Site icon Vistara News

Shivamogga Airport: ಇಂದು ಶಿವಮೊಗ್ಗದಲ್ಲಿ ರಾಜ್ಯದ 2ನೇ ಅತಿದೊಡ್ಡ ಏರ್‌ಪೋರ್ಟ್‌ ಲೋಕಾರ್ಪಣೆ; ಮೋದಿ ಕಾರ್ಯಕ್ರಮದ ವಿವರ ಏನು?

States second largest airport to be inaugurated in Shivamogga tomorrow by PM Modi Shivamogga Airport updates

ಶಿವಮೊಗ್ಗ: ತಾಲೂಕಿನ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು (Shivamogga Airport) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ (ಫೆ.27) ರಂದು ಲೋಕಾರ್ಪಣೆಗೊಳಿಸಲಿದ್ದು, ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದೆ. ಬೆಳಗ್ಗೆ 11.35ಕ್ಕೆ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಮೋದಿ ಆಗಮಿಸಲಿದ್ದು, ಈ ವಿಮಾನವೇ ಅಧಿಕೃತವಾಗಿ ಲ್ಯಾಂಡ್‌ ಆಗಲಿರುವ ಪ್ರಥಮ ವಿಮಾನವಾಗಲಿದೆ. 11.45 ರಿಂದ 11.55ರ ವರೆಗೆ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಮೋದಿ ವೀಕ್ಷಣೆ ನಡೆಸಲಿದ್ದು, ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಏರ್ಪೋರ್ಟ್‌ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅಲ್ಲದೆ, ಇದು ರಾಜ್ಯದಲ್ಲೇ ೨ನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಖ್ಯಾತಿಯನ್ನೂ ಹೊಂದಿದೆ.

ವಿಮಾನ ನಿಲ್ದಾಣ ಮತ್ತು ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 2 ಕಡೆ ಊಟದ ವ್ಯವಸ್ಥೆ ಇದ್ದು, ಒಂದೊಂದು ಕಡೆ 100 ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ. ಕಾರ್ಯಕ್ರಮದ ವೀಕ್ಷಣೆಗೆ 4 ಕಡೆ ವಿಶಾಲವಾದ ಪ್ರೊಜೆಕ್ಟರ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಜತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಶಿವಮೊಗ್ಗ ಏರ್ಪೋರ್ಟ್‌ನ ವಿಹಂಗಮ ನೋಟ

ಇದನ್ನೂ ಓದಿ: HD Kumaraswamy: ಮೊದಲು ನಿಮ್ಮ ಕುಟುಂಬವನ್ನು ನೆಟ್ಟಗೆ ಇಟ್ಟುಕೊಳ್ಳಿ; ಜೋಶಿಗೆ ಎಚ್‌.ಡಿ. ಕುಮಾರಸ್ವಾಮಿ ತಿರುಗೇಟು

ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ವಿವರ

ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ 449.22 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಎಟಿಆರ್ 72ರಿಂದ ಏರ್‌ಬಸ್‌ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ. ರನ್‌ ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಅನ್ನು ನಿರ್ಮಾಣ ಮಾಡಲಾಗಿದೆ. ಏರ್ ಟ್ರಾಫಿಕ್‌ ಸೆಂಟರ್ ಸೇರಿದಂತೆ ಇನ್ನಿತರೆ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ.

995 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ 103 ಕಿ.ಮೀ. ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಶಂಕುಸ್ಥಾಪನೆ, 97.18 ಕೋಟಿ ರೂ. ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 862 ಕೋಟಿ ರೂ. ಮೊತ್ತದ ಕಾಮಗಾರಿ ಶಂಕುಸ್ಥಾಪನೆ ಮತ್ತು 91.50 ಕೋಟಿ ರೂ. ಮೊತ್ತದ ಕಾಮಗಾರಿ ಲೋಕಾರ್ಪಣೆ ನಡೆಯಲಿದೆ.

66.44 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 14.77 ಕಿಮೀ ಉದ್ದದ ಶಿಕಾರಿಪುರ ಬೈಪಾಸ್ ನಿರ್ಮಾಣ, 96.20 ಕೋಟಿ ರೂ. ವೆಚ್ಚದಲ್ಲಿ ರಾ.ಹೆ. 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮೇಗರವಳ್ಳಿಯಿಂದ ಆಗುಂಬೆವರೆಗೆ 17.77 ಕಿ.ಮೀ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ, 56.56 ಕೋಟಿ ರೂ. ವೆಚ್ಚದಲ್ಲಿ ರಾ.ಹೆ 169 ಶಿವಮೊಗ್ಗ-ಮಂಗಳೂರು ರಸ್ತೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ 1.29 ಕಿ.ಮೀ ರಸ್ತೆ ನಿರ್ಮಾಣ ಮತ್ತು ತಿರುವಿನ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಒಟ್ಟು 896.16 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ 2 ಲಕ್ಷ ಲೀಟರ್ ಸಾಮರ್ಥ್ಯದ ಹಾಲು, ಮೊಸರು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನೆ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮ್ಯಾಮ್ಕೋಸ್‌ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.

ಇದನ್ನೂ ಓದಿ: Shivamogga Airport: ಸೋಮವಾರ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ, ತಿಳಿಯಲೇಬೇಕಾದ 5 ಅಂಶ ಇಲ್ಲಿವೆ

ಪೊಲೀಸ್‌ ಬಂದೋಬಸ್ತ್‌ ಹೇಗಿರಲಿದೆ?

ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಎಲ್ಲ ಸಾರ್ವಜನಿಕರು ಬೆಳಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ. ಬಳಿಕ ಯಾರನ್ನೂ ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದೆ.

ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು. ಯಾರು ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‌ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಪ್‌ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‌ಗಳಿಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ.

ಶೂನ್ಯ ಸಂಚಾರ ಮತ್ತು ಪರ್ಯಾಯ ಮಾರ್ಗ ಅಧಿಸೂಚನೆ

ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕೆಳಕಂಡಂತೆ ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ.

ಏನೇನು ಬದಲಾವಣೆ?

27-02-2023ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‌ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‌ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.

ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (27-02-2023ರಂದು ಮಾತ್ರ):

ಇದನ್ನೂ ಓದಿ: PM Modi: ನಾಳೆ ಕುಂದಾನಗರಿಯಲ್ಲಿ ಮೋದಿ ಮೇನಿಯಾ; ಪೌರ ಕಾರ್ಮಿಕ ಮಹಿಳೆ ಸೇರಿ ಐವರು ಸಾಮಾನ್ಯ ಕಾರ್ಮಿಕರಿಂದ ಪ್ರಧಾನಿಗೆ ಸ್ವಾಗತ

ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ ( 27-02-2023 ರಂದು ಮಾತ್ರ):

Exit mobile version