Site icon Vistara News

SSLC Exam 2 Result 2024: ನಾಳೆ ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

SSLC Exam 3

Register for Karnataka SSLC Exam 3 2024 till July 17

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಜುಲೈ 10ರಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ವಿದ್ಯಾರ್ಥಿಗಳು ಎನ್‌ಐಸಿಯ ಜಾಲತಾಣ httsps://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 (SSLC Examination 2) ಜೂನ್‌ 14 ರಿಂದ 22ರವರೆಗೆ ನಡೆದಿತ್ತು. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 724 ಪರೀಕ್ಷಾ ಕೇಂದ್ರಗಳಲ್ಲಿ 2,23,308 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 1,44,160 ಬಾಲಕರು ಹಾಗೂ 7,9,148 ಬಾಲಕಿಯರು ಇದ್ದಾರೆ. ಫಲಿತಾಂಶ ಹೆಚ್ಚಳಕ್ಕಾಗಿ 13085 ವಿದ್ಯಾರ್ಥಿಗಳಿಂದ SSLC-2 ಪರೀಕ್ಷೆ ಬರೆದಿದ್ದರು.

ಇದನ್ನೂ ಓದಿ | Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?

ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

lkg ukg 1st standard admission Age Limit Revised In Karnataka

ಬೆಂಗಳೂರು: ಮಕ್ಕಳನ್ನು ಎಲ್‌ಕೆಜಿ, ಯುಕೆಜಿ (LKG, UKG) ಹಾಗೂ ಒಂದನೇ ತರಗತಿಗೆ ದಾಖಲಿಸಲು ರಾಜ್ಯ ಸರ್ಕಾರವು (Karnataka Government) ಈಗಾಗಲೇ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಆದರೆ, ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸದ ರಾಜ್ಯ ಸರ್ಕಾರವೀಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಅದರಂತೆ, 2023-24ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಎಲ್‌ಕೆಜಿ, ಯುಕೆಜಿ ಹಾಗೂ 1ನೇ ತರಗತಿಗೆ ದಾಖಲಿಸುವ ಮಕ್ಕಳ ಗರಿಷ್ಠ ವಯೋಮಿತಿಯನ್ನು ಪರಿಷ್ಕರಣೆ ಮಾಡಲಾಗಿದೆ.

ಹೀಗಿದೆ ಪರಿಷ್ಕರಿಸಿದ ವಯೋಮಿತಿ

ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಲು 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಈಗ ಗರಿಷ್ಠ ವಯೋಮಿತಿಯು 6 ವರ್ಷ ಆಗಿದೆ. ಯುಕೆಜಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ ಗರಿಷ್ಠ ವಯೋಮಿತಿಯಾಗಿದೆ. ಹಾಗೆಯೇ, ಒಂದನೇ ತರಗತಿಗೆ ಕನಿಷ್ಠ 6 ವರ್ಷ ಇದ್ದರೆ, ಗರಿಷ್ಠ 8 ವರ್ಷ ಇರಬೇಕಾಗುತ್ತದೆ. ಎಲ್‌ಕೆಜಿಗೆ 2023-24, ಯುಕೆಜಿಗೆ 2024-25 ಹಾಗೂ ಒಂದನೇ ತರಗತಿಗೆ 2025-26ನೇ ಶೈಕ್ಷಣಿಕ ಸಾಲಿನಿಂದ ಹೊಸ ಆದೇಶವು ಅನ್ವಯವಾಗಲಿದೆ. ಡ್ರಾಪ್‌ಔಟ್‌ ಆಗುವ ಮಕ್ಕಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರವು ಹೊಸ ಆದೇಶ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಜೂನ್‌ 1ನೇ ತಾರೀಖಿಗೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರುವ ಮಗುವನ್ನು ಮಾತ್ರ ಒಂದೇ ತರಗತಿಗೆ ದಾಖಲಿಸಿಕೊಳ್ಳುವಂತೆ ಕಳೆದ ವರ್ಷವೇ ಆದೇಶ ಹೊರಡಿಸಿದೆ. ಹೀಗಾಗಿ ಈ ಶೈಕ್ಷಣಿಕ ಸಾಲಿನಿಂದಲೇ ಎಲ್‌ಕೆಜಿ ತರಗತಿಗೆ ದಾಖಲು ಮಾಡಿಕೊಳ್ಳಲು ಜೂನ್‌ 01ನೇ ತಾರೀಖಿಗೆ ಅನ್ವಯವಾಗುವಂತೆ ನಾಲ್ಕು (4) ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಕಳೆದ ವರ್ಷ ಅಂದರೆ 2022 ಜುಲೈ 26ರಂದು ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ ಇನ್ನು ಮುಂದೆ ಒಂದು ಮಗುವಿಗೆ ಒಂದನೇ ತರಗತಿಗೆ ಪ್ರವೇಶ ನೀಡಬೇಕಾದರೆ ಜೂನ್‌ ಒಂದನೇ ತಾರೀಖಿಗೆ ಅನ್ವಯವಾಗುವಂತೆ ಆರು ವರ್ಷ ತುಂಬಿರಲೇಬೇಕು ಎಂದು ಸೂಚಿಸಿತ್ತು. ಈ ಆದೇಶವನ್ನು 2023-24 ನೇ ಸಾಲಿನಿಂದಲೇ ಜಾರಿಗೆ ತರಬೇಕೆಂದು ಸೂಚಿಸಲಾಗಿತ್ತಾದರೂ ಪೋಷಕರು ಮತ್ತು ಶಾಲೆಗಳ ಆಡಳಿತ ಮಂಡಳಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಇದನ್ನು 2025-26 ನೇ ಸಾಲಿನ ಶೈಕ್ಷಣಿಕ (Education News) ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದೆ.

ಇದನ್ನೂ ಓದಿ: LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

ಹೊಸ ನಿಯಮದಂತೆ 2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ನಿಮ್ಮ ಮಗುವನ್ನು ಸೇರಿಸಿಬೇಕೆಂದರೆ ಎಲ್‌ಕೆಜಿ ಸೇರ್ಪಡೆ ವಿಷಯದಲ್ಲಿ ಈಗಿನಿಂದಲೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಂದರೆ 2025-26ನೇ ಸಾಲಿಗೆ ಬರುವಾಗ ಒಂದನೇ ತರಗತಿ ಸೇರುವ ಮಗುವಿಗೆ ಆರು ವರ್ಷ ತುಂಬಿರುವುದು ಕಡ್ಡಾಯ. ಹಾಗಾಗಿ, ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗ ನಿಮ್ಮ ಮಗು ಕಡ್ಡಾಯವಾಗಿ ನಾಲ್ಕು ವರ್ಷ ಪೂರ್ಣಗೊಳಿಸಿರಬೇಕು. ಇಲ್ಲದೇ ಇದ್ದಲ್ಲಿ ಎಲ್‌ಕೆಜಿ ಅಥವಾ ಯುಕೆಜಿಯಲ್ಲಿಯೇ ಮಗು ಒಂದು ವರ್ಷ ಹೆಚ್ಚಾಗಿ ಉಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಲಿದ್ದು, ಇದು ಮಗುವಿನ ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರಬಹುದಾಗಿದೆ.

Exit mobile version