Site icon Vistara News

ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ: ಆರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ

ಬೆಂಗಳೂರು: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನ ಆದೇಶ ಪಾಲನೆಗೆ ಬದ್ಧವಾಗಿದೆ, ಕಟ್ಟುನಿಟ್ಟಿನ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ.  ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶವಿಲ್ಲ. ಈ ಸೂಚನೆಯನ್ನು ಎಲ್ಲರೂ ಪಾಲಿಸಲೇಬೇಕು. ಇಲ್ಲವಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಬೇರೆ ಸಮಯದಲ್ಲಿ ದ್ವನಿವರ್ಧಕ ಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ ಸಾಂದ್ರತೆಯಲ್ಲಿರಬೇಕು, ಎಂಬುದರ ಬಗ್ಗೆ, ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಯಾವ ದರ್ಜೆಯ ಅಧಿಕಾರಿಗಳು, ದ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ದ್ವನಿವರ್ಧಕಗಳನ್ನು ತೆಗೆದು ಹಾಕಬಹುದು ಎಂಬುದರ ಬಗ್ಗೆಯೂ, ಮಾರ್ಗಸೂಚಿ ಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದ್ದಾರೆ.

ಕೈಗಾರಿಕಾ ವಲಯ, ವಸತಿ ಪ್ರದೇಶಗಳು, ವಾಣಿಜ್ಯ ವಲಯ ಹಾಗೂ ನಿಶಬ್ದ ವಲಯ ಗಳಲ್ಲಿ ಯಾವ ಪ್ರಮಾಣದಲ್ಲಿ ಶಬ್ದ ಸಾಂದ್ರತೆ ಇರಬಹುದು ಎಂದೂ ಮಾರ್ಗಸೂಚಿಯಲ್ಲಿ ಈಗಾಗಲೇ ಹೇಳಲಾಗಿದೆ.

ಇದನ್ನೂ ಓದಿ | ಆಜಾನ್‌ V/s ಭಜನೆ:‌ 15 ದಿನ ಮೊದಲು ಅನುಮತಿ ಪಡೆಯದಿದ್ದರೆ ಧ್ವನಿವರ್ಧಕ ಎತ್ತಂಗಡಿ

ಅನುಮತಿ ಇಲ್ಲದೆ ಧ್ವನಿವರ್ಧಕಗಳನ್ನು ಉಪಯೋಗಿಸುತ್ತಿರುವವರು ಇನ್ನು 15 ದಿನದ ಒಳಗೆ, ಸಂಬಂಧ ಪಟ್ಟ ಸಕ್ಷಮ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು, ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ. ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು. ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ದ್ವನಿವರ್ಧಕ ಗಳನ್ನು, ತೆಗೆದು ಹಾಕುವ ಪ್ರಕ್ರಿಯೆ, ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ |ಆಜಾನ್‌ ಸ್ಥಗಿತಗೊಳಿಸದಿದ್ದರೆ ಹನುಮಾನ್‌ ಚಾಲೀಸಾ ಪಠಣ: ವಿಶ್ವ ಹಿಂದು ಪರಿಷತ್‌ ಎಚ್ಚರಿಕೆ

Exit mobile version