Site icon Vistara News

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2

ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ (Karnataka SSLC 2024 Exam 2) ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ. ಈ ಹಿಂದೆ ಜೂನ್‌ 7ರಿಂದ 14ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆ-2 ನಿಗದಿಯಾಗಿತ್ತು. ಆದರೆ, ಪರೀಕ್ಷೆ ಮುಂದೂಡಿಕೆಯಾಗಿದ್ದು, ಜೂನ್‌ 14ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ | SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

Exit mobile version