Site icon Vistara News

Govt Employees Strike: ಅನುಮತಿ ಪಡೆಯದೆ ಗೈರಾದರೆ ಕಠಿಣ ಕ್ರಮ, ಸರ್ಕಾರಿ ನೌಕರರಿಗೆ ಸರ್ಕಾರ ಖಡಕ್ ಎಚ್ಚರಿಕೆ

Government Order

Government Order

ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿ ಹಾಗೂ ಎನ್‌ಪಿಎಸ್‌ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬುಧವಾರದಿಂದ ಮುಷ್ಕರ ಕೈಗೊಳ್ಳುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ. ಸರ್ಕಾರಿ ನೌಕರರ ನಡೆಗೆ ಸುತ್ತೋಲೆಯ ಮೂಲಕ ಸರ್ಕಾರ ಎಚ್ಚರಿಕೆ ನೀಡಿದ್ದು, ಕೆಲಸಕ್ಕೆ ಅನುಮತಿ ಇರದೆ ಗೈರಾದರೆ, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

ಸರ್ಕಾರಿ ನೌಕರರು ಅನಿವಾರ್ಯ ಕಾರಣಗಳಿಂದಾಗಿ ಕಚೇರಿಗೆ ಹಾಜರಾಗದರೆ ಇದ್ದರೆ ಪೂರ್ವ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹಾಗೊಂದು ವೇಳೆ ಸೂಚನೆ ನೀಡದೆ ಕೆಲಸಕ್ಕೆ ಗೈರಾದರೆ Dies Non ಎಂಬುದಾಗಿ ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಯಾವುದೇ ಸರ್ಕಾರದ ಅಧಿಕೃತ ಕೆಲಸ ನಡೆದಿಲ್ಲ ಎಂದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದೂ ಸರ್ಕಾರ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿಯವರ ಕಚೇರಿಯಿಂದ ಆದೇಶ ಹೊರಡಿಸಿದೆ.

ಇದನ್ನೂ ಓದಿ: Govt Employees Strike: ವೇತನ ಆಯೋಗ ವರದಿ ಜಾರಿಯಿಂದ ರಾಜ್ಯ ಬೊಕ್ಕಸಕ್ಕೆ ಹೊರೆ ಎನ್ನುವುದು ಸುಳ್ಳು: ಷಡಾಕ್ಷರಿ

Exit mobile version