Site icon Vistara News

Sringeri Sharada Peetham: ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ; ಸಾಂಪ್ರದಾಯಿಕ ಉಡುಗೆ ಕಡ್ಡಾಯ

Sringeri Sharada Peetham

ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ (Sringeri Sharada Peetham) ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಆಗಸ್ಟ್‌ 15ರಿಂದ ವಸ್ತ್ರ ಸಂಹಿತೆ ಜಾರಿಯಾಗಲಿದ್ದು, ಶಾರದಾಂಬೆಯ ದರ್ಶನ ಹಾಗೂ ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ಆಗಮಿಸುವ ಭಕ್ತರು ನಿಗದಿತ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ.

ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಆಗಸ್ಟ್‌ 15ರಿಂದ ಶಾರದಾ ದೇವಿ ದರ್ಶನಕ್ಕೆ ಬರುವ ಭಕ್ತಾಧಿಗಳು ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರಲು ಕೋರಲಾಗಿದೆ. ಸಾಂಪ್ರದಾಯಿಕ ಉಡುಗೆ ಧರಿಸದವರಿಗೆ ಅರ್ಧ ಮಂಟಪದೊಳಗೆ ಪ್ರವೇಶವಿರುವುದಿಲ್ಲ. ಹೊರಗಿನ ಪ್ರಾಕಾರದಿಂದಲೇ ದೇವಿ ದರ್ಶನ ಪಡೆಯಬೇಕು ಎಂದು ತಿಳಿಸಲಾಗಿದೆ.

ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ತೆರಳುವ ಭಕ್ತರು ಆಗಸ್ಟ್ 15 ರಿಂದ ಭಾರತೀಯ ಸಂಪ್ರದಾಯದಂತೆ ವಸ್ತ್ರ ಧರಿಸಿ ಶ್ರೀಗಳ ದರ್ಶನ ಪಡೆಯಬೇಕು. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯವನ್ನು ಧರಿಸಬೇಕು. ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜತೆಗೆ ದುಪ್ಪಟ ಅಥವಾ ಲಂಗ ದಾವಣಿ ಧರಿಸಿ ಶ್ರೀಗಳ ದರ್ಶನ ಪಡೆಯಬಹುದು. ಭಾರತೀಯ ಸಂಪ್ರದಾಯದ ಉಡುಗೆಗಳನ್ನು ಹೊರತುಪಡಿಸಿ ಇತರೆ ಉಡುಗೆ ತೊಟ್ಟು ಬಂದಲ್ಲಿ ಗುರುನಿವಾಸದ ಒಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್

ಹಾಸನ: ಹಾಸನ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಘಾಟ್​ ಪ್ರದೇಶದ ಹಲವಡೆ ಗುಡ್ಡ ಕುಸಿತದ ಪ್ರಕಣಗಳು ಉಂಟಾಗುತ್ತಿವೆ. ಅಂತೆಯೇ ಶಿರಾಡಿ ಘಾಟ್​ನಲ್ಲಿ (Shiradi Ghat) ಗುಡ್ಡ ಕುಸಿತ ಸಂಭವಿಸಲಿದೆ ಎಂಬ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಪ್ರಯಾಣವನ್ನು ನಿಷೇಧ ಮಾಡ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಹೊರತುಪಡಿಸಿದರೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 278ರಲ್ಲಿ ರಾತ್ರಿ ವೇಳೆ ವಾಹನಗಳು ಸಾಗದಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಮೂಲಕ ಸಾಗುವ ಈ ರಸ್ತೆಯೂ ಬಂದ್ ಆಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು (Bangalore To Mangalore) ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇನ್ನು ಚಾರ್ಮಾಡಿ ಘಾಟ್ ಒಂದೇ ಉಳಿದಿದ್ದು ಅದರ ಮೇಲೆ ವಾಹನ ದಟ್ಟಣೆ ಜಾಸ್ತಿಯಾಗಲಿದೆ. ಆ ರಸ್ತೆಯಲ್ಲೂ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕಣಗಳು ಸಂಭವಿಸುತ್ತಿರುವುದರಿಂದ ಸಂಚಾರ ಸುರಕ್ಷಿತವಲ್ಲ.

ಶಿರಾಡಿಘಾಟ್ ನ ದೊಡ್ಡತಪ್ಪು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು. ಅಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆಗಳಿವೆ. ಜುಲೈ 18ರಿಂದ ಅನ್ವಯವಾಗುವಂತೆ ಈ ರಸ್ತೆಯ ಮೂಲಕ ಪ್ರಯಾಣ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ದುರಸ್ತಿ ಆಗುವ ತನಕ ಎಲ್ಲ ರೀತಿಯ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಸುರಿಯುತ್ತಿರುವ ಕಾರಿನ ಮತ್ತಷ್ಟು ಭೂ ಕುಸಿತದ ಉಂಟಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿಷೇಧಿಸಿ ಡಿಸಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ -ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಅವರ ಸೂಚನೆ ನೀಡಿದ್ದಾರೆ.

Exit mobile version