Site icon Vistara News

ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: ಜೂನ್‌ 27ಕ್ಕೆ ಪ್ರದಾನ

kempegowda statue

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸ್ಥಾಪಿಸಿದೆ. ಹಲವು ರಂಗಗಳ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿದ್ದು, ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಿದೆ.

ಈ ಕುರಿತು ಐಟಿಬಿಟಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಸರ್ಕಾರದ ನವೋದ್ಯಮ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದಿದ್ದಾರೆ.

ಉದ್ಯಮಿ ಟಿ.ವಿ.ಮೋಹನದಾಸ್ ಪೈ, ವಿದ್ವಾಂಸ ಡಾ. ರಾಮಸ್ವಾಮಿ ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ. ಶಂಕರಲಿಂಗೇಗೌಡ ಅವರು ಈ ಆಯ್ಕೆ ಸಮಿತಿಯ ಸದಸ್ಯರಾಗಿರುತ್ತಾರೆ., ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ ಅವರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಕೆಂಪೇಗೌಡರ ಜಯಂತಿಯು ಈ ವರ್ಷ ಜೂನ್‌ 27ರಂದು ಇದ್ದು ಅಂದೇ‌ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ವೇಳೆಗೆ ಸಮಿತಿಯು ಅರ್ಹ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ನಾಡಪ್ರಭುವಿನ ಜಯಂತಿಯನ್ನು ಸರ್ಕಾರದ ವತಿಯಿಂದ ಸಂಭ್ರಮದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ ಎಂದು ಅಶ್ವತ್ಥನಾರಾಐಣ ಹೇಳಿದ್ದಾರೆ.

ಇದನ್ನೂ ಓದಿ | 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕೆಲಸ ಎಷ್ಟಾಗಿದೆ ನೋಡಿ!

Exit mobile version