ಬೆಂಗಳೂರು: ಈಗಾಗಲೇ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭವಾಗಿದೆ. ಪ್ರಸಕ್ತ ಸಾಲಿನಲ್ಲಿ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್ ಪಾಸ್ (Student Bus pass) ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ (computerized) ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುತ್ತಿದೆ. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್ ಐಡಿ ಇದಕ್ಕೆ ಲಾಗಿನ್ ಆಗಬೇಕು. ವಿದ್ಯಾರ್ಥಿಗಳು ಜೂನ್ 12 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆನ್‌ಲೈನ್‌ನಲ್ಲಿ ಫ್ರೀ, ಸೆಂಟರ್‌ನಲ್ಲಿ ಫೀಸ್
ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆನ್‌ಲೈನ್ ಹೊರತುಪಡಿಸಿ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲೂಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30 ಸೇವಾ ಶುಲ್ಕವನ್ನು ನೀಡಬೇಕಿದೆ.
ಇನ್ನು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು, ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ. ಬಳಿಕ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‌ಕಾರ್ಡ್ / ಡೆಬಿಟ್‌ಕಾರ್ಡ್ ಯುಪಿಐ ಮೂಲಕವೂ ಪಾವತಿಸಬಹುದಾಗಿದೆ.
ವಿದ್ಯಾರ್ಥಿನಿಯರಿಗೆ ಫ್ರೀ ಬಸ್
ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗಿದೆ. ಹೀಗಾಗಿ ವಿದ್ಯಾರ್ಥಿನಿಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಇರಲಿದೆ.
ನೆರೆ ರಾಜ್ಯದಲ್ಲಿ ವಾಸವಿದ್ದು ರಾಜ್ಯದೊಳಗೆ ಶಾಲಾ- ಕಾಲೇಜುಗಳಲ್ಲಿ ಓದುತ್ತಿದ್ದರೆ, ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲಾ- ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿಗಳು ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದಾಗಿದೆ. ನಿಗಮದ ವ್ಯಾಪ್ತಿಯಲ್ಲಿ 129 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ಈ ಲಿಂಕ್ ಕ್ಲಿಕ್ ಮಾಡಿ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಲಿಂಕ್ ಕ್ಲಿಕ್ ಮಾಡಿ