೊರತೆಗೆಯಲು ಕಷ್ಟವಾಗುತ್ತಿದೆ. ಹಾಗೆಯೇ, ಮತ್ತೆ ಭೂಕುಸಿತ ಉಂಟಾಗುವ ಭೀತಿ ಎದುರಾಗಿದೆ.

VISTARANEWS.COM


on

Shiradi Ghat
Koo

ಹಾಸನ: ಬೆಂಗಳೂರು (Bengaluru) ಹಾಗೂ ಮಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಹಾದುಹೋಗುವ ಶಿರಾಡಿ ಘಾಟ್‌ ರಸ್ತೆಯ ಮೇಲೆ ಮತ್ತೆ ಭೂಕೂಸಿತ (Landslide) ಉಂಟಾಗಿದೆ. ಹಾಗಾಗಿ, ಶಿರಾಡಿ ಘಾಟ್‌ (Shiradi Ghat) ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಗೊಳಿಸಲಾಗಿದೆ. ಈಗ ಕುಸಿದಿರುವ ಮಣ್ಣು ಹಾಗೂ ಕಲ್ಲನ್ನು ತೆರವುಗೊಳಿಸುವುದು ಹಾಗೂ ಮತ್ತೆ ಭೂಕುಸಿತ ಉಂಟಾಗುವ ಭೀತಿ ಇರುವುದರಿಂದ ಶಿರಾಡ್‌ ಘಾಟ್‌ನಲ್ಲಿ ಮತ್ತೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಭೂಕುಸಿತ ಸೇರಿ ಹಲವು ಕಾರಣಗಳಿಂದಾಗಿ ಶಿರಾಡಿ ಘಾಟ್‌ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಆದೇಶ ಹೊರಡಿಸಿದ್ದಾರೆ. ಈ ರಸ್ತೆಯ ಬದಲು ಬೇರೆ ಮಾರ್ಗದ ಮೂಲಕ ಸಂಚರಿಸಬೇಕು ಎಂದು ಅವರು ಆದೇಶಿಸಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡ ತಪ್ಲು ಬಳಿ ಗುಡ್ಡ ಕುಸಿದಿದೆ. ಮಣ್ಣು ತೆರವುಗೊಳಿಸುವವರೆಗೂ ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮಣ್ಣಿನಡಿ ಎರಡು ಕಂಟೇನರ್ ಹಾಗೂ ಟ್ಯಾಂಕರ್ ಸಿಲುಕಿದ್ದು, ಮಣ್ಣು ತೆರವುಗೊಳಿಸಿ ವಾಹನಗಳನ್ನು ತೆಗೆಯಬೇಕು. ಅಲ್ಲದೆ, ಮಳೆ ಸುರಿಯುತ್ತಿರುವ ಕಾರಣ ಕಂಟೇನರ್‌ ಹಾಗೂ ಟ್ಯಾಂಕರ್‌ ಹೊರತೆಗೆಯಲು ಕಷ್ಟವಾಗುತ್ತಿದೆ. ಹಾಗೆಯೇ, ಮತ್ತೆ ಭೂಕುಸಿತ ಉಂಟಾಗುವ ಭೀತಿ ಎದುರಾಗಿದೆ. ಜುಲೈ ಮಧ್ಯಭಾಗದಲ್ಲೂ ಶಿರಾಡಿ ಘಾಟ್‌ ರಸ್ತೆಯಲ್ಲಿ ಬೆಟ್ಟ ಕುಸಿದ ಕಾರಣ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಭೂಕುಸಿತ ಉಂಟಾದ ಕಾರಣ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದ ಕರಾವಳಿ-ಮಲೆನಾಡು ಭಾಗದಲ್ಲಿ ಭರ್ಜರಿ ಮಳೆಯಾಗಲಿದ್ದು, 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Tips for Monsoon: ಮಳೆಗಾಲದಲ್ಲಿ ಬಟ್ಟೆಗಳನ್ನು ಗರಿಗರಿಯಾಗಿ ಇರಿಸುವುದು ಹೇಗೆ?

Continue Reading

ಕರ್ನಾಟಕ

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Infosys: ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Infosys
Koo

ಬೆಂಗಳೂರು: ದೇಶದ ಎರಡನೇ ಬೃಹತ್‌ ಐಟಿ ಕಂಪನಿ (IT Company) ಎನಿಸಿರುವ, ಕರ್ನಾಟಕದ ಎನ್‌.ಆರ್.ನಾರಾಯಣ ಮೂರ್ತಿ ಸೇರಿ ಹಲವರು ಹುಟ್ಟುಹಾಕಿರುವ ಐಟಿ ದೈತ್ಯ ಇನ್ಫೋಸಿಸ್‌ ಕಂಪನಿ (Infosys) ವಿರುದ್ಧ ತೆರಿಗೆ ವಂಚನೆಯ (Tax Evasion) ಆರೋಪ ಕೇಳಿಬಂದಿದೆ. ತೆರಿಗೆ ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಇನ್ಫೋಸಿಸ್‌ ಕಂಪನಿಗೆ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (DGGI) 32 ಸಾವಿರ ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ನೋಟಿಸ್‌ ಜಾರಿ ಮಾಡಿದೆ.

“ಇನ್ಫೋಸಿಸ್‌ ಕಂಪನಿಯು ಬೇರೆ ದೇಶಗಳಲ್ಲಿ ಹೊಂದಿರುವ ಬ್ರ್ಯಾಂಚ್‌ ಆಫೀಸ್‌ಗಳಿಂದ 2017-18ರಿಂದ 2021-22ರಲ್ಲಿ ಸರಬರಾಜು ಮಾಡಲಾಗಿರುವ ಸ್ವೀಕೃತಿಗಳ ಬದಲಾಗಿ ಬ್ರ್ಯಾಂಚ್‌ ಆಫೀಸ್‌ಗಳ ವೆಚ್ಚ ಎಂಬುದಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ನಿಯಮಗಳ ಪ್ರಕಾರ ಭಾರತದಿಂದ ಹೊರಗಿರುವ ಬ್ರ್ಯಾಂಚ್‌ಗಳಿಂದ ಸರಬರಾಜು ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಲಿಮಿಟೆಡ್‌ ಕಂಪನಿಯು 32,403 ಕೋಟಿ ರೂ. ಐಜಿಎಸ್‌ಟಿ ಪಾವತಿಸಬೇಕು” ಎಂಬುದಾಗಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ‌

Narayana Murthy
Narayana Murthy

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನಿಯಮಗಳ ಪ್ರಕಾರ, ಸರಕು ಅಥವಾ ಸೇವೆಗಳನ್ನು ಸ್ವೀಕರಿಸುವವರು ಪೂರೈಕೆದಾರರ ಬದಲಿಗೆ ತೆರಿಗೆ ಪಾವತಿಸಬೇಕು ಎಂಬುದೇ ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ಆಗಿದೆ. ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯ ಸ್ಪಷ್ಟನೆ ಏನು?

ಜಿಎಸ್‌ಟಿ ನೋಟಿಸ್‌ ಕುರಿತು ಇನ್ಫೋಸಿಸ್‌ ಸ್ಪಷ್ಟನೆ ನೀಡಿದೆ. ಇನ್ಫೋಸಿಸ್‌ ಕಂಪನಿಯು ಯಾವುದೇ ಜಿಎಸ್‌ಟಿ ಪಾವತಿ ಬಾಕಿಯನ್ನು ಉಳಿಸಿಕೊಂಡಿಲ್ಲ. ಐಟಿ ಸೇವೆಗಳ ರಫ್ತಿನ ಮೇಲೆ ಜಿಎಸ್‌ಟಿ ರಿಫಂಡ್‌ ಪಡೆಯುವ ಅವಕಾಶ ಇದೆ. ಅದರಂತೆ, ಕ್ಲೇಮ್‌ ಮಾಡಲಾಗಿದೆ. ಇನ್ನು, ಕಂಪನಿಗೆ ಪ್ರಿ-ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದ್ದು, ಈ ಕುರಿತು ಕಂಪನಿಯು ಪ್ರತಿಕ್ರಿಯೆ ನೀಡಿದೆ ಎಂಬುದಾಗಿ ಸ್ಪಷ್ಟಪಡಿಸಿದೆ.

ನಾರಾಯಣಮೂರ್ತಿ ಹೇಳಿಕೆ ಟ್ರೋಲ್

ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ. ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ಉತ್ಪಾದನಾ ಕೇಂದ್ರವಾಗುವ ಭಾರತದ ಕನಸು ಇನ್ನು ಬಹಳ ದೂರದಲ್ಲಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಾರಾಯಣ ಮೂರ್ತಿ ಅವರ ಹೇಳಿಕೆಯ ಕುರಿತು ಜನ ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: GST Fraud: ಜಿಎಸ್‌ಟಿ ತೆರಿಗೆ ವಂಚನೆ ಪತ್ತೆ ಹಚ್ಚಲು ಎಐ, ಅನಾಲಿಟಿಕ್ಸ್ ಟೂಲ್ಸ್ ಬಳಕೆ

Continue Reading
Advertisement
World Lung Cancer Day
ಆರೋಗ್ಯ14 mins ago

World Lung Cancer Day: ಶ್ವಾಸಕೋಶದ ಕ್ಯಾನ್ಸರ್‌ಗೆ ಪ್ರತಿವರ್ಷ 16 ಲಕ್ಷ ಮಂದಿ ಬಲಿ; ಇದರಿಂದ ಪಾರಾಗುವುದು ಹೇಗೆ?

ಮಳೆ14 mins ago

Karnataka Weather: ಇಂದು ಕೊಡಗು, ಬೆಳಗಾವಿ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

Paris Olympics 2024 Day 6
ಕ್ರೀಡೆ44 mins ago

Paris Olympics 2024 Day 6: ಇಂದಿನಿಂದ ಅಥ್ಲೆಟಿಕ್ಸ್ ಆರಂಭ; ಭಾರತದ ಕ್ರೀಡಾ ಸ್ಪರ್ಧೆಗಳ ವಿವರ ಹೀಗಿದೆ

Dina Bhavishya
ಭವಿಷ್ಯ44 mins ago

Dina Bhavishya: ವಿದೇಶ ಪ್ರವಾಸಕ್ಕೆ ಕಾಯುತ್ತಿರುವ ಈ ರಾಶಿಯವರಿಗೆ ಶುಭ ಸೂಚನೆ ಸಿಗಲಿದೆ

Kabini Dam
ಕರ್ನಾಟಕ6 hours ago

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Shiradi Ghat
ಕರ್ನಾಟಕ6 hours ago

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Road Rage
ದೇಶ7 hours ago

Road Rage: ಸ್ಕೂಟಿಗೆ ಬೈಕ್‌ ಟಚ್‌ ಆಗಿದ್ದಕ್ಕೆ ಜಗಳ; ಗುಂಡು ಹಾರಿಸಿ 2 ಮಕ್ಕಳ ತಾಯಿಯನ್ನು ಕೊಂದ ವ್ಯಕ್ತಿ

Rashid khan 600 wickets
ಕ್ರೀಡೆ7 hours ago

Rashid khan 600 wickets: ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ ರಶೀದ್​ ಖಾನ್​; ಮೊದಲ ಸ್ಪಿನ್ನರ್

Viral video
ವೈರಲ್ ನ್ಯೂಸ್7 hours ago

Viral Video: ಕೇಶ ವಿನ್ಯಾಸಕ್ಕೆ ಸಲಾಕೆ ಬಳಸಿದ ಕ್ಷೌರಿಕ!

Virat Kohli
ಕ್ರೀಡೆ7 hours ago

Virat Kohli: ಗಂಭೀರ್​ ಮಾರ್ಗದರ್ಶನದಂತೆ ಅತ್ಯಂತ ಜೋಶ್​ನಿಂದ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಕೊಹ್ಲಿ; ಫೋಟೊ ವೈರಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌