Site icon Vistara News

Hadapada Development Corporation: ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ

Hadapada Development Corporation

#image_title

ಬೆಂಗಳೂರು: ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ʼಕರ್ನಾಟಕ ಹಡಪದ ಅಭಿವೃದ್ಧಿ ನಿಗಮʼ (Hadapada Development Corporation) ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜತೆಗೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಹಡಪದ ಸಮುದಾಯಕ್ಕೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ನೀಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಹಡಪದ ಅಭಿವೃದ್ಧಿ ನಿಗಮ‌ ಸ್ಥಾಪನೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಡಪದ ಸಮಾಜದ ಮುಖಂಡರು ಸೋಮವಾರ ವಿಧಾನಸೌಧದಲ್ಲಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತಿತರರು ಇದ್ದರು.

Exit mobile version