ಬೆಂಗಳೂರು: ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯು ಮಾರ್ಚ್-ಏಪ್ರಿಲ್‌ನಲ್ಲಿ ನಡೆದಿತ್ತು. ಇದೀಗ ಎಸ್ಸೆಸ್ಸೆಲ್ಸಿ (sslc) ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಎಸ್ಸೆಸ್ಸೆಲ್ಸಿ ಬೋರ್ಡ್ ಬಿಡುಗಡೆ ಮಾಡಿದೆ. ಇದೇ ಜೂನ್ 27 ರಿಂದ ಜುಲೈ 4ರ ವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ಪರೀಕ್ಷಾ ಸಮಯವಾಗಿದ್ದು, 15 ನಿಮಿಷ ಪ್ರಶ್ನೆ ಪತ್ರಿಕೆ ಓದಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ. ಸುಮಾರು 20,423 ವಿದಾರ್ಥಿಗಳು ಪೂರಕ ಪರೀಕ್ಷೆ ನೊಂದಣಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ |ಎಸ್‌ಎಸ್‌ಎಲ್‌ಸಿ ನಂತರ ಮುಂದೇನು?
ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ
ದಿನಾಂಕ- ವಿಷಯ
ಜೂನ್ 27- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಜೂನ್ 28- ಪ್ರಥಮ ಭಾಷೆ (ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ತಮಿಳು, ಉರ್ದು, ಸಂಸ್ಕೃತ, ಇಂಗ್ಲೀಷ್
ಜೂನ್ 29- ದ್ವೀತಿಯ ಭಾಷೆ ( ಇಂಗ್ಲಿಷ್- ಕನ್ನಡ)
ಜೂನ್ 30- ಸಮಾಜಶಾಸ್ತ್ರ
ಜುಲೈ 1- ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ ,ಕೊಂಕಣಿ, ತುಳು,)
ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಮಡ್ ವೆಲ್‌ನೆಸ್
ಜುಲೈ 2- ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್,-2,ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜುಲೈ 4- ಗಣಿತ, ಸಮಾಜಶಾಸ್ತ್ರ
ಶಾಲಾ ಸಮವಸ್ತ್ರ ಕಡ್ಡಾಯ
ಮಾರ್ಚ್ ವೇಳೆ ಮುಖ್ಯ ಪರೀಕ್ಷೆ ನಡೆದಾಗ ಶಾಲಾ ಸಮವಸ್ತ್ರ ಕಡ್ಡಾಯವಾಗಿತ್ತು. ಹೀಗಾಗಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಹ ಸಮವಸ್ತ್ರ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವುದು ಕಡ್ಡಾಯವಾಗಿದೆ. ಹಿಜಾಬ್, ಬುರ್ಖಾ ಧರಿಸಿ ಬಂದವರಿಗೆ ವಿಶೇಷ ಕೊಠಡಿ ವ್ಯವಸ್ಥೆ ಇರಲಿದ್ದು ವಿದ್ಯಾರ್ಥಿಗಳು ಅಲ್ಲಿ ಬುರ್ಕಾ ತೆಗೆದಿರಿಸಬಹುದಾಗಿದೆ.
ನಾಲ್ಕನೇ ಅಲೆ ಭೀತಿ ಫೇಸ್ ಮಾಸ್ಕ್ ಕಡ್ಡಾಯ
ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆ ವಿದ್ಯಾರ್ಥಿಗಳಿಗೆ ಫೇಸ್ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಪರೀಕ್ಷೆ ನಡೆಯುವ ಮುನ್ನ ಹಾಗೂ ನಂತರದ ಸಮಯದಲ್ಲಿ ಕೇಂದ್ರಗಳು ಸಂಪೂರ್ಣ ಸ್ಯಾನಿಟೈಸ್ ಆಗಬೇಕು. ಪರೀಕ್ಷಾ ಆವರಣ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರವೇ ಪರೀಕ್ಷಾ ಕೊಠಡಿಗೆ ಕಳುಹಿಸಬೇಕು ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೇವೆ
ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ಸಿನಲ್ಲಿ ಪರೀಕ್ಷಾ ದಿನಗಳಂದು ಮಾತ್ರ ಹಾಲ್ ಟಿಕೆಟ್ ತೋರಿಸಿ ಪರೀಕ್ಷಾ ಕೇಂದ್ರಕ್ಕೆ ಹೋಗಬಹುದಾಗಿದೆ. ಈ ಕುರಿತು ಸಂಸ್ಥೆಗಳು ಪ್ರಕಟಣೆ ಹೊರಡಿಸಿದ್ದು ನಗರ, ಹೊರವಲಯದಲ್ಲಿ ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಇದನ್ನೂ ಓದಿ | SSLC: ಸಾಧನೆಯ ಶಿಖರವೇರಿದ ಶ್ರಾವ್ಯ ಎಂಬ ಮುಗ್ಧ ಮನಸು