ಬೆಂಗಳೂರು: SSLC ಪರೀಕ್ಷೆ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಂಗಳವಾರ ತಿಳಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿತ್ತು. ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದೆ.
ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆ ಉತ್ತರಪತ್ರಿಕೆಯ ಮೌಲ್ಯಮಾಪನ ಮುಗಿದಿದೆ. ಫಲಿತಾಂಶ ಪ್ರಕಟಿಸುವ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೇ 3 ನೇ ವಾರ ಫಲಿತಾಂಶ ಹೊರ ಬೀಳಲಿದೆ ಎಂದು ಹೇಳಿದ್ದಾರೆ.
ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ?
- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ಸೈಟ್ http://kseeb.kar.nic.in/ ಗೆ ಅಥವಾ karresults.nic.in ಗೆ ಭೇಟಿ ನೀಡಿ .
- ಓಪನ್ ಆದ ಪೇಜ್ನಲ್ಲಿ ವಿದ್ಯಾರ್ಥಿಗಳು ತಮ್ಮ ಎಸ್ಎಸ್ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್ ಮಾಡಿ.
- ನಂತರ ‘ Submit ‘ ಎಂಬಲ್ಲಿ ಕ್ಲಿಕ್ ಮಾಡಿ.
- ಫಲಿತಾಂಶ ಪೇಜ್ ಓಪನ್ ಆಗುತ್ತದೆ.
- ಡೌನ್ಲೋಡ್ ಮಾಡಿ ಮುಂದಿನ ರೆಫರೆನ್ಸ್ಗಾಗಿ ಪ್ರಿಂಟ್ ತೆಗೆದುಕೊಳ್ಳಿ .
ಇದನ್ನೂ ಓದಿ: ಪಿಯುಸಿ ಪರೀಕ್ಷೆಗೂ ಹಿಜಾಬ್ ಧರಿಸುವಂತಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ –