Site icon Vistara News

Siddheshwar Swamiji | ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ: ಮಾಜಿ ಸಿಎಂ ಸಿದ್ದರಾಮಯ್ಯ

siddaramaih visit ಸಿದ್ದೇಶ್ವರ ಸ್ವಾಮೀಜಿ ಸಿದ್ದರಾಮಯ್ಯ

ವಿಜಯಪುರ: ಇಲ್ಲಿನ ಜ್ಞಾನಯೋಗಾಶ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ (Siddheshwar Swamiji) ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದೆ. ವೈದ್ಯರ ಜತೆಗೆ ಮಾತನಾಡಿದ್ದೇನೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಸಿದ್ದೇಶ್ವರ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿದ್ದೇಶ್ವರ ಶ್ರೀಗಳು ಮಹಾನ್ ಸಂತರು. ಸಮಾಜದ ಒಳಿತಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಅವರಿಗೆ ಅಧ್ಯಾತ್ಮದ ಬಗ್ಗೆ ಅಪಾರ ಜ್ಞಾನವಿದೆ ಎಂದು ಹೇಳಿರುವ ಮಾಜಿ ಸಿಎಂ, ಶ್ರೀಗಳು ಕಣ್ಣು ಮುಚ್ಚಿಕೊಂಡಿದ್ದರಿಂದ ನಾನು ಅವರನ್ನು ಮಾತನಾಡಿಸಿಲ್ಲ. ಅವರಿಗೆ ಆಕ್ಸಿಜನ್ ಕೊಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಸ್ಲಿಂ ಧರ್ಮಗುರು ಮೌಲಾನಾ ತನ್ವೀರ್ ಪೀರಾ ಹಾಸ್ಮೀ, ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ, ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ, ಮಾಜಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಶಾಸಕರಾದ ಎ.ಎಸ್. ಪಾಟೀಲ್ ನಡಹಳ್ಳಿ, ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಮತ್ತಿತರ ಪ್ರಮುಖರು ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಶ್ರಮದ ಆವರಣದಲ್ಲಿ ಸೇರಿದ್ದಾರೆ.

ಇದನ್ನೂ ಓದಿ | Demonetisation verdict | 2016ರ ನೋಟು ಬ್ಯಾನ್‌ ಪರ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಹೇಳಿದ್ದೇನು?

Exit mobile version