Site icon Vistara News

SSLC Exam Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೀಘ್ರ; ಇಲ್ಲಿದೆ ಮಹತ್ವದ ಮಾಹಿತಿ

SSLC Exam 3

Register for Karnataka SSLC Exam 3 2024 till July 17

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam Result 2024) ಬರೆದಿದ್ದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾದುನೋಡುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿತ್ತು, ಆದರೆ, ರಾಜ್ಯದಲ್ಲಿ ಮಂಗಳವಾರ ಎರಡನೇ ಹಂತದ ಮತದಾನವೂ ಮುಗಿಲಿರುವ ಹಿನ್ನೆಲೆಯಲ್ಲಿ ಇನ್ನೊಂದು ವಾರದೊಳಗೆ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮೇ 7 ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿರುವುದರಿಂದ ಮೇ 9 ಮತ್ತು 10ರಂದು ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಸಜ್ಜಾಗಿದೆ ಎನ್ನಲಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ.

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Exit mobile version