ವಿಜಯಪುರ: ಫೆಬ್ರವರಿ 4ರಿಂದ ಎರಡು ದಿನಗಳ ಕಾಲ ವಿಜಯಪುರದಲ್ಲಿ (vijayapura) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (Karnataka Working Journalists Association) 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ನಗರದ ಶ್ರೀ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದೆ.
ನಾಡಿನಾದ್ಯಂತದಿಂದ ಆಗಮಿಸಲಿರುವ ಪತ್ರಕರ್ತರ ಸ್ವಾಗತಕ್ಕೆ ಗುಮ್ಮಟನಗರಿ ಸಜ್ಜಾಗಿದ್ದು, ಝಗಮಗಿಸುವ ವಿದ್ಯುದ್ದೀಪಗಳಿಂದ ರಂಗಮಂದಿರ ಅಲಂಕೃತಗೊಂಡಿದೆ. ಸಮ್ಮೇಳನದ ಸಾನ್ನಿಧ್ಯವನ್ನು ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿಗಳು ವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಸಚಿವರಾದ ಕಾರಜೋಳ, ನಿರಾಣಿ, ಸಿ.ಸಿ.ಪಾಟೀಲ್, ಶಾಸಕ ಯತ್ನಾಳ ಅವರು ಭಾಗವಹಿಸಲಿದ್ದಾರೆ. ಗೋವಿಂದ ಕಾರಜೋಳ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಚಿವ ಮುರುಗೇಶ ನಿರಾಣಿಯವರಿಂದ ವ್ಯಂಗ್ಯಚಿತ್ರ ಪ್ರದರ್ಶನದ ಉದ್ಘಾಟನೆ ನಡೆಯಲಿದೆ. ಛಾಯಾಚಿತ್ರ ಪ್ರದರ್ಶನವನ್ನು ಸಚಿವ ಸಿ ಸಿ ಪಾಟೀಲ್ ನಡೆಸಿಕೊಡಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳರಿಂದ ವಸ್ತು ಪ್ರದರ್ಶನದ ಉದ್ಘಾಟನೆ ನಡೆಯಲಿದೆ. ಕಾನಿಪ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ: ವಿಜಯಪುರದಲ್ಲಿ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನ: ಅಧ್ಯಕ್ಷ ಶಿವಾನಂದ ತಗಡೂರು
ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಹಾಲಪ್ಪ ಆಚಾರ್, ನಾರಾಯಣಗೌಡ, ಶಂಕರ ಪಾಟೀಲ ಮುನೇನಕೊಪ್ಪ, ಕೆ.ಗೋಪಾಲಯ್ಯ…ಹಾಗೂ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ಪಾಲ್ಗೊಳ್ಳಲಿದ್ದಾರೆ.