ಮಂಗಳೂರು: ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆರ್‌ಎಸ್‌ಎಸ್ ಕರ್ನಾಟಕ ದಕ್ಷಿಣ ಪ್ರಾಂತದ ಬೈಠಕ್ ನಡೆಯಲಿದೆ.
ಪುತ್ತೂರಿನ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಿನಗಳ ಕಾಲ ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಬೈಠಕ್ ನಡೆಯಲಿದ್ದು, ಸಂಘಟನೆಯ ಸಹ ಸರಕಾರ್ಯವಾಹಕ ಮುಕುಂದ್ ಜೀ ನೇತೃತ್ವ ವಹಿಸಲಿದ್ದಾರೆ.
ಕ್ಷೇತ್ರೀಯ ಸಂಘ ಚಾಲಕ ವಿ.ನಾಗರಾಜ್, ಕ್ಷೇತ್ರೀಯ ಪ್ರಚಾರಕ ಸುಧೀರ್, ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಸೇರಿದಂತೆ ಸಂಘದ ಪ್ರಮುಖರು ಭಾಗಿಯಾಗಲಿದ್ದಾರೆ. ಆರ್‌ಎಸ್‌ಎಸ್ ಅಖಿಲ ಭಾರತ ಪ್ರತಿನಿಧಿ ಸಭಾದ ಪ್ರಮುಖರು ಸೇರಿ ಸುಮಾರು 800 ಮಂದಿ ಭಾಗಿಯಾಗಲಿದ್ದಾರೆ. ಆಗಸ್ಟ್ 27ರಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಮನ್ವಯ ಬೈಠಕ್ ನಡೆಯಲಿದ್ದು, ಬಿಜೆಪಿಯಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರಿಗೆ ಆಹ್ವಾನ ನೀಡಲಾಗಿದೆ.
ಇತ್ತೀಚಿನ ಕೆಲವು ಬೆಳವಣಿಗೆಗಳು ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆಯಿದೆ. ಆಗಸ್ಟ್ 28ರಂದು ಆರ್‌ಎಸ್‌ಎಸ್ ದಕ್ಷಿಣ ಪ್ರಾಂತದ ಜವಾಬ್ದಾರಿಗಳ ಬದಲಾವಣೆ ಸಾಧ್ಯತೆ ಇದೆ. ಚುನಾವಣಾ ವರ್ಷವಾದ ಕಾರಣ ಹಲವು ರಾಜಕೀಯ ವಿಚಾರಗಳು, ಸಂಘದ ಕಾರ್ಯಚಟುವಟಿಕೆ ಹಾಗೂ ಭಾರತೀಯ ಜನತಾ ಪಕ್ಷದ ನಡೆಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ | ಆರ್‌ಎಸ್‌ಎಸ್‌ಗೆ ಮುಜುಗರ ತಂದದ್ದೇ ನಿತಿನ್ ಗಡ್ಕರಿ ಪದಚ್ಯುತಿಗೆ ಕಾರಣವೇ?