Site icon Vistara News

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಧಾರವಾಡ ವಿಶ್ವೇಶ್ವರಯ್ಯ ಕಾಲೇಜಿನ ಪ್ರಾಂಶುಪಾಲ ವಶಕ್ಕೆ

Dharwad-college1

ಧಾರವಾಡ: ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ಮಾಡಿದ್ದಲ್ಲದೆ, ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಧಾರವಾಡದ ವಿಶ್ವೇಶ್ವರಯ್ಯ ಕಾಲೇಜಿನ ಪ್ರಾಂಶುಪಾಲರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಾದೇವ ಕುರವತ್ತಿಗೌಡರ ಎಂಬುವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇವರು ಎರಡನೇ ಆರೋಪಿಯಾಗಿದ್ದಾರೆ. ಮೊದಲನೇ ಆರೋಪಿಯಾಗಿರುವ ಕಾಲೇಜು ಅಧ್ಯಕ್ಷ ಬಸವರಾಜ ಯಡವಣ್ಣವರ ಪರಾರಿಯಾಗಿದ್ದು, ಆತನ ಶೋಧ ಕಾರ್ಯ ನಡೆಯುತ್ತಿದೆ.

ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿರುವ ಆರೋಪ ಇವರ ಮೇಲೆ ಇದೆ. ಸದ್ಯ ನೊಂದ ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಪೊಲೀಸರು ಒಳಪಡಿಸಿದ್ದಾರೆ. ಎರಡನೇ ಆರೋಪಿಯಾಗಿರುವ ಮಹಾದೇವ ಕುರವತ್ತಿಗೌಡರನ್ನು ಉಪನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಘಟನೆ ಸಂಬಂಧ ಬುಧವಾರ ಬೆಳಗ್ಗೆ ವಿದ್ಯಾರ್ಥಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಕಾಲೇಜಿನ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಮಾಯಿಸಿ, ನ್ಯಾಯಕ್ಕಾಗಿ ಆಗ್ರಹಿಸಿದ್ದರು.

ಇದನ್ನೂ ಓದಿ | ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಅತ್ಯಾಚಾರ, ಬಿಸಿನೆಸ್‌ ವಿಚಾರದ ಚರ್ಚೆಗೆ ಕರೆದು ದುಷ್ಕೃತ್ಯ ಎಸಗಿದ ಉದ್ಯಮಿ

Exit mobile version