Site icon Vistara News

Gurulinga Shivacharya Swamiji: ಕಾರು ಅಪಘಾತದಲ್ಲಿ ಬಂಗರಗಾ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Gurulinga Shivacharya Swamiji

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಳಂದ ತಾಲೂಕಿನ ಸುಕ್ಷೇತ್ರ ಬಂಗರಗಾ ಹಿರೇಮಠದ ಪೀಠಾಧಿಪತಿ ಶ್ರೀ ಷ.ಬ್ರ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು (Gurulinga Shivacharya Swamiji) ಸೋಮವಾರ ಲಿಂಗೈಕ್ಯರಾಗಿದ್ದಾರೆ. ಅಪಘಾತದ ಬಳಿಕ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರು ಗಂಭೀರವಾಗಿ ಗಾಯಗೊಂಡಿದ್ದರು ಹೀಗಾಗಿ ಗುರುಲಿಂಗ ಶಿವಾಚಾರ್ಯರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಹಾಗೂ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರನ್ನು ಆಳಂದನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.

ಇದನ್ನೂ ಓದಿ | Cake Tragedy: ಕೇಕ್‌ ತಿಂದು ಬಾಲಕಿ ಸಾವಿನ ಪ್ರಕರಣ; ಸಾವಿಗೆ ನಿಖರ ಕಾರಣ ಬಯಲು

ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

ಕಾರವಾರ: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಮನೆಯಲ್ಲಿ ವೃಕ್ಷಮಾತೆ ತುಳಸಿಗೌಡ (Tulsi Gowda) ಅವರು ಜಾರಿ ಬಿದ್ದಿದ್ದರಿಂದ ಕಾಲಿಗೆ ಪೆಟ್ಟಾಗಿತ್ತು.

ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲು ಜಾರಿ ಬಿದ್ದ ಪರಿಣಾಮ ತುಳಸಜ್ಜಿ ಅಸ್ವಸ್ಥಗೊಂಡಿದ್ದಾರೆ.

Exit mobile version