Site icon Vistara News

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ನೋಂದಾಯಿತ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿದಿನ ಮುಂಜಾನೆಯ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಹಾಡಿಸುವ ಸಂಪ್ರದಾಯವು ರಾಜ್ಯದ ಎಲ್ಲಾ ಶಾಲೆಗಳಲ್ಲಿ ರೂಢಿಯಲ್ಲಿದೆ. ಆದರೆ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಹಾಡಿಸುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅದೇಶದಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಪರ ಕಾರ್ಯದರ್ಶಿ ಚಂದ್ರಶೇಖರ್ ರಾಷ್ಟ್ರಗೀತೆ ಕಡ್ಡಾಯಗೊಳಿಸುವ ಈ ಆದೇಶ ಹೊರಡಿಸಿದ್ದಾರೆ.

ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸದ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ(ಆಡಳಿತ) ಉಪನಿರ್ದೇಶಕ, ಬೆಂಗಳೂರು (ಉತ್ತರ), ಬೆಂಗಳೂರು(ದಕ್ಷಿಣ) ಉಪನಿರ್ದೇಶಕರು ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಈ ಸಂಗತಿಯನ್ನು ಖಾತ್ರಿಪಡಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನು ಮೂಡಿಸಬೇಕಿರುವ ಹಿನ್ನೆಲೆಯಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ | Azadi Ka Amrit Mahotsav | ಬ್ರಿಟಿಷರ ವಿರುದ್ಧ ಸಿಂಹಗರ್ಜನೆ‌ ಮಾಡಿದ್ದ ಮುಂಡರಗಿ ಭೀಮರಾಯ!

Exit mobile version