Straight Fight Between BJP And Congress, Who Will Win In Gadag District Battleಗದಗ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಮುದ್ರಣ ಕಾಶಿಯಲ್ಲಿ ಕೈ-ಕಮಲ ಕದನ, ಯಾರಿಗೆ ಗೆಲುವು? - Vistara News

ಕರ್ನಾಟಕ

ಗದಗ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಮುದ್ರಣ ಕಾಶಿಯಲ್ಲಿ ಕೈ-ಕಮಲ ಕದನ, ಯಾರಿಗೆ ಗೆಲುವು?

ಗದಗ ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಹಣಾಹಣಿ ಇದೆ. ಶಿರಹಟ್ಟಿ ಹೊರತುಪಡಿಸಿ ಉಳಿದ ಎಲ್ಲ ಮೂರು ಕ್ಷೇತ್ರಗಳಲ್ಲಿ ಸಾಂಪ್ರದಾಯಿಕ ಎದುರಾಳಿಗಳೇ ಇದ್ದಾರೆ. ಆದರೂ, ಜಿದ್ದಾಜಿದ್ದಿಯ ಫೈಟ್‌ ನಿರೀಕ್ಷೆ ಮಾಡಬಹುದಾಗಿದೆ.

VISTARANEWS.COM


on

Gadag Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಮಹಲಿಂಗೇಶ್ ಹಿರೇಮಠ, ವಿಸ್ತಾರ ನ್ಯೂಸ್‌, ಗದಗ

ಗದಗ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಪಕ್ಷಗಳ ಪ್ರಯೋಗಗಳು, ಹೊಸ ಹೊಸ ಅಭ್ಯರ್ಥಿಗಳು, ರಾಜಕೀಯ ತಂತ್ರಗಳು, ಹೆಚ್ಚಿನ ಬಂಡಾಯ ಅಭ್ಯರ್ಥಿಗಳ ಸ್ಪರ್ಧೆ ಕಡಿಮೆಯೇ. ಹಾಗಂತ, ರಾಜಕೀಯ ಮೇಲಾಟ, ವಿಧಾನಸಭೆ ಚುನಾವಣೆಯ ಕಾವು, ತಂತ್ರ-ಪ್ರತಿತಂತ್ರ, ಅಬ್ಬರದ ಪ್ರಚಾರಕ್ಕೇನೂ ಕಡಿಮೆ ಇಲ್ಲ. ಗದಗ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಬಿಜೆಪಿಯ ಪ್ರಾಬಲ್ಯ ಜಾಸ್ತಿ ಇದ್ದರೂ, ಕಮಲ ಪಾಳಯಕ್ಕೆ ಕಾಂಗ್ರೆಸ್‌ ನೀಡುತ್ತಿರುವ ಪೈಪೋಟಿ ಏನೂ ಕಡಿಮೆ ಇಲ್ಲ. ಗದಗ ಜಿಲ್ಲೆಯಲ್ಲಿ ಜೆಡಿಎಸ್‌ ಲೆಕ್ಕಕ್ಕೆ ಇಲ್ಲದಿದ್ದರೂ, ಬಿಜೆಪಿಗೆ ಕಾಂಗ್ರೆಸ್‌ ಪೈಪೋಟಿ ನೀಡುವುದು ಪಕ್ಕಾ ಆಗಿದೆ. ಹಾಗಾಗಿ, ನಾಲ್ಕಕ್ಕೆ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಇದೆ. ಸಾಂಪ್ರದಾಯಿಕ ಎದುರಾಳಿಗಳ ಮಧ್ಯೆ ಸೆಣಸಾಟ ಇದೆ. ಹಾಗಾದರೆ, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗದಗದ ರಾಜಕೀಯ ಸ್ಥಿತಿ ಹೇಗಿದೆ? ಯಾವ ಕ್ಷೇತ್ರದಲ್ಲಿ ಯಾರ ಪ್ರಾಬಲ್ಯವಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಕಳೆದ ಚುನಾವಣೆ ಫಲಿತಾಂಶ
ಒಟ್ಟು ಕ್ಷೇತ್ರ: 4 (ಗದಗ, ಶಿರಹಟ್ಟಿ, ರೋಣ, ನರಗುಂದ)
ಬಿಜೆಪಿ: 3
ಕಾಂಗ್ರೆಸ್:‌ 1

ಗದಗ: ‘ಜಾತಿ’ ಲೆಕ್ಕಾಚಾರದಲ್ಲಿ ಯಾರಿಗೆ ಹೆಚ್ಚು ‘ಮತ’?

ಮುದ್ರಣ ಕಾಶಿ‌ ಗದಗ ಮತ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಹಾಗೂ ಬಿಜೆಪಿ‌ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಹಾಲಿ‌ ಶಾಸಕ ಎಚ್.ಕೆ.ಪಾಟೀಲ್ ಎದುರು‌ ಸ್ಪರ್ಧಿಸಿ ಕೇವಲ 1868 ಮತಗಳ ಅಂತರದಲ್ಲಿ ಸೋಲು‌ ಕಂಡಿದ್ದ ಅನಿಲ್ ಮೆಣಸಿನಕಾಯಿ, ಈಗ ಮತ್ತೊಮ್ಮೆ ಬಿಜೆಪಿ‌ ಅಭ್ಯರ್ಥಿಯಾಗಿ ಅದೃಷ್ಟ‌ ಪರೀಕ್ಷೆಗೆ ಇಳಿದಿದ್ದಾರೆ. ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡು, ಪಾಟೀಲರ ಗೆಲುವಿಗೆ ಬ್ರೇಕ್‌ ಹಾಕಲು ಯತ್ನಿಸುತ್ತಿದ್ದಾರೆ.

ಬಿಜೆಪಿ ಪ್ರಮುಖ ಟಿಕೆಟ್ ಆಕಾಂಕ್ಷಿಗಳಾಗಿದ್ದ ರಾಜು‌ ಕುರಡಗಿ, ನಾಗೇಶ ಹುಬ್ಬಳ್ಳಿ ಮತ್ತು ಶರಣ್ ಪಾಟೀಲ್‌ ಅವರು ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದರು. ಆದರೆ, ಅನಿಲ್ ಮೆಣಸಿನಕಾಯಿ‌ ಅವರು ಖುದ್ದಾಗಿ ಆಕಾಂಕ್ಷಿಗಳನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಂಡ ನಂತರ ಆಕಾಂಕ್ಷಿಗಳು ಮುನಿಸು ಬಿಟ್ಟು ಒಗ್ಗಟ್ಟು‌ ಪ್ರದರ್ಶಿಸುತ್ತಿದ್ದಾರೆ. ಅದರಲ್ಲೂ ರಾಜು ಕುರಡಗಿ ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ನಗರಸಭೆ ಮಾಜಿ‌ ಅಧ್ಯಕ್ಷ ಶಿವಣ್ಣ ಮುಳಗುಂದ ಬಿಜೆಪಿ ಸೇರ್ಪಡೆಯಾಗಿರುವದು ಬೆಟಗೇರಿ ಭಾಗದಲ್ಲಿ ಬಲ ಬಂದಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೆ, ಕ್ಷೇತ್ರದಲ್ಲಿ ನಿರ್ಣಾಯಕ ಸಮುದಾಯದ‌ ಮತಗಳ ವಿಭಜನೆ ಸಾಧ್ಯತೆ ಇದ್ದರೂ ಲಿಂಗಾಯತರ‌ ನಂತರ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಮರು ಎಚ್.ಕೆ.ಪಾಟೀಲ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂಬುದು ಬೆಂಬಲಿಗರ ಅಭಿಪ್ರಾಯವಾಗಿದೆ.

ಕಳೆದ ಚುನಾವಣೆ ಫಲಿತಾಂಶ
ಎಚ್‌.ಕೆ.ಪಾಟೀಲ್‌- ಕಾಂಗ್ರೆಸ್‌- 77,699
ಅನಿಲ್‌ ಮೆಣಸಿನಕಾಯಿ -ಬಿಜೆಪಿ- 75,831

ಗದಗ ಕ್ಷೇತ್ರದಲ್ಲಿ ಆಂತರಿಕವಾಗಿದ್ದ ಜಾತಿ ರಾಜಕಾರಣ ಈಗ ಬಹಿರಂಗಗೊಂಡಿದೆ. ನಿರ್ಣಾಯಕ ಮತಗಳನ್ನು ಹೊಂದಿರುವ ಪಂಚಮಸಾಲಿ ಸಮುದಾಯದ‌ ನಾಯಕರು ಕೈ-ಕಮಲ‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಪಂಚಮಸಾಲಿ ಸಮಾಜ, ಬಿಜೆಪಿ ಬೆಂಬಲಿತ ಪಂಚಮಸಾಲಿ ಸಮುದಾಯ ಎನ್ನುವ ಗುಂಪುಗಳು ಸಮಾವೇಶಗಳನ್ನು‌ ನಡೆಸಿ ತಮ್ಮ ಪಕ್ಷ ನಿಷ್ಠೆ ತೋರಿಸಿವೆ. ಇನ್ನು ಬಿಜೆಪಿ ವೋಟ್ ಬ್ಯಾಂಕ್ ಎಂದೇ ಬಿಂಬಿಸಲಾಗಿದ್ದ ಎಸ್‌ಎಸ್‌ಕೆ ಸಮಾಜದ ಕೆಲವರು ಕಾಂಗ್ರೆಸ್‌ ಪರ ಇದ್ದಾರೆ. ಒಳ‌ಮೀಸಲು ಘೋಷಣೆಯಿಂದ ಕೆಳ‌ ಸಮುದಾಯದ ಜನರ ಮತಗಳು ಛಿದ್ರವಾಗಿವೆ. ಆದರೂ, ಎಚ್‌.ಕೆ.ಪಾಟೀಲ್‌ ಅವರ ಮತಗಳು ಕದಲುವುದು ಕಷ್ಟ ಎಂಬ ಅಭಿಪ್ರಾಯ ಕೇಳಿಬರುತ್ತಿದೆ. ಆದರೆ, ಹಾಲುಮತ ಸಮುದಾಯದ ಮತಗಳೂ ವಿಭಜನೆಯಾಗಿದ್ದು, ಜಾತಿ ಸಮೀಕರಣದ ನಾಡಿಮಿಡಿತ ಯಾರಿಗೂ ಅರ್ಥವಾಗದಂತಾಗಿದೆ.‌

ನರಗುಂದ: ಬಂಡಾಯ ನೆಲದಲ್ಲಿ ಯಾರಿಗೆ ಜಯ?

ಬಂಡಾಯದ ನೆಲ ನರಗುಂದ ಮತಕ್ಷೇತ್ರದಲ್ಲಿ ಈ ಬಾರಿಯೂ ಬೆಜೆಪಿ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಹಾಲಿ ಶಾಸಕ, ಲೋಕೋಪಯೋಗಿ ಇಲಾಖೆ ಸಚಿವ‌ ಸಿ.ಸಿ.ಪಾಟೀಲ್ ಮತ್ತು ಮಾಜಿ ಶಾಸಕ ಬಿ.ಆರ್.ಯಾವಗಲ್ ನಡುವಿನ ಫೈಟ್ ರೋಚಕವಾಗುತ್ತಿದೆ.‌ ಈವರೆಗೆ ಒಟ್ಟು 5 ಬಾರಿ ಶಾಸಕರಾಗಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ ಮತ್ತು ಒಟ್ಟಾರೆ 3 ಬಾರಿ ಶಾಸಕರಾಗಿರುವ ಬಿಜೆಪಿ ಅಭ್ಯರ್ಥಿ ಸಿ.ಸಿ.ಪಾಟೀಲ್ ಈಗ ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಈವರೆಗೆ ಒಟ್ಟಾರೆ 5 ಪ್ರತಿಸ್ಪರ್ಧಿಗಳಾಗಿ ಚುನಾವಣೆ ಎದುರಿಸಿದ್ದು, ಮೂರು ಬಾರಿ‌ ಸಿ.ಸಿ.ಪಾಟೀಲ್ ಮತ್ತು ಎರಡು ಬಾರಿ ಬಿ.ಆರ್.ಯಾವಗಲ್ ಅವರು ವಿಧಾನಸಭೆ ಪ್ರವೇಶಿಸಿದ್ದಾರೆ.

ಬಿಜೆಪಿ‌ ಅಭ್ಯರ್ಥಿ ಸಿ.ಸಿ.ಪಾಟೀಲ್ ಅವರಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಕುಟುಂಬದ ಬಲ ಇದೆ.‌ ಹಿರಿಯ ಪುತ್ರ ಉಮೇಶಗೌಡ ಪಾಟೀಲ್ ಸಹಿತ ಮೂವರು ಪುತ್ರರು, ಸೊಸೆಯಂದಿರು ಪ್ರತ್ಯೇಕ ತಂಡಗಳಲ್ಲಿ ಚುನಾವಣೆ ಪ್ರಚಾರ‌ ನಡೆಸುತ್ತಿದ್ದಾರೆ. ಇತ್ತ ಬಿ.ಆರ್.ಯಾವಗಲ್ ಪರ ಪುತ್ರರಾದ ವಿವೇಕ ಯಾವಗಲ್‌, ಸಂತೋಷ ಮತ್ತು ಪ್ರವೀಣ ಸಕ್ರಿಯರಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್ ವಂಚಿತ ಆಕಾಂಕ್ಷಿಗಳ ಪೈಕಿ ಡಾ.ಸಂಗಮೇಶ ಕೊಳ್ಳಿ ಹೊರತುಪಡಿಸಿ ಇನ್ನುಳಿದ ಆಕಾಂಕ್ಷಿಗಳು ಯಾವಗಲ್ ಪರ ಕೆಲಸ ಮಾಡುತ್ತಿದ್ದಾರೆ.

1957ರಿಂದ 1983ರವರೆಗೆ ನರಗುಂದ ಕಾಂಗ್ರೆಸ್ ಕೋಟೆಯಾಗಿತ್ತು. ಆದರೆ 1983 ಮತ್ತು 1985ರಲ್ಲಿ ಯಾವಗಲ್ ಜನತಾ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್ ಓಟಕ್ಕೆ ಬ್ರೆಕ್‌ ಹಾಕಿದರು. 1989ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎದುರು ಸೋಲು ಕಂಡರೂ 1984ರಲ್ಲಿ ಮತ್ತೆ‌ ಜನತಾ ದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. 1999ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ ಬಿ.ಆರ್.ಯಾವಗಲ್, ಜೆಡಿಎಸ್ ಅಭ್ಯರ್ಥಿ ಸಿ.ಸಿ.ಪಾಟೀಲ ಅವರನ್ನು ಸೋಲಿಸಿದರು. 2004 ಮತ್ತು 2008 ರಲ್ಲಿ ಸಿ.ಸಿ.ಪಾಟೀಲ್‌ ಅವರು ಬಿಜೆಪಿಯಿಂದ ಯಾವಗಲ್ ವಿರುದ್ಧ ಜಯ ದಾಖಲಿಸಿ ನರಗುಂದ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಕಮಲ ಅರಳುವಂತೆ ಮಾಡಿದರು. 2013ರಲ್ಲಿ ಸಿ.ಸಿ.ಪಾಟೀಲ್ ಅವರು ಬಿ.ಆರ್.ಯಾವಗಲ್ ಎದುರು ಸೋಲು‌ ಕಂಡರೂ, 2018ರಲ್ಲಿ ಮತ್ತೊಮ್ಮೆ ಜಯ ದಾಖಲಿಸಿದರು.

ಕಳೆದ ಚುನಾವಣೆ ಫಲಿತಾಂಶ
ಸಿ.ಸಿ.ಪಾಟೀಲ್- ಬಿಜೆಪಿ- 73,045
ಬಿ.ಆರ್‌.ಯಾವಗಲ್-‌ ಕಾಂಗ್ರೆಸ್-‌ 65,066

ಸಿ.ಸಿ.ಪಾಟೀಲ್ ಮತ್ತು ಬಿ.ಆರ್.ಯಾವಗಲ್ ಪೈಪೋಟಿ ಮಧ್ಯೆಯೂ ಮಹದಾಯಿ,‌‌ ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ನಿರಂತರ ಹೋರಾಟ ನಡೆಸಿದ ರೈತ ಸೇನಾ ಸಂಸ್ಥಾಪಕ ವಿರೇಶ ಸೊಬರದಮಠ ಸ್ವಾಮಿಜಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅದರ ಜತೆಗೆ ಜೆಡಿಎಸ್‌ನಿಂದ ರುದ್ರಗೌಡ ಪಾಟೀಲ್, ಆಮ್ ಆದ್ಮಿ ಪಕ್ಷದಿಂದ ರಾಮಪ್ಪ‌ ಹೂವಣ್ಣವರ ಸಹಿತ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದು, ಮೇ 10ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.‌ ನರಗುಂದ ಕ್ಷೇತ್ರದ ಚುನಾವಣೆಯಲ್ಲಿ ಜಾತಿ ರಾಜಕಾರಣ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಲಿಂಗಾಯತ ಸಮುದಾಯದ ಸಿ.ಸಿ.ಪಾಟೀಲ್ ಮತ್ತು ರೆಡ್ಡಿ ಸಮಯದಾಯದ ಬಿ.ಆರ್.ಯಾವಗಲ್ ಮಧ್ಯದ ಚುನಾವಣೆ ಲಿಂಗಾಯತ ವರ್ಸಸ್ ರೆಡ್ಡಿ ಫೈಟ್ ಎನ್ನುವಂತಾಗಿದೆ. ಕ್ಷೇತ್ರದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯಾರಿಗೆ ಎಷ್ಟು ಲಾಭ-ನಷ್ಟ ಎನ್ನುವುದಕ್ಕೆ ಫಲಿತಾಂಶದವರೆಗೆ ಕಾಯಬೇಕಾಗಿದೆ.

ರೋಣ: ಸಾಂಪ್ರದಾಯಿಕ ಸಮರದ ಮಧ್ಯೆ ಯಾರಿಗೆ ಗೆಲುವು?

ಜಿಲ್ಲೆಯ ಅತಿ ದೊಡ್ಡ ವಿಧಾನಸಭೆ ಕ್ಷೇತ್ರವಾಗಿರುವ ರೋಣದಲ್ಲಿ ಬಿಜೆಪಿ ಹಾಲಿ ಶಾಸಕ ಕಳಕಪ್ಪ ಬಂಡಿ ಹಾಗೂ ಕಾಂಗ್ರೆಸ್ ಮಾಜಿ ಶಾಸಕ ಜಿ.ಎಸ್.ಪಾಟೀಲ್ ನಡುವಿನ ಕದನ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಈವರೆಗೂ ತಲಾ ಮೂರು‌ ಬಾರಿ ವಿಧಾನಸಭೆ ಪ್ರವೇಶಿಸಿರುವ ಜಿ.ಎಸ್.ಪಾಟೀಲ್ ಮತ್ತು ಕಳಕಪ್ಪ ಬಂಡಿ ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಒಟ್ಟಾರೆ ನಾಲ್ಕು ಚುನಾವಣೆಯಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿರುವ ಈ ಇಬ್ಬರು ನಾಯಕರು, ಈಗ 5 ನೇ ಬಾರಿ ಮುಖಾಮುಖಿಯಾಗಿದ್ದು, ಗೆಲುವು ಯಾರಿಗೆ ಎನ್ನುವುದು ಕುತೂಹಲ ಕೆರಳಿಸಿದೆ.

ಕಳೆದ ಚುನಾವಣೆ ಫಲಿತಾಂಶ
ಕಳಕಪ್ಪ ಬಂಡಿ- ಬಿಜೆಪಿ- 76,401
ಜಿ.ಎಸ್.ಪಾಟೀಲ್-‌ ಕಾಂಗ್ರೆಸ್-‌ 83735

ಬಿಜೆಪಿ‌ ಅಭ್ಯರ್ಥಿ ಕಳಕಪ್ಪ ಬಂಡಿ ಅವರಿಗೆ ಸಹೋದರನ ಸವಾಲು ಎದುರಾಗಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ‌ ಸಿದ್ದಪ್ಪ ಬಂಡಿ, ಟಿಕೆಟ್ ಕೈ ತಪ್ಪಿದ್ದರಿಂದ ಕಾಂಗ್ರೆಸ್ ಸೇರಿಕೊಂಡು ಸಹೋದರನ ವಿರುದ್ಧವೇ ಪ್ರಚಾರ ನಡೆಸುತ್ತಿದ್ದಾರೆ‌. ಇದು ಕಳಕಪ್ಪ ಬಂಡಿ ಅವರಿಗೆ ನುಂಗಲಾರದ ತುತ್ತಾಗಿದೆ. ಇದು ಕಾಂಗ್ರೆಸ್‌ನ ಜಿ.ಎಸ್.ಪಾಟೀಲ್ ಅವರಿಗೆ ಸ್ವಲ್ಪ ಮಟ್ಟಿನ ಪೂರಕವಾದ ವಾತಾವರಣ ಸೃಷ್ಟಿಸಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.

ಇನ್ನು ಬಿಜೆಪಿ ಟಿಕೆಟ್ ಪ್ರಮುಖ‌ ಆಕಾಂಕ್ಷಿಗಳಾಗಿದ್ದ ರವಿ ದಂಡಿನ ಕ್ಷೇತ್ರದಲ್ಲಿ ಪ್ರಚಾರ‌ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಯುವ ಮುಖಂಡ‌ ಅಂದಪ್ಪ ಸಂಕನೂರ, ನರೇಗಲ್‌ ಭಾಗದಲ್ಲಿ ಒಂದಷ್ಟು ಪ್ರಚಾರ ನಡೆಸಿದ್ದಾರೆ. ಕಳಕಪ್ಪ ಬಂಡಿ ಪತ್ನಿ ಸಂಯುಕ್ತಾ ಬಂಡಿ ಅವರು ಕಳಕಪ್ಪ ಅವರ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಮುಂಡರಗಿ ಮಂಡಲ ಬಿಜೆಪಿ ಅಧ್ಯಕ್ಷ ಹೇಮಗಿರಿಶ ಹಾವಿನಾಳ ರೋಣ ಮತ್ತು ಶಿರಹಟ್ಟಿ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸುತ್ತಿರುವುದು ಬಿಜೆಪಿಗೆ ಬಲ ನೀಡಿದೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿರುವ ಜಿ.ಎಸ್.ಪಾಟೀಲ್‌ ಅವರು ಚುನಾವಣೆ ಘೋಷಣೆ ಪೂರ್ವದಲ್ಲಿಯೇ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು‌. ಸದ್ಯ ಎಲ್ಲ ವರ್ಗದ ಜನರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಮತಯಾಚನೆ ಮಾಡುತ್ತಿರುವುದು, ಮಾಜಿ ಸಿಎಂ ಸಿದ್ದರಾಮಯ್ಯ, ಲಕ್ಷ್ಮಣ ಸವದಿ ಅವರು ಕ್ಷೇತ್ರದಲ್ಲಿ ನಡೆಸಿರುವುದು ಪ್ಲಸ್ ಆಗಲಿದೆ ಎಂಬುದು ಕಾರ್ಯಕರ್ತರ ಮಾತಾಗಿದೆ.

ರೋಣ‌ ಕಣದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಪಂಚಮಸಾಲಿ ಮತ್ತು ಗಾಣಿಗ ಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಬ್ಬರು ಅಭ್ಯರ್ಥಿಗಳು‌ ಈ‌ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಕುರುಬ ಸಮುದಾಯದ ಮತಗಳು ಆನೇಕಲ್ ದೊಡ್ಡಯ್ಯ ಸ್ಪರ್ಧೆಯಿಂದ ವಿಭಜನೆಯಾಗುವ ಸಾಧ್ಯತೆಯಿದೆ.‌ ಅಲ್ಪ ಸಂಖ್ಯಾತರ ಮತಗಳು ಯಾವ ಕಡೆ ವಾಲಲಿವೆ ಎಂಬುದು ನಿಗೂಢವಾಗಿದೆ. ಇದರಿಂದ ರೋಣದಲ್ಲಿ ಜಾತಿ ರಾಜಕಾರಣ ಮತ್ತು ಸಮೀಕರಣ ಇನ್ನೂ ಅಸ್ಪಷ್ಟವಾಗಿದೆ.‌

ಶಿರಹಟ್ಟಿ: ತ್ರಿಕೋನ ಸ್ಪರ್ಧೆಯಲ್ಲಿ ಯಾರು ಜಟ್ಟಿ?

ಜಿಲ್ಲೆಯ ಗದಗ, ರೋಣ ಮತ್ತು ನರಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಶಿರಹಟ್ಟಿ ಮೀಸಲು ಕ್ಷೇತ್ರದಲ್ಲಿ ಮಾತ್ರ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ, ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಅವರಿಗೆ ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಸವಾಲು ಒಡ್ಡಿದ್ದು, ತ್ರಿಕೋನ ಸ್ಪರ್ಧೆ ದಿನದಿಂದ ದಿನಕ್ಕೆ ರೋಚಕವಾಗುತ್ತಿದೆ.

ಕಾಂಗ್ರೆಸ್ ಟಿಕೆಟ್ ವಂಚಿತ ರಾಮಕೃಷ್ಣ ದೊಡ್ಡಮನಿ ಅವರಿಗೆ ಕಾಂಗ್ರೆಸ್ ಮತ್ತು ಬಿಜೆಪಿಯ ಅತೃಪ್ತರು ಬೆಂಬಲ ಸೂಚಿಸಿದ್ದಾರೆ. ಎಲ್ಲ ವರ್ಗದ ನಾಯಕರು, ಸಮುದಾಯಗಳ ಪ್ರಮುಖರು ರಾಮಕೃಷ್ಣ ದೊಡ್ಡಮನಿ ಪರ ಪ್ರಚಾರ ನಡೆಸುತ್ತಿದ್ದಾರೆ. ಸ್ಟಾರ್ ಪ್ರಚಾರಕರ ಕೊರತೆ ಹೊರತುಪಡಿಸಿ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಕಳೆದ ಚುನಾವಣೆ ಫಲಿತಾಂಶ
ರಾಮಪ್ಪ ಲಮಾಣಿ- ಬಿಜೆಪಿ- 91,967
ರಾಮಕೃಷ್ಣ ದೊಡ್ಡಮನಿ- ಕಾಂಗ್ರೆಸ್-‌ 61,974

ವೈದ್ಯಾಧಿಕಾರಿ ಹುದ್ದೆಗೆ ನೀಡಿದ್ದ ರಾಜೀನಾಮೆ ಅಂಗೀಕಾರ ಪ್ರಹಸನದ ಮಧ್ಯೆಯೂ ಕೊನೆ ಕ್ಷಣದಲ್ಲಿ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ಡಾ. ಚಂದ್ರು ಲಮಾಣಿ, ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಅನೇಕ ನಾಯಕರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ. ಪಕ್ಷದ ಪ್ರಮುಖರು, ಕಾರ್ಯಕರ್ತರು ಜತೆಗಿದ್ದಾರೆ.

ಕೈ ಪಾಳಯದಲ್ಲೂ ಉತ್ಸಾಹ

ಕಾಂಗ್ರೆಸ್ ಟಿಕೆಟ್ ಘೋಷಣೆ ನಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಏರ್ಪಟ್ಟಿತ್ತು. ಆದರೆ ನಿಧಾನವಾಗಿ ಕಾಂಗ್ರೆಸ್‌ನವರು ಸಹ ಒಂದಾಗಿ ಸುಜಾತಾ ದೊಡ್ಡಮನಿ ಪರ ಪ್ರಚಾರ ನಡೆಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ ಕೈಗೊಂಡ ನಂತರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಎಸ್‌ಸಿ, ಎಸ್‌ಟಿ ಮತಗಳ ಜತೆಗೆ ಮುಸ್ಲಿಮರ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಇನ್ನೊಂದೆಡೆ, ಬಿಜೆಪಿ ಟಿಕೆಟ್ ಘೋಷಣೆ ನಂತರ ಎದುರಾಗಿದ್ದ ಬಂಡಾಯ ಭಾಗಶಃ ಶಮನವಾಗಿದೆ. ಹಾಲಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಒಲ್ಲದ ಮನಸ್ಸಿನಿಂದ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಜಿಲ್ಲೆ ಸಮೀಕ್ಷೆ : ಕಾಂಗ್ರೆಸ್‌, ಬಿಜೆಪಿ ಗೆಲುವಿನ ಮೇಲೆ ಪಕ್ಷಾಂತರಿಗಳ, ರೆಡ್ಡಿ ಪಕ್ಷದ ಎಫೆಕ್ಟ್‌

ಶಿರಹಟ್ಟಿ ಮೀಸಲು ಕ್ಷೇತ್ರವಾದರೂ ಲಿಂಗಾಯತ ಮತದಾರರ ಸಂಖ್ಯೆ ಅತ್ಯಧಿಕವಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯಗಳ ಜತೆಗೆ ಲಿಂಗಾಯತ, ಕುರುಬ ಸಮುದಾಯದ ಮತಗಳನ್ನು ಸೆಳೆಯುವ ಪಕ್ಷಕ್ಕೆ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ. ಆದರೆ, ಸದ್ಯಕ್ಕೆ ಲಿಂಗಾಯತ, ಮುಸ್ಲಿಂ ಮತ್ತು ಕುರುಬ ಸಮುದಾಯದ ಮತಗಳು ವಿಭಜನೆಯಾಗಿವೆ. ಲಂಬಾಣಿ ಸಮುದಾಯ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದು, ಚುನಾವಣೆಯಲ್ಲಿ ಯಾರ ಪರ ಮತ ಚಲಾಯಿಸಲಿದ್ದಾರೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಇನ್ನು ಮುಸ್ಲಿಂ ಮತದಾರರು ರಾಮಕೃಷ್ಣ ದೊಡ್ಡಮನಿ ಪರ ಒಲವು ಹೊಂದಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಸವಾಲಾಗುವ ಸಾಧ್ಯತೆಯಿದೆ. ಒಟ್ಟಾರೆ ಶಿರಹಟ್ಟಿ ಕ್ಷೇತ್ರದ ಜಾತಿ ರಾಜಕಾರಣ ನಿಗೂಢವಾಗಿದೆ. ಕಾಂಗ್ರೆಸ್ -ಬಿಜೆಪಿ ಜತೆಗೆ ಆಮ್ ಆದ್ಮಿ ಪಾರ್ಟಿ, ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಕ್ಷೇತರರು ಸೇರಿ ಒಟ್ಟಾರೆ 14 ಜನ ಅಂತಿಮ ಕಣದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Siddheshwar Temple : ಸೊಲ್ಲಾಪುರದ ಸಿದ್ದೇಶ್ವರ ದೇಗುಲದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳ ಅಳವಡಿಕೆಗೆ ಕಸಾಪ ಆಗ್ರಹ

ಸೊಲ್ಲಾಪುರದ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳನ್ನು ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

VISTARANEWS.COM


on

By

Siddeshwara Temple
Koo

ಬೆಂಗಳೂರು: ಪ್ರಸಿದ್ಧ ವಚನಕಾರನಾದ ಸೊನ್ನಲಿಗೆಯ ಸಿದ್ದರಾಮ, ಸೊಲ್ಲಾಪುರದಲ್ಲಿ ಸ್ಥಾಪಿಸಿದ ಸಿದ್ದೇಶ್ವರ ಗುಡಿಯಲ್ಲಿ (Siddheshwar Temple) ಸಿದ್ದರಾಮನ ಆಯ್ದ ವಚನಗಳನ್ನು ಕನ್ನಡ ಮತ್ತು ಮರಾಠಿ ಭಾಷೆಯ ಫಲಕಗಳಲ್ಲಿ ಮುದ್ರಿಸಿ, ದೇವಸ್ಥಾನದ ಆವರಣದಲ್ಲಿ ತೂಗುಹಾಕಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ದೇವಳದ ಆಡಳಿತ ಮಂಡಳಿಯನ್ನು ಆಗ್ರಹಿಸಿದ್ದಾರೆ.

ಈ ಕುರಿತಂತೆ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ಪತ್ರ ಬರೆದು ಮಾತನಾಡಿದ ಡಾ. ಬಿಳಿಮಲೆ ಪ್ರಸಿದ್ಧ ವಚನಕಾರನಾದ ಸೊನ್ನಲಿಗೆಯ ಸಿದ್ದರಾಮ ಕಲ್ಯಾಣ ಕ್ರಾಂತಿಯ ಕೇಂದ್ರ ಬಿಂದುವಾಗಿದ್ದ ಶೂನ್ಯ ಸಿಂಹಾಸನವನ್ನೇರಿದ ಮೂರನೆಯ ಅನುಭಾವಿ ಆಗಿದ್ದ. ತನ್ನ ಕಾಯಕ ತತ್ವದಿಂದಲೇ ಪ್ರಸಿದ್ಧನಾಗಿದ್ದ ಆತ, ಶರೀರವನ್ನು ವ್ಯರ್ಥವಾಗಿ ಕಳೆಯಬಾರದೆಂಬ ನಿಲುವನ್ನು ಹೊಂದಿದ್ದ. ಸಿದ್ದರಾಮ ಕಟ್ಟಿಸಿದ ಕೆರೆಗಳು ಮತ್ತು ಅರವಟ್ಟಿಗೆಗಳು ಇಂದಿಗೂ ಬದುಕುಳಿದಿದ್ದು, ಅವರ ಸಾಮಾಜಿಕ ಬದ್ಧತೆ ಅನನ್ಯವಾದುದು ಎಂದಿದ್ದಾರೆ.

ಕರ್ನಾಟಕ ಏಕೀಕರಣದ ನಂತರ ಸಿದ್ದರಾಮನ ಹುಟ್ಟೂರಾದ ಸೊನ್ನಲಿಗೆಯು ಮಹಾರಾಷ್ಟ್ರಕ್ಕೆ ಸೇರಿ, ಆ ಪ್ರದೇಶವು ಮರಾಠಿಮಯವಾಗುತ್ತಲೇ ಹೋಯಿತು. ಇವತ್ತು ಅಲ್ಲಿ ಕನ್ನಡ ಕಾಣೆಯಾಗಿದ್ದು, ಜನರಿಗೂ ಸಿದ್ದರಾಮನ ಮಹತ್ವ ತಿಳಿಯದ ಸ್ಥಿತಿ ನಿರ್ಮಾಣವಾಗಿದೆ. ಕಪಿಲ ಸಿದ್ಧಮಲ್ಲಿಕಾರ್ಜುನನ ಅಂಕಿತದಲ್ಲಿ ೧೯೦೦ಕ್ಕೂ ಹೆಚ್ಚು ವಚನಗಳನ್ನು ಬರೆದ ಸಿದ್ದರಾಮನ ಹೆಸರು ಹೀಗೆ ಮರೆಯಾಗುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಕನ್ನಡ ಮತ್ತು ಮರಾಠಿಯಲ್ಲಿ ಸಿದ್ದರಾಮನ ವಚನಗಳ ಸಂದೇಶವು ದೇವಸ್ಥಾನದ ಆವರಣದಲ್ಲಿಯೇ ದೊರೆತಲ್ಲಿ, ಅದು ಭಾಷಾ ಸೌಹಾರ್ದತೆಯ ಸಂಕೇತವಾಗುತ್ತದೆಯಷ್ಟೇ ಅಲ್ಲ, ನಾಗರಿಕ ಸಮಾಜಕ್ಕೆ ದೊರೆಯಬಹುದಾದ ಅತ್ಯುತ್ತಮ ಸಂದೇಶವೂ ಆಗುತ್ತದೆ ಎಂದಿದ್ದಾರೆ. ತಮ್ಮ ಕೋರಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಿರುವ ಆಡಳಿತ ಮಂಡಳಿಯು ಇಷ್ಟರಲ್ಲಿಯೇ ಕ್ರಮವಹಿಸಲಿದೆ ಎಂದು ಸಹ ಡಾ. ಬಿಳಿಮಲೆ ಹೇಳಿದ್ದಾರೆ.

Continue Reading

ಬೆಂಗಳೂರು

School Admissions : ಗಲ್ಲಿಗೊಂದು ಹುಟ್ಟಿಕೊಂಡ ಖಾಸಗಿ ಶಾಲೆಗಳು; ವಿದ್ಯಾರ್ಥಿಗಳ ಆಡ್ಮಿನ್‌ಗಾಗಿ ಹೊಸ ತಂತ್ರ

School Admissions : ಹಿಂದೆಲ್ಲ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಆಡ್ಮಿನ್‌ ಮಾಡಿಸಬೇಕು ಅಂದರೆ ಪೋಷಕರು ಹಗಲು-ರಾತ್ರಿ ಎಂದು ಕ್ಯೂ ನಿಲ್ಲುತ್ತಿದ್ದರು. ಆದರೆ ಇದೀಗ ಕಾಲ ಚೇಂಜ್‌ ಆಗಿದೆ. ಗಲ್ಲಿಗೊಂದು ಶಾಲೆಗಳು ಹುಟ್ಟಿಕೊಂಡಿದ್ದು, ದಾಖಲಾತಿ ಹೆಚ್ಚಿಸಿಕೊಳ್ಳಲು ಆಡಳಿತ ಮಂಡಳಿ ಹೊಸ ಹೊಸ ಹೊಸ ಆಫರ್‌ ನೀಡುತ್ತಿದೆ. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿ ಆಡ್ಮಿನ್‌ಗಾಗಿ ಅಡ್ವಾನ್ಸ್‌ ಬುಕ್ಕಿಂಗ್‌ ಮಾಡಲು ಕೆಲ ಖಾಸಗಿ ಶಾಲೆಗಳು ಮುಂದಾಗಿದೆ.

VISTARANEWS.COM


on

By

school admission
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಖಾಸಗಿ ಶಾಲೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಇದರಿಂದಾಗಿ ವಿದ್ಯಾರ್ಥಿಗಳ ಪ್ರವೇಶಾತಿಗಾಗಿ (School Admissions) ಪರದಾಡುತ್ತಿರುವ ಖಾಸಗಿ ಶಾಲೆಗಳು ಹೊಸದೊಂದು ಆಫರ್ ನೀಡಲು ಮುಂದಾಗಿದ್ದು, ಸದ್ಯ ಈ ಆಫರ್‌ಗೆ ಪೋಷಕರು ಅಸಮಾಧಾನಗೊಂಡಿದ್ದಾರೆ.

ಸಾಮಾನ್ಯವಾಗಿ ಜೂನ್‌ ತಿಂಗಳಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ. ಆದರೆ ಕೆಲವು ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷಕ್ಕೆ ಅಡ್ವಾನ್ಸ್ ಆಗಿ ಈಗಲೇ ಪ್ರವೇಶಾತಿಗಾಗಿ ಮುಂದಾಗುತ್ತಿವೆ. ಈಗಂತೂ ಗಲ್ಲಿಗೊಂದು ಖಾಸಗಿ ಶಾಲೆಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೆ ಪರದಾಡುತ್ತಿವೆ. ಹೀಗಾಗಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿ ಕೆಲವು ಆಫರ್‌ಗಳನ್ನು ಕೊಡಲು ಮುಂದಾಗಿದೆ.

ಹಲವು ಖಾಸಗಿ ಶಾಲೆಗಳು ಆರಂಭಿಕ ಪ್ರವೇಶಕ್ಕಾಗಿ ಶುಲ್ಕ ವಿನಾಯಿತಿಯ ಭರವಸೆಯನ್ನು ನೀಡುತ್ತಿವೆ. ಗಡುವಿನೊಳಗೆ ಪ್ರವೇಶವನ್ನು ಖಚಿತಪಡಿಸಿದರೆ ಪ್ರವೇಶ ಶುಲ್ಕವನ್ನು ಮನ್ನಾ ಮಾಡಲಾಗುವುದು ಎಂದು ಆಡಳಿತ ಮಂಡಳಿ ಪೋಷಕರಿಗೆ ಭರವಸೆ ನೀಡುತ್ತಿವೆ. ಈ ಶಾಲೆಗಳಲ್ಲಿ ಪ್ರವೇಶ ಶುಲ್ಕ 10,000 ರೂ. ಯಿಂದ 25,000 ರೂ. ಇರಲಿದೆ. ಹಲವಾರು ಶಾಲೆಗಳು ವಿದ್ಯಾರ್ಥಿಗಳನ್ನು ಆಕರ್ಷಿಸಲು ರಿಯಾಯಿತಿಗಳ ಜತೆಗೆ ವಿದ್ಯಾರ್ಥಿವೇತನವನ್ನು ಸಹ ನೀಡುತ್ತಿವೆ.

ಇದನ್ನೂ ಓದಿ: Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

ಖಾಸಗಿ ಶಾಲೆಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಕೊರತೆ ಕೂಡ ಇದೆ. ಹೀಗಾಗಿ ಶಾಲೆಗಳ ಪ್ರವೇಶಾತಿಯಲ್ಲಿ ಪರಸ್ಪರ ಪೈಪೋಟಿ ನಡೆಸುತ್ತಿವೆ. ಸಾಮಾನ್ಯವಾಗಿ ಶಿಫಾರಸ್ಸು ಮೂಲಕ ಪ್ರವೇಶಾತಿ ಪಡೆಯುವುದನ್ನು ನೋಡಿದ್ದೇವೆ. ಆದರೆ ಈ ರೀತಿಯ ಅಡ್ವಾನ್ಸ್ ನೋಂದಣಿಯಿಂದ ವಿಧ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಗ್ಗಿದಂತಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಇಂತಹ ಮಾರ್ಕೆಟಿಂಗ್ ತಂತ್ರಗಾರಿಕೆಗಳು ವಿದ್ಯಾರ್ಥಿಗಳ ಶೈಕ್ಷಣಿಕಕ್ಕೆ ಮಾರಕವಾಗದೆ ಇರಲಿ ಎನ್ನುತ್ತಿದ್ದಾರೆ ಪೋಷಕರು. ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಪೋಷಕರ ಡೇಟಾವನ್ನು ತೆಗೆದುಕೊಳ್ಳುವ ಶಾಲೆಗಳಿವೆ. ಆದರೆ ಈ ರೀತಿ ಅಡ್ವಾನ್ಸ್ ನೋಂದಣಿಯ ಆಮಿಷ ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸುಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗಾಳಿ ಸಹಿತ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಲ್ಲಿ ಎತ್ತಿನ ಬಂಡಿ ಸಮೇತ ನದಿಯಲ್ಲಿ ಕೊಚ್ಚಿಕೊಂಡು ಹೋದ ರೈತ

ಕಲಬುರಗಿ‌ ಜಿಲ್ಲೆಯಾದ್ಯಂತ ವರುಣನ‌ ಆರ್ಭಟ ಜೋರಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಇರಗಪಳ್ಳಿ ಬಳಿಯ ಭೋಗಾವತಿ ನದಿಯಲ್ಲಿ ಎತ್ತಿನ ಬಂಡಿ ಸಮೇತ ರೈತ ಕೊಚ್ಚಿಕೊಂಡು ಹೋಗಿದ್ದಾರೆ. ನದಿಯಿಂದ ನೀರು ತರಲು ಹೋಗಿದ್ದ ರೈತ ಅಮೃತ್ ನೀರಿನ‌ ರಭಸಕ್ಕೆ ಕೊಚ್ಚಿ‌ಹೋಗುತ್ತಿದ್ದ ವೇಳೆ ಡ್ರಮ್ ಮೂಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ರೈತ ಅಮೃತ್ ಬಚಾವ್ ಆದರೆ, ಎರಡು ಎತ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

Bengaluru Murder : ವೈಯಾಲಿಕಾವಲ್ ಮಹಿಳೆಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನ (Bengaluru Murder) ವೈಯಾಲಿಕಾವಲ್ ಮಹಾಲಕ್ಷ್ಮೀ ಮರ್ಡರ್ ಕೇಸ್‌ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮಹಿಳೆಯನ್ನು ಕೊಲೆ ಮಾಡಿದವನು ತನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಪೊಲೀಸರ ಮುಂದೆ ಪ್ರಶ್ನೆಗಳ ಸರಮಾಲೆಯೇ ಇದೆ. ಮಹಾಲಕ್ಷ್ಮಿಯನ್ನು ಕೊಂದ ಕೊಲೆಗಾರನನ್ನು ಟ್ರೇಸ್‌ ಮಾಡಿ ಇನ್ನೇನು ಹಿಡಿಬೇಕು ಎನ್ನುವಾಗಲೇ ಕೊಲೆ ಆರೋಪಿ ಮುಕ್ತಿರಂಜನ್ ಎಂಬಾತ ಒಡಿಶಾದಲ್ಲಿ ನಿನ್ನೆ (ಸೆ.25) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾಲಕ್ಷ್ಮೀ ಮರ್ಡರ್ ಕೇಸ್ ಪೊಲೀಸರ ಮುಂದೆ ಹಲವು ಸವಾಲುಗಳನ್ನಿಟ್ಟಿದೆ‌. ಆರೋಪಿ ಅರೆಸ್ಟ್ ಆದಮೇಲೆ ಪ್ರಕರಣಕ್ಕೆ ಒಂದು ಫುಲ್ ಸ್ಟಾಪ್ ಇಡಬಹುದಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿ ಮುಕ್ತಿ ರಂಜನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ ತನಿಖಾಧಿಕಾರಿಗಳಿಗೆ ಮುಂದಿರುವ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ. ಪ್ರಕರಣದ ಆರೋಪಿಯಾಗಿದ್ದ ಒಡಿಶಾ ಮೂಲದ ಮುಕ್ತಿರಂಜನ್ ಪ್ರತಾಪ್ ರಾಯ್ ನಿನ್ನೆ ಬುಧವಾರ ಬೆಳಗ್ಗೆ ಒಡಿಶಾದ ಭದ್ರಕ್ ಜಿಲ್ಲೆಯ ಭೂನಿಪುರದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾಲಕ್ಷ್ಮಿಯ ಭೀಕರ ಹತ್ಯೆಗೆ ಕಾರಣವೇನು? ಆರೋಪಿ ಹತ್ಯೆಗೈದಿದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

ಮದುವೆ ಆಗುವಂತೆ ಒತ್ತಾಯಿಸಿದ್ದಳು ಮಹಾಲಕ್ಷ್ಮಿ

ಇನ್ನು ತನಿಖೆ ವೇಳೆ ಒಂದಷ್ಟು ಸ್ಫೋಟಕ ವಿಚಾರಗಳು ಹೊರ ಬಿದ್ದಿದ್ದು, ಮದುವೆಯಾಗುವಂತೆ ಮುಕ್ತಿ ರಂಜನ್‌ನ ಮಹಾಲಕ್ಷ್ಮಿ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗಿ ಕೊಲೆ ನಡೆದಿರಬಹುದು ಎಂಬ ಅನುಮಾನ ಮೂಡಿದೆ. ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್‌ ಇಬ್ಬರು ಒಂದೆ ಕಡೆ ಕೆಲಸ ಮಾಡುತ್ತಿದ್ದರು. ಹೀಗಾಗಿ ಇಬ್ಬರ ಮಧ್ಯೆ ಸ್ನೇಹ, ಸಲುಗೆ ಬೆಳದಿತ್ತು.

ಮುಕ್ತಿರಂಜನ್‌ನನ್ನು ತುಂಬಾ ಹಚ್ಡಿಕೊಂಡಿದ್ದ ಮಹಾಲಕ್ಷ್ಮಿ ಆತನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು. ಕೆಲಸ ಮಾಡುತ್ತಿದ್ದ ಸ್ಟೋರ್‌ನಲ್ಲಿ ಬೇರೆ ಹುಡುಗೀಯರ ಜತೆ ಮುಕ್ತಿರಂಜನ್‌ ಮಾತನಾಡಿದರೆ ಮಹಾಲಕ್ಷ್ಮಿ ಸ್ವಲ್ಪವೂ ಸಹಿಸುತ್ತಿರಲಿಲ್ಲ. ಕೂಡಲೇ ಆ ಯುವತಿಯರಿಗೆ ವಾರ್ನ್ ಮಾಡುತ್ತಿದ್ದಳು. ಇನ್ನು ಮುಕ್ತಿರಂಜನ್ ಸಹ ಸ್ವತಃ ಹಠಮಾರಿ ಸ್ವಭಾವದವನಾಗಿದ್ದ ಎಂಬುದು ಇದುವರೆಗಿನ ತನಿಖೆಯಲ್ಲಿ ತಿಳಿದು ಬಂದಿದೆ. ಸೆಪ್ಟೆಂಬರ್ 1ರಂದು ಇಬ್ಬರೂ ಕೆಲಸಕ್ಕೆ ಹಾಜರಾಗಿದ್ದರು. ಎರಡನೇ ತಾರೀಖು ಇಬ್ಬರೂ ರಜೆ ಹಾಕಿ ವೈಯಾಲಿಕಾವಲ್ ಮನೆಗೆ ಹೋಗಿದ್ದರಂತೆ. ಈ ವೇಳೆ ಜಗಳ ಆಗಿ, ಕೊಲೆ ಮಾಡಿ ಮುಕ್ತಿರಂಜನ್‌ ಎಸ್ಕೇಪ್ ಆಗಿರಬಹುದು ಎನ್ನಲಾಗಿದೆ.

ಮನೆಯಲ್ಲಿ ಎಲ್ಲೂ ರಕ್ತ ಹರಿದಿಲ್ಲ; ಮೂವರ ಫಿಂಗರ್‌ ಪ್ರಿಂಟ್‌ ಪತ್ತೆ

ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿರುವ ಬಗ್ಗೆಯಂತೂ ಪೊಲೀಸರಿಗೆ ಅನುಮಾನಗಳ ಮೇಲೆ ಅನುಮಾನ ಹುಟ್ಟಿಸಿದೆ. ದೇಹ ಕತ್ತರಿಸುವ ರೀತಿ, ಮನೆಯಲ್ಲಿ ರಕ್ತ ಎಲ್ಲಿಯೂ ಸಹ ಸಿಡಿಯದಂತೆ ಮೃತದೇಹ ಕತ್ತರಿಸಲಾಗಿದೆ. ಹತ್ಯೆಗೈದು ಮೃತದೇಹದ ರಕ್ತ ಹರಿದ ನಂತರ ಕತ್ತರಿಸಲಾಗಿತ್ತಾ ಅನ್ನೋ ಪ್ರಶ್ನೆ ಮುಂದಿವೆ. ಅಲ್ಲದೇ ಮನೆಯಲ್ಲಿ ಇಬ್ಬರಿಂದ ಮೂರು ಜನರ ಫಿಂಗರ್ ಪ್ರಿಂಟ್‌ಗಳು ಪತ್ತೆಯಾಗಿದ್ದು, ಆರೋಪಿಯ ಕೃತ್ಯಕ್ಕೆ ಬೇರೆ ಯಾರಾದರೂ ಸಾಥ್ ನೀಡಿದ್ದರಾ? ಹತ್ಯೆಗೈದು ಇಷ್ಟು ದಿನ ಆರೋಪಿ ತಲೆಮರೆಸಿಕೊಂಡಿದ್ದೆಲ್ಲಿ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರ ತಲೆ ಕೆಡಿಸಿದೆ.

ಸದ್ಯ ಒಡಿಶಾದಲ್ಲಿ ಬೀಡುಬಿಟ್ಟಿರುವ ಬೆಂಗಳೂರು ಪೊಲೀಸರು, ಆರೋಪಿಯ ಕುಟುಂಬಸ್ಥರಿಂದ ಮಾಹಿತಿ ಪಡಿತಿದೆ. ಈಗಾಗಲೇ ರಾಜ್ಯ ಪೊಲೀಸರ ಎರಡು ತಂಡಗಳು ಒಡಿಶಾದಲ್ಲಿರುವುದರಿಂದ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಮತ್ತೊಂದು ಕಡೆ ಮಹಿಳೆ ಮೊಬೈಲ್ ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Siddeshwara Temple
ಬೆಂಗಳೂರು17 ಗಂಟೆಗಳು ago

Siddheshwar Temple : ಸೊಲ್ಲಾಪುರದ ಸಿದ್ದೇಶ್ವರ ದೇಗುಲದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳ ಅಳವಡಿಕೆಗೆ ಕಸಾಪ ಆಗ್ರಹ

school admission
ಬೆಂಗಳೂರು17 ಗಂಟೆಗಳು ago

School Admissions : ಗಲ್ಲಿಗೊಂದು ಹುಟ್ಟಿಕೊಂಡ ಖಾಸಗಿ ಶಾಲೆಗಳು; ವಿದ್ಯಾರ್ಥಿಗಳ ಆಡ್ಮಿನ್‌ಗಾಗಿ ಹೊಸ ತಂತ್ರ

karnataka weather Forecast
ಮಳೆ23 ಗಂಟೆಗಳು ago

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Dina Bhavishya
ಭವಿಷ್ಯ23 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Murder case
ಬೆಂಗಳೂರು1 ದಿನ ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ2 ದಿನಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ2 ದಿನಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು2 ದಿನಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ2 ದಿನಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ2 ದಿನಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌