ಕೋಲಾರ: ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ (SRI SATHYA SAI VIDYA SAMSTHE) ಆವರಣದಲ್ಲಿ ಮಧ್ಯಾಹ್ನ ಊಟ ಸೇವನೆ ಮಾಡುತ್ತಿದ್ದಾಗ ವಿದ್ಯುತ್ ಕಂಬ ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೊಬ್ಬನನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲು ಮಾಡಲಾಗಿದೆ.
ದಿನೇಶ್, ಭರತ್, ಚರಣ್ ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ದಿನೇಶ್‌ನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದರೆ, ಭರತ್‌ನನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚರಣ್ ಚಿಕಿತ್ಸೆ ಪಡೆಯುತ್ತಿದ್ದಾನೆ.
ವಿದ್ಯುತ್ ಕಂಬ ಬದಲು ವೇಳೆ ಅವಘಡ
ಕೆಇಬಿ ಸಿಬ್ಬಂದಿ ವಿದ್ಯುತ್ ಕಂಬಗಳನ್ನು ಬದಲಾವಣೆ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಮರದ ರೆಂಬೆ ಕಡಿಯುವುದು ಸೇರಿದಂತೆ ಇನ್ನಿತರ ಚಟುವಟಿಕೆ ನಡೆಯುತ್ತಿತ್ತು. ಆಗ ಮರದ ಎರಡು ರೆಂಬೆಗಳು ತಂತಿಗಳ ಮೇಲೆ ಬಿದ್ದು ಕಂಬಗಳು ನೆಲಕಚ್ಚಿವೆ. ಆಗ ಆವರಣದಲ್ಲಿ ಕುಳಿತು ಊಟ ಮಾಡುತ್ತಿದ್ದ ಈ ಮೂವರು ವಿದ್ಯಾರ್ಥಿಗಳ ಮೇಲೆ ಕಂಬ ಬಿದ್ದಿದೆ ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಮೂವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌನಿಪಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ | Bescom | 3 ತಿಂಗಳು ವಿದ್ಯುತ್ ಬಿಲ್ ಕಟ್ಟದಿದ್ದರೆ ಪರ್ಮನೆಂಟ್ ಪವರ್ ಕಟ್: ಬೆಸ್ಕಾಂನಿಂದ ಹೊಸ ಅಸ್ತ್ರ, ಗ್ರಾಹಕರಿಗೆ ಶಾಕ್