Site icon Vistara News

Koppala News: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಮಾಜಿ ಶಾಸಕ ಪರಣ್ಣ ಮುನವಳ್ಳಿ ಭವಿಷ್ಯ

Gangavathi Former MLA Paranna Munavalli statement

ಗಂಗಾವತಿ: ಮುಂಬರುವ ಲೋಕಸಭಾ ಚುನಾವಣೆಯ (Lok Sabha Election) ಬಳಿಕ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ (Congress Government) ಪತನವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಸ್ಥಿತ್ಯಂತರ ಶುರುವಾಗಲಿದೆ ಎಂದು ಬಿಜೆಪಿಯ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯ ಮಾತ್ರವಲ್ಲ, ಇಡೀ ರಾಷ್ಟ್ರದಲ್ಲಿ ಸ್ಪಷ್ಟ ಬಹುಮತ ಲಭಿಸಲಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ 26 ಜನ ಬಿಜೆಪಿ ಸಂಸದರಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಯೋಗ್ಯವಲ್ಲದ ಮತ್ತು ಜನರನ್ನು ಆಮೀಷದ ಬಲೆಗೆ ಬೀಳಿಸುವ ಉದ್ದೇಶಕ್ಕೆ ಜಾರಿ ತಂದಿರುವ ಪುಕಟ್ಟೆ ಭಾಗ್ಯಗಳಿಂದ ಒಂದೆರಡು ಸ್ಥಾನಗಳು ಬಿಜೆಪಿಗೆ ಕೈ ತಪ್ಪಬಹುದು.

ಇದನ್ನೂ ಓದಿ: Aditya- L1 : ಆದಿತ್ಯ ಎಲ್​1 ಮಿಷನ್​ನ ಉಡಾವಣೆಯ ಮೊದಲ ಚಿತ್ರಗಳು ಹೀಗಿವೆ

ಆದರೆ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ದಾಖಲಿಸಲಿದ್ದು, ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪತನದ ಹಾದಿ ಆರಂಭವಾಗಲಿದೆ. ಸ್ವತಃ ಕಾಂಗ್ರೆಸ್ಸಿಗರೇ ಸರ್ಕಾರವನ್ನು ಉರುಳಿಸಲಿದ್ದಾರೆ ಎಂದು ಮುನವಳ್ಳಿ ಭವಿಷ್ಯ ನುಡಿದರು.

ಅನುಷ್ಠಾನಕ್ಕೆ ಯೋಗ್ಯವಲ್ಲದ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸಂಪೂರ್ಣ ಹಾಳುಗೆಡವಲು ಮುಂದಾಗಿದೆ. ಯೋಜನೆಗಳ ಅನುಷ್ಠಾನಕ್ಕೆ ಮಾಸಿಕ ಸಾವಿರಾರು ಕೋಟಿ ಮೊತ್ತದ ಹಣ ಬೇಕಿದೆ.

ಈ ಯೋಜನೆಗಳಿಗೆ ಹಣ ವಿನಿಯೋಗಿಸಿದರೆ ಅಭಿವೃದ್ಧಿಗೆ ಹಣಕಾಸಿನ ಸಮಸ್ಯೆ ಎದುರಾಗಲಿದ್ದು, ರಾಜ್ಯದಲ್ಲಿ ಅಭಿವೃದ್ಧಿ, ಮೂಲ ಸೌಲಭ್ಯಗಳ ಕುಂಠಿತವಾಗಲಿವೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ವತಃ ಕಾಂಗ್ರೆಸ್‌ನ ಕೆಲ ಶಾಸಕರಿಗೆ ಅಸಮಧಾನವಿದೆ.

ಇದನ್ನೂ ಓದಿ: Weather Report : ಉತ್ತರ-ದಕ್ಷಿಣ ಕರ್ನಾಟಕದಲ್ಲಿ ಇನ್ನೆರಡು ದಿನ ಭಾರಿ ಮಳೆ; ಬೆಂಗಳೂರಲ್ಲಿ ರಾತ್ರಿ ಆರ್ಭಟ!

ಈಗಾಗಲೆ 45ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು, ಬಿಜೆಪಿಯ ಕೆಲ ರಾಷ್ಟ್ರಮಟ್ಟದ ನಾಯಕರ ಸಂಪರ್ಕದಲ್ಲಿರುವ ಸುದ್ದಿ ವಾಸ್ತವವಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ವೃದ್ಧಿಸಬಹುದು. ಚುನಾವಣೆಯ ಬಳಿಕವಂತೂ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಶಾಸಕ ಮುನವಳ್ಳಿ ತಿಳಿಸಿದ್ದಾರೆ.

Exit mobile version