ಬೆಂಗಳೂರು: ಬಲಿಜ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ಬಲಿಜ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ (Balija Development Corporation) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಷಾಹೀನ್ ಪರ್ವೀನ್ ಕೆ. ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ʻಕರ್ನಾಟಕ ಆರೋಗ್ಯ ಸಂಜೀವಿನಿʼ ಯೋಜನೆಯ ಕಾರ್ಯನೀತಿ ಪ್ರಕಟ
ಬಲಿಜ ಸಮುದಾಯಕ್ಕೆ ಉದ್ಯೋಗದಲ್ಲಿ ಒಬಿಸಿ 3ಎ ಮೀಸಲಾತಿ ಇದ್ದು, ಶಿಕ್ಷಣದಲ್ಲಿ 2ಎ ಮೀಸಲಾತಿ ನೀಡಲಾಗಿದೆ. ಸಮುದಾಯಲ್ಲಿ ಸಾಕಷ್ಟು ಜನರು ಬಡವರಿದ್ದು, ತಮಗೆ ಉದ್ಯೋಗದಲ್ಲಿ 2ಎ ಮೀಸಲಾತಿ ನೀಡಬೇಕು ಎಂದು ಹಲವು ವರ್ಷಗಳಿಂದ ಸಮುದಾಯ ಸರ್ಕಾರವನ್ನು ಒತ್ತಾಯ ಮಾಡುತ್ತಲೇ ಇದೆ. ಈ ನಡುವೆ ಬಲಿಜ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.