ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ಮೂಲಕ ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಡಿ ಗ್ರೂಪ್ ನೌಕರಿಗೂ ಸಂದರ್ಶನದಿಂದ ವಿನಾಯಿತಿ ನೀಡಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಸ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಸಂದರ್ಶನದ ಹೆಸರಿನಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತಿದೆ ಎಂಬ ದೂರಿಗೆ ಪರಿಹಾರ ಸಿಗುವ ನಿರೀಕ್ಷೆಯಿದೆ.
ಸಚಿವ ಸಂಪುಟದ ಪ್ರಮುಖ ತೀರ್ಮಾನಗಳು
1. ಸೆಪ್ಟೆಂಬರ್ 11ರಿಂದ ಹತ್ತು ಕೆಲಸ ದಿನ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ತೀರ್ಮಾನ
2. ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ದಟ್ಟಣೆ ಕಡಿಮೆ ಮಾಡಲು ಸಿಂಗೇನ ಅಗ್ರಹಾರದಲ್ಲಿ 42 ಜಮೀನು ನೀಡಲು ನಿರ್ಧಾರ
3. ಲೋಕಾಯುಕ್ತ ಬಲಪಡಿಸಲು ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಒಪ್ಪಿಗೆ
3. ಬೀದರ್, ಚಾಮರಾಜನಗರ, ಹಾಸನ, ಕೊಡುಗು, ಕೊಪ್ಪಳ, ಮಂಡ್ಯ, ಬಾಗಲಕೋಟೆ ಜಿಲ್ಲೆಯಲ್ಲಿ ಸ್ನಾತಕೋತ್ತರ ವಿವಿ ಆರಂಭಕ್ಕೆ ತೀರ್ಮಾನ
4. ರಾಜ್ಯದಲ್ಲಿ 4,244 ಹೊಸ ಅಂಗನವಾಡಿ ಸ್ಥಾಪನೆಗೆ ಅನುಮೋದನೆ
೫. ಶಿರಾದಲ್ಲಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ಐದು ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ
6. ಮೃತಪಟ್ಟ ಸೈನಿಕರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ
7. ಸನ್ನಡತೆ ಆಧಾರದಲ್ಲಿ 84 ಕೈದಿಗಳ ಬಿಡುಗಡೆಗೆ ಸಮ್ಮತಿ