ಬೆಂಗಳೂರು: ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ವಿಸ್ತಾರ (Vistara News Launch) ಎಂಬ ಪದದ ಬಗ್ಗೆ ವಿಶಾಲವಾದುದು ಎಂಬ ಅರ್ಥಪೂರ್ಣವಾದ ಮಾತನ್ನು ಹೇಳಿದರು. ಭಾರತ ಮಾತ್ರವಲ್ಲ, ಇಡೀ ಪ್ರಪಂಚವನ್ನು ಬಹುದೊಡ್ಡ ಸಾಮಾಜಿಕ ಹೊಣೆಗಾರಿಕೆಯಿಂದ ಮುನ್ನಡೆಸುವಂತಹ ದೊಡ್ಡ ಜವಾಬ್ದಾರಿ ಮಾಧ್ಯಮ ಕ್ಷೇತ್ರಕ್ಕಿದೆ ಎಂದು ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ವಿಸ್ತಾರ ನ್ಯೂಸ್ ಲೋಕಾರ್ಪಣೆ ಮತ್ತು ಕಾಯಕ ಯೋಗಿ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಮಾಧ್ಯಮ ಕ್ಷೇತ್ರದ ಮೂಲಕ ದೇಶದ ಅನೇಕ ನ್ಯೂನತೆಗಳನ್ನು ಸರಿಪಡಿಸಿ, ದೇಶದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಜನರ ಹಿತಕ್ಕಾಗಿ ವಿಸ್ತಾರ ನ್ಯೂಸ್ ಕೆಲಸ ಮಾಡಲಿ, ಹರಿಪ್ರಕಾಶ್ ಕೋಣೆಮನೆ ಅವರ ತಂಡದಿಂದ ಮೂಡಿಬಂದಿರುವ ಈ ವಿಸ್ತಾರ ನ್ಯೂಸ್ ಮಾಧ್ಯಮವು ಬಹಳ ವಿಸ್ತಾರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.
ಇದನ್ನೂ ಓದಿ | Vistara news launch | ಶಿಕ್ಷಣ ಯೋಗಿ ಪ್ರೊ.ಎಂ.ಆರ್.ದೊರೆಸ್ವಾಮಿಯವರಿಗೆ ಕಾಯಕಯೋಗಿ ಪುರಸ್ಕಾರ