Site icon Vistara News

Sri Satyasai Hospital | ಶ್ರೀ ಸತ್ಯಸಾಯಿ ಆಸ್ಪತ್ರೆಯಲ್ಲಿ ಸೌಲಭ್ಯಗಳ ವಿಸ್ತರಣೆಗೆ ಸಚಿವ ಅಶ್ವತ್ಥ ನಾರಾಯಣ ಚಾಲನೆ

Sri Satyasai hospital

ಚಿಕ್ಕಬಳ್ಳಾಪುರ: ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯ ನಿರ್ವಹಿಸುತ್ತಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯು (Sri Satyasai Hospital) ರೋಗಪೀಡಿತರಿಗೆ ಪ್ರೀತಿ ಕಾಳಜಿಯಿಂದ ಆರೋಗ್ಯ ಸೇವೆ ಲಭ್ಯವಾಗಿಸುವ ಭರವಸೆಯ ತಾಣವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಭಾನುವಾರ ಹೇಳಿದರು.

ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಯೂನಿವರ್ಸಿಟಿ ಆಫ್ ಹ್ಯೂಮನ್ ಎಕ್ಸಲೆನ್ಸ್ ವತಿಯಿಂದ ಆಸ್ಪತ್ರೆಯಲ್ಲಿ ಹೊಸದಾಗಿ ಸೇರ್ಪಡೆಗೊಳಿಸಿರುವ ವ್ಯವಸ್ಥೆಗಳನ್ನು ಮಕರ ಸಂಕ್ರಾಂತಿ ದಿನದಂದು ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದ ಬ್ಯಾಂಕಿನ ಹೊಸ ವ್ಯವಸ್ಥೆಯಿಂದ ದಾನಿಗಳು ನೀಡಿದ ಒಂದು ಹನಿ ರಕ್ತವೂ ಪೋಲಾಗದಂತೆ ನಿರ್ವಹಣೆ ಮಾಡಬಹುದಾಗಿದೆ. ಜತೆಗೆ ರೇಡಿಯಾಲಜಿ ಘಟಕ ಹಾಗೂ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ವಿಸ್ತರಿಸಿ ಕಾಯಿಲೆ ಬಾಧಿತರಿಗೆ ಹೆಚ್ಚಿನ ಅನುಕೂಲ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಜೀವವಿಜ್ಞಾನ, ಚಿಕಿತ್ಸಾ ವಿಜ್ಞಾನ ಹಾಗೂ ಆಧುನಿಕ ತಂತ್ರಜ್ಞಾನದ ಮೇಳೈಸುವಿಕೆಯಿಂದಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಉಂಟಾಗುತ್ತಿವೆ. ಅದಕ್ಕೆ ತಕ್ಕಂತೆ ಇಲ್ಲಿನ ಆಸ್ಪತ್ರೆಯು ಸದಾ ಹೊಸತನಕ್ಕೆ ತೆರೆದುಕೊಂಡಿರಲಿ ಎಂದು ಸಚಿವರು ಆಶಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿಕೊಟ್ಟು ಚಿಕಿತ್ಸಾ ಸೌಲಭ್ಯಗಳನ್ನು ಪರಿಶೀಲಿಸಿದರು. ರೋಗಿಗಳ ಬಳಿ ತೆರಳಿ ಹಣ್ಣುಹಂಪಲು ವಿತರಿಸಿದರು. ಶ್ರೀ ಮಧುಸೂದನ ಸಾಯಿ, ಡಾ.ಉಪಾಧ್ಯಾಯ, ನರಸಿಂಹಮೂರ್ತಿ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ಇದನ್ನೂ ಓದಿ | Adiyogi Statue | ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಭವ್ಯ ʼಆದಿಯೋಗಿʼ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

Exit mobile version