ಯಾದಗಿರಿ: ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿಯಾಗಿರುವ ಘಟನೆ (Stray Dogs Attack) ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಸಂಜೀವಪ್ಪ ದೇವಾಪುರ ಎಂಬುವವರ ಕುರಿಗಳು ಮೃತಪಟ್ಟಿವೆ.
ಗ್ರಾಮದ ಹೊರ ಭಾಗದ ಕುರಿ ಹಟ್ಟಿಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ನಾಲ್ಕೈದು ಬೀದಿ ನಾಯಿಗಳು ದಾಳಿ ಮಾಡಿ, ಕೊಂದಿವೆ. ಕುರಿಗಳನ್ನೇ ನಂಬಿಕೊಂಡು ಕುರಿಗಾಹಿ ಸಂಜೀವಪ್ಪ ಜೀವನ ಸಾಗಿಸುತ್ತಿದ್ದರು. ಕುರಿಗಳನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಕುರಿಗಾಹಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ | Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ
ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ.
ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ. ಛಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ.
ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ
ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ ಮಗನ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.
ಇದನ್ನೂ ಓದಿ | Amarnath Tragedy: ಬಸ್ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ
ಸೋಮವಾ ಎರಡನೇ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.