Heart Attack: ಪರೀಕ್ಷೆ ಬರೆಯುವಾಗ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು - Vistara News

ಕರ್ನಾಟಕ

Heart Attack: ಪರೀಕ್ಷೆ ಬರೆಯುವಾಗ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು

Heart Attack: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. 9ನೇ ತರಗತಿ ಪರೀಕ್ಷೆ ಬರೆಯುತ್ತಿದ್ದಾಗ ಹೃದಯಾಘಾತವಾಗಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

VISTARANEWS.COM


on

Heart Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಪರೀಕ್ಷೆ ಬರೆಯುವಾಗ ಹಠಾತ್‌ ಹೃದಯಾಘಾತವಾಗಿ 9ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ (Heart Attack) ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ.

ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ರಾಹುಲ್‌ ಕೋಲಕಾರ (15) ಮೃತ ವಿದ್ಯಾರ್ಥಿ. ಶಾಲೆಯಲ್ಲಿ ಅರ್ಧ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದಾಗ ವಿದ್ಯಾರ್ಥಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಬಾಲಕನನ್ನು ಶಾಲಾ ಸಿಬ್ಬಂದಿ ಹತ್ತಿರದ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ | CCB Raid : ಅವಧಿ ಮೀರಿದ ಔಷಧಿ ಸೇಲ್‌ ಮಾಡುತ್ತಿದ್ದ ತಂದೆ-ಮಗ; ಫಾರ್ಮಸಿ ಮೇಲೆ ಸಿಸಿಬಿ ದಾಳಿ

ಶಾಲೆಗೆ ಹೋಗಿದ್ದ 16 ವರ್ಷದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ

Girl found dead in Chikkaballapura

ಚಿಕ್ಕಬಳ್ಳಾಪುರ: ಶಾಲೆಗೆ ಹೋಗಿದ್ದ ಬಾಲಕಿಯೊಬ್ಬಳು ಶನಿವಾರ ಸಂಜೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ (Girl jumps into pond). ಆಕೆಯ ಸಾವಿನ ಬಗ್ಗೆ ಅನುಮಾನಗಳು (Girl found dead) ಹುಟ್ಟಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ (Chikkaballapura News) ಈರೇನಹಳ್ಳಿ ಗ್ರಾಮದ ಶಂಕರಪ್ಪ ಎಂಬವರ ಪುತ್ರಿ ನಯನಾ ಎಂಬ 16 ವರ್ಷದ ಬಾಲಕಿಯೇ (16 year old girl) ಮೃತಪಟ್ಟವಳು. ಈಕೆಯ ಶವ ಬಾಗೇಪಲ್ಲಿ ತಾಲ್ಲೂಕಿನ ಗೊಂಡ್ಲವಾರಪಲ್ಲಿ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.

10ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಮಧ್ಯಾಹ್ನ ಶಾಲೆ ಬಿಟ್ಟ ಬಳಿಕ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯವರು ಹುಡುಕಾಟ ಆರಂಭಿಸಿದರು. ಅಂತಿಮವಾಗಿ ಗೊಂಡ್ಲವಾರಪಲ್ಲಿ ಕೆರೆಯ ಸಮೀಪ ದಡದಲ್ಲಿ ಶಾಲೆ ಬ್ಯಾಗ್, ಆಧಾರ್ ಕಾರ್ಡ್ ಮತ್ತು ಚಪ್ಪಲಿಗಳು ಪತ್ತೆಯಾದವು. ಇವುಗಳ ಆಧಾರದಲ್ಲಿ ನಯನಾ ನೀರಿಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಅಂದಾಜಿಸಲಾಯಿತು. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Younster drowned : ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಲ್ಲಿ ಮುಳುಗಿ ಸಾವು

ಕೆರೆಯಲ್ಲಿ ಪರಿಶೀಲಿಸಿದಾಗ ಆಕೆಯ ಬಟ್ಟೆಗಳು ಕಂಡುಬಂದವು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಕೆಯ ಶವವನ್ನು ಮೇಲೆತ್ತಿದರು. ಆಕೆಯ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ದೇಶದ ಪ್ರಧಾನಿಗಳನ್ನು ಈ ವಿಚಾರದಲ್ಲಿ ಕರೆತರುವುದು ಒಳ್ಳೆಯದಲ್ಲ, ಅದು ಸೂಕ್ತವೂ ಅಲ್ಲ. ಅಲ್ಲದೇ ಹಾಸನ ಪ್ರಕರಣ ವಿಚಾರಕ್ಕೆ ನನಗೂ ಸಂಬಂಧ ಇಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Nikhil Kumaraswamy
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣ (Prajwal Revanna Case) ದೇಶಾದ್ಯಂತ ಸಂಚಲನ ಮೂಡಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆ ಮಾಡುತ್ತಿರುವ ನಡುವೆ ಮೊದಲ ಬಾರಿ ಮಾಧ್ಯಮಗಳಿಗೆ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ದೇವೇಗೌಡರನ್ನು ಹಾಗೂ ಕುಮಾರಸ್ವಾಮಿ ಅವರನ್ನು ಮುಂದೆ ತರುವುದು ಸರಿಯಲ್ಲ. ನಾನು ಈಗಾಗಲೇ ಹೇಳಿದ್ದೇನೆ, ಯಾರು ತಪ್ಪು ಮಾಡಿದ್ದಾರೆ, ಅವರಿಗೆ ಖಂಡಿತಾ ಶಿಕ್ಷೆ ಆಗಬೇಕು. ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದರು.

ನಗರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಭೇಟಿಯಾದ ಬಳಿಕ ಅವರು ಮಾತನಾಡಿದ್ದು, ನನಗೆ ನಾಲ್ಕು ದಿನಗಳಿಂದ ವೈರಲ್ ಫೀವರ್ ಇತ್ತು. ಹಾಗಾಗಿ ದೇವೇಗೌಡರನ್ನು ಪೋನ್‌ನಲ್ಲಿ ಮಾತನಾಡಿದ್ದೆ. ಈಗ ಬಂದು ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ಇನ್ನು ಪ್ರಕರಣದಲ್ಲಿ ದೇಶದ ಪ್ರಧಾನಿಗಳನ್ನು ಈ ವಿಚಾರದಲ್ಲಿ ಕರೆತರುವುದು ಒಳ್ಳೆಯದಲ್ಲ, ಅದು ಸೂಕ್ತವೂ ಅಲ್ಲ. ಅಲ್ಲದೇ ಹಾಸನ ಪ್ರಕರಣ ವಿಚಾರಕ್ಕೆ ನನಗೂ ಸಂಬಂಧ ಇಲ್ಲ. ನಾನು ಹೆಚ್ಚಾಗಿ ಹಾಸನಕ್ಕೆ ಕಾಲೇ ಇಟ್ಟಿಲ್ಲ. ವರ್ಷದಲ್ಲಿ ಹಾಸನಾಂಬೆ ದರ್ಶನಕ್ಕೆ ಮಾತ್ರ ಹೋಗುತ್ತೇನೆ. ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ. ಕರ್ನಾಟಕ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿದೆ, ತನಿಖೆ ನಡೆಯುತ್ತಿದ್ದು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಅದು ಒಂದು ಪ್ರಕ್ರಿಯೆ, ಅದರ ಬಗ್ಗೆ ನಾನು ಮಾತನಾಡಲು ಹೋಗಲ್ಲ ಎಂದು ಹೇಳಿದರು.

ಡಿ.ಕೆ. ಬ್ರದರ್ಸ್ ಅವರಿಂದ ದೇವೇಗೌಡ ಹಾಗೂ ಕುಮಾರಸ್ವಾಮಿ ಟಾರ್ಗೆಟ್ ಅಗುತ್ತಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಒಂದು ಪ್ರಕರಣ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡುತ್ತಿದೆ. ವಿಶೇಷವಾಗಿ ದೇವೇಗೌಡ ಅವರ ಜೀವನ ತೆರೆದ ಪುಸ್ತಕ, ಅಜ್ಜಿ ಚೆನ್ನಮ್ಮ ಯಾವ ರೀತಿ ಬದುಕಿದ್ದಾರೆ ಅಂತ ಅದು ನಮಗೆ ಗೊತ್ತು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಅವರಿಗೆ 92 ವರ್ಷ ಆಗಿದೆ. ಅವರಿಗೆ ಸಹಜವಾಗಿ ಮನಸ್ಸಿನ ಮೇಲೆ ಪ್ರಭಾವ ಬೀರುತ್ತೆ. ಒಬ್ಬರೇ ವಿಶ್ರಾಂತಿ ತೆಗೆದುಕೊಳ್ತಾ ಇದ್ದರು, ದೇವಸ್ಥಾನಕ್ಕೆ ಹೋಗಿಬಂದೆ ಅಂದರು. ಅವರು ಸಾಕಷ್ಟು ನೊಂದಿದ್ದಾರೆ, ನಮ್ಮ ಅಜ್ಜಿ ಸಹ ಬಹಳ ನೋವಿನಲ್ಲಿದ್ದಾರೆ ಎಂದು ತಿಳಿಸಿದರು.

ನನಗೆ ಒಂದೇ ಒಂದು ದುಃಖ ಏನೆಂದರೆ, ಆ ದೃಶ್ಯ ಏನಿದೆ ಅದನ್ನು ನಾನು ನೋಡಕ್ಕೆ ಹೋಗಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ, ಕನಿಷ್ಠ ಆ ವೀಡಿಯೊ ಬ್ಲರ್ ಕೂಡ ಆಗಿಲ್ಲ. ಆದರೆ, ಪಾಪ ಆ ಹೆಣ್ಣು ಮಕ್ಕಳನ್ನ ಓಪನ್ ಆಗಿ ತೋರಿಸಿದ್ದಾರ. ಇದು ನಿಜಕ್ಕೂ ಕೂಡ ಬೇಜಾರು ಆಗುತ್ತೆ. ಇದರ ಬಗ್ಗೆಯೂ ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಹಾಸನ ಟಿಕೆಟ್ ವಿಚಾರದಲ್ಲಿ ಬಿಜೆಪಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಪಕ್ಷದ ಕಾರ್ಯಕರ್ತರು ರಾಷ್ಟ್ರೀಯ ಅಧ್ಯಕ್ಷರು ಅಂತಿಮ ನಿರ್ಧಾರ ಮಾಡುತ್ತಾರೆ, ಅವರ ನಿರ್ಧಾರಕ್ಕೆ ತಲೆಬಾಗಿ ಕೆಲಸ ಮಾಡಿದ್ದೇವೆ ಎಂದರು. ಇನ್ನು ಪ್ರಕರಣದಿಂದ ನೊಂದ ಪಕ್ಷದ ಹಾಸನ ಕಾರ್ಯಕರ್ತರರಿಗೆ ಧೈರ್ಯ ಹೇಳುವ ಬಗ್ಗೆ ಸ್ಪಂದಿಸಿ, ನೂರಕ್ಕೆ ನೂರು ಆ ವಿಚಾರದಲ್ಲಿ ಹಾಸನಕ್ಕೆ ಹೋಗೊದು ಇದೆ. ಪಕ್ಷದ ನಾಯಕರು ಕಾರ್ಯಕರ್ತರ ಬಳಿ ಕುಮಾರಣ್ಣ ಹೋಗುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

ಶಿವರಾಮೇಗೌಡರ ಆರೋಪದ ವಿಚಾರ ಪ್ರತಿಕ್ರಿಯಿಸಿ, ಶಿವರಾಮೇಗೌಡರು ಬಹಳ ದೊಡ್ಡವರಿದ್ದಾರೆ. ಪಾಪ ಏನೋ ಮಾತನಾಡುತ್ತಾರೆ, ಎಸ್ಐಟಿ ರಚನೆ ಆಗಿದೆ. ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Continue Reading

ಬಾಗಲಕೋಟೆ

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

Road Accident : ಟಿಪ್ಪರ್‌ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಸಿದ್ದನಕೊಳ್ಳ ಡಾ.ಶಿವಕುಮಾರ್ ಶ್ರೀಗಳಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Road Accident in bagalakote
Koo

ಬಾಗಲಕೋಟೆ: ಬಾಗಲಕೋಟೆ (Baglkote News) ಜಿಲ್ಲೆಯ ಹುನಗುಂದ ತಾಲೂಕಿನ ಬಾನಂತಿ ಕೊಳ್ಳದ ಸಮೀಪ ವೇಗವಾಗಿ ಬಂದ ಟಿಪ್ಪರ್‌ ಲಾರಿ- ಕಾರಿನ ನಡುವೆ ಅಪಘಾತ (Road Accident) ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರಗೊಂಡಿದ್ದು, ಲಾರಿ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ.

ಇನ್ನೂ ಕಾರಿನೊಳಗೆ ಇದ್ದ ಸಿದ್ದನಕೊಳ್ಳ ಡಾ.ಶಿವಕುಮಾರ್ ಶ್ರೀಗಳಿಗೆ ಗಂಭೀರ ಗಾಯಗೊಂಡಿದ್ದಾರೆ. ಶ್ರೀಗಳೇ ಕಾರು ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಡಾ.ಶಿವಕುಮಾರ್ ಶ್ರೀಗಳನ್ನು ಆಂಬ್ಯುಲೆನ್ಸ್‌ ಮೂಲಕ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮಿನಗಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಅಮಿನಗಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Self Harming : ಸಾಲಬಾಧೆಗೆ ನೊಂದು ಮನೆಯೊಳಗೆ ನೇಣಿಗೆ ಕೊರಳೊಡ್ಡಿದ ಗೃಹಿಣಿ

ಹೆರಿಗೆಯಾದ ಮೂರು ಗಂಟೆಗಳಲ್ಲೇ ಅಪಾರ್ಟ್‌ಮೆಂಟ್‌ ಮೇಲಿಂದ ಮಗುವನ್ನೇ ಎಸೆದ್ಳಾ?

ಕೊಚ್ಚಿ: ಹೆತ್ತ ತಾಯಿಯೊಬ್ಬಳು ಹಸುಗೂಸನ್ನು (Newly born Child) ಅಪಾರ್ಟ್‌ಮೆಂಟ್‌(Apartment)ನಿಂದ ಕೆಳಗೆಸೆದಿರುವಂತಹ ಆಘಾತಕಾರಿ ಘಟನೆ(Viral News) ಕೇರಳದ(Kerala) ಕೊಚ್ಚಿಯಲ್ಲಿ ನಡೆದಿದೆ. ಪಣಂಪುಲ್ಲಿನಗರದಲ್ಲಿ ಈ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್‌ವೊಂದರ ಪಕ್ಕದ ರಸ್ತೆಯಲ್ಲಿ ಬಟ್ಟೆ ಮತ್ತು ಕೊರಿಯರ್‌ ಪ್ಲಾಸ್ಟಿಕ್‌ನಲ್ಲಿ ಸುತ್ತಿದ್ದ ಮಗುವಿನ ಮೃತದೇಹ ಪತ್ತೆಯಾಗಿತ್ತು. ಇದನ್ನು ನೋಡಿದ ಜನ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ ತಾಯಿಯೇ ಮಗುವನ್ನು ಎಸೆದಿರುವ ಆಘಾತಕಾರಿ ವಿಚಾರ ಬಯಲಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದಾಗ ಅಪಾರ್ಟ್‌ಮೆಂಟ್‌ನಿಂದ ಮಗುವನ್ನು ಎಸೆದಿರುವುದು ಸ್ಪಷ್ಟವಾಗಿದೆ. ಮೇಲಿನಿಂದ ಕೆಳಗೆ ಬಿದ್ದ ಮಗು ಸ್ಥಳದಲ್ಲೇ ಅಸುನೀಗಿದೆ. ತಕ್ಷಣ ಅಪಾರ್ಟ್‌ಮೆಂಟ್‌ ಒಳಗೆ ಹೋದ ಪೊಲೀಸರು 23ವರ್ಷದ ಮಹಿಳೆಯಯನ್ನು ಅರೆಸ್ಟ್‌ ಮಾಡಿದ್ದು, ಆಕೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಮುಂದಿನ ಕಾನೂನು ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಇನ್ನು ಮಹಿಳೆ ಹೆರಿಗೆಯಾದ ಮೂರು ಗಂಟೆಗಳ ನಂತರ ಗಾಬರಿಯಲ್ಲಿ ಮಗುವನ್ನು ಬಟ್ಟೆಯಲ್ಲಿ, ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಮಹಿಳೆ ಅಪಾರ್ಟ್‌ಮೆಂಟ್‌ನಿಂದ ಎಸೆದಿದ್ದಾಳೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಮಹಿಳೆ ಅತ್ಯಾಚಾರ ಸಂತ್ರಸ್ತೆ ಎಂಬ ಶಂಕೆ

ವಿಚಾರಣೆ ಆರಂಭಿಸಿರುವ ಪೊಲೀಸರು ಮಹಿಳೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ವಿಚಾರಣೆ ವೇಳೆ ಮಹಿಳೆ ಈ ಕೃತ್ಯ ತಾನೇ ಎಸಗಿರುವುದಾಗಿ ಒಪ್ಪಿಕೊಂಡಿದ್ದು, ಮಗುವಿನ ಮರಣೋತ್ತರ ಪರೀಕ್ಷೆ ಬಳಿಕವಷ್ಟೇ ಕೃತ್ಯದ ಹಿಂದಿರುವ ನಿಜವಾದ ಉದ್ದೇಶ ಬಯಲಾಗಲಿದೆ. ಒಂದು ವೇಳೆ ಮಹಿಳೆ ಮೇಲೆ ಅತ್ಯಾಚಾರ ನಡೆದಿದ್ದರೆ ಅದರ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಇನ್ನು ಆರೋಪಿ ಮಹಿಳೆ ಗರ್ಭಿಣಿಯಾಗಿರುವ ವಿಚಾರ ಆಕೆಯ ಮನೆಯವರಿಗೆ ತಿಳಿದಿರಲಿಲ್ಲ. ಅವರಿಗೂ ಈ ಕೊಲೆಗೂ ಯಾವುದೇ ಸಂಬಂಧ ಇಲ್ಲ ಎಂದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ.

ಇಂತಹದ್ದೇ ಒಂದು ಘಟನೆ ಎರಡು ತಿಂಗಳ ಹಿಂದೆ ಮಡಿಕೇರಿಯ ಸುಂಠಿಕೊಪ್ಪದಲ್ಲಿ ನಡೆದಿತ್ತು. ಯಂಕನ ದೇವರಾಜು ಎಂಬುವವರ ಗದ್ದೆಯಲ್ಲಿ ನವಜಾತ ಶಿಶುವಿನ ಮೃತದೇಹ ಮಣ್ಣಿನೊಳಗೆ ಪತ್ತೆಯಾಗಿತ್ತು. ತನಿಖೆ ನಡೆಸಿದಾಗ ಹೆತ್ತ ತಾಯಿಯೇ ಮಗುವನ್ನು ಕತ್ತು ಹಿಸುಕಿ ಕೊಂದು ನಂತರ ಮಣ್ಣಿನಲ್ಲಿ ಹೂತಿರುವುದು ಬೆಳಕಿಗೆ ಬಂದಿತ್ತು. ಘಟನೆಗೆ ಸಂಬಂಧಿಸಿ ಸುಂಟಿಕೊಪ್ಪ ಪೊಲೀಸರು ಆರೋಪಿಗಳಿಬ್ಬರನ್ನು ಪತ್ತೆಹಚ್ಚಿ ಬಂಧಿಸಿದ್ದು, ಬಂಧಿತರನ್ನು ಗದ್ದೆಹಳ್ಳ ಗಿರಿಯಪ್ಪ ಮನೆ ಗದ್ದೆಯಲ್ಲಿ ವಾಸವಾಗಿರುವ ಕುಮಾರ ಮತ್ತು ಆತನ ತಾಯಿ ಯಮುನಾ ಎಂದು ಗುರುತಿಸಲಾಗಿದೆ. ಇವರು ಆಗಷ್ಟೇ ಹುಟ್ಟಿದ ಮಗುವಿನ ಕತ್ತು ಹಿಸುಕಿ ಸಾಯಿಸಿ ನಂತರ ಹೂತು ಹಾಕಿರುವುದನ್ನು ಪೋಲೀಸರ ವಿಚಾರಣೆ ಸಂದರ್ಭ ಒಪ್ಪಿಕೊಂಡಿದ್ದರು.

ವಿವಾಹಿತನಾಗಿರುವ ಕುಮಾರನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಈತ ಚೆಟ್ಟಳ್ಳಿ ಸಮೀಪದ ಗ್ರಾಮವೊಂದರ ಮಹಿಳೆ ಒಬ್ಬಳ ಜತೆ ಅಕ್ರಮ ಸಂಬಂಧ ಇರಿಸಿದ್ದು ಇದರ ಫಲವಾಗಿ ಆಕೆ ತುಂಬು ಗರ್ಭಿಣಿಯಾಗಿದ್ದಳು. ರಾತ್ರಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ ಕುಮಾರ ಮತ್ತು ಅವನ ತಾಯಿ ನವಜಾತ ಶಿಶುವಿನ ಕತ್ತುಹಿಸುಕಿ ಅದರ ಜೀವ ಕಿತ್ತುಕೊಂಡಿದ್ದರು. ಮರುದಿನ ಮುಂಜಾನೆ ಕುಮಾರ ಮತ್ತು ಯಮುನಾ ರಸ್ತೆ ಬದಿಯ ಗದ್ದೆಯಲ್ಲಿ ಗುಂಡಿ ತೋಡಿ ನವಜಾತ ಶಿಶುವನ್ನು ಹೂತಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

MTR: ಎಂಟಿಆರ್ ಕರುನಾಡು ಸ್ವಾದ ಕರ್ನಾಟಕ ವಿಶಿಷ್ಟ ಆಹಾರ ಉತ್ಸವಕ್ಕೆ ಬೆಂಗಳೂರಿನ ಜಯಮಹಲ್ ಪ್ಯಾಲೇಸ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ ಚಾಲನೆ ದೊರೆಯಿತು. 100 ವರ್ಷಗಳ ಸಂಭ್ರಮಾಚರಣೆಯೊಂದಿಗೆ ಎಂಟಿಆರ್ ತನ್ನ ‌ಜನಪ್ರಿಯ ಆಹಾರ ಉತ್ಸವದ 3ನೇ ಆವೃತ್ತಿಯಾದ ಎಂಟಿಆರ್‌ ಕರುನಾಡು ಸ್ವಾದ ಎರಡು ದಿನಗಳ ಕರ್ನಾಟಕ ವಿಶಿಷ್ಟ ಆಹಾರ ಉತ್ಸವವನ್ನು ಭಾರತದ ಮಾಜಿ ಸಾಲಿಸಿಟರ್ ಜನರಲ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಿದರು.

VISTARANEWS.COM


on

MTR Karunadu Svada food festival inauguration in Bengaluru
Koo

ಬೆಂಗಳೂರು: ಎಂಟಿಆರ್ ಕರುನಾಡು ಸ್ವಾದ ಕರ್ನಾಟಕ ವಿಶಿಷ್ಟ ಆಹಾರ ಉತ್ಸವಕ್ಕೆ ಬೆಂಗಳೂರಿನ ಜಯಮಹಲ್ ಪ್ಯಾಲೇಸ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ ಚಾಲನೆ ದೊರೆಯಿತು. 100 ವರ್ಷಗಳ ಸಂಭ್ರಮಾಚರಣೆಯೊಂದಿಗೆ ಎಂಟಿಆರ್ (MTR) ತನ್ನ ‌ಜನಪ್ರಿಯ ಆಹಾರ ಉತ್ಸವದ 3ನೇ ಆವೃತ್ತಿಯಾದ ಎಂಟಿಆರ್‌ ಕರುನಾಡು ಸ್ವಾದ ಎರಡು ದಿನಗಳ ಕರ್ನಾಟಕ ವಿಶಿಷ್ಟ ಆಹಾರ ಉತ್ಸವವನ್ನು ಭಾರತದ ಮಾಜಿ ಸಾಲಿಸಿಟರ್ ಜನರಲ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಿದರು.

ಆಹಾರ ಉತ್ಸವದ ವಿಶೇಷತೆ

ಎಂಟಿಆರ್‌ನ ಪಾಕಶಾಲೆಯ ಸೆಂಟರ್‌ ಆಫ್‌ ಎಕ್ಸಿಲೆನ್ಸ್‌ (Centre of Excellence) ನೇತೃತ್ವದಲ್ಲಿ, 50 ಕ್ಕೂ ಹೆಚ್ಚು ಗೃಹ ಬಾಣಸಿಗರು ಉತ್ತರ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ, ಕಲ್ಯಾಣ ಕರ್ನಾಟಕ, ಉಡುಪಿ ಮತ್ತು ಹಳೇ ಮೈಸೂರು ಸೇರಿದಂತೆ ಕರ್ನಾಟಕದ ಆರು ಪ್ರದೇಶಗಳ 100ಕ್ಕೂ ಹೆಚ್ಚು ಖಾದ್ಯಗಳನ್ನು ಪ್ರದರ್ಶಿಸುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ಖರೀದಿಗೆ ಮುನ್ನ ದರದ ಜೊತೆಗೆ ಇದು ತಿಳಿದಿರಲಿ

ಉತ್ಸವದಲ್ಲಿ ವಿಶೇಷ ಪಾಕವಿಧಾನ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ಪುಸ್ತಕವು 100 ಕ್ಕೂ ಹೆಚ್ಚು ಪಾಕವಿಧಾನಗಳ ಸಂಗ್ರಹಣೆಯನ್ನು ಹೊಂದಿದೆ. ಇದರಿಂದ ವಿಶೇಷ ಭಕ್ಷ್ಯಗಳನ್ನು ಮನೆಯಲ್ಲಿಯೇ ತಯಾರಿಸಬಹುದಾಗಿದೆ.

ಈ ವೇಳೆ ಎಂಟಿಆರ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುನಯ್ ಭಾಸಿನ್ ಮಾತನಾಡಿ, “ಎಂಟಿಆರ್ ಕರುನಾಡು ಸ್ವಾದವು” ಕರ್ನಾಟಕದ ಆಹಾರ ಮತ್ತು ಸಂಸ್ಕೃತಿಯ ಮೇಲಿರುವ ಪ್ರೀತಿಯಿಂದ ಸೃಷ್ಟಿಯಾಗಿದೆ. ಇದು ಕರ್ನಾಟಕದ ವೈವಿಧ್ಯಮಯ ರುಚಿಗಳ ಆಚರಣೆಯಾಗಿದೆ ಮತ್ತು ರಾಜ್ಯದ ಪಾಕಶಾಲೆಯ ಪರಂಪರೆಯನ್ನು ಎತ್ತಿಹಿಡಿಯುವ ಬದ್ಧತೆಯಾಗಿದೆ. ಈ ಅಮೂಲ್ಯವಾದ ಭಕ್ಷ್ಯಗಳ ಮೂಲಕ ಕರುನಾಡು ಪರಂಪರೆಯನ್ನು ಸಂರಕ್ಷಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

ಆಹಾರ ಉತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ ಮತ್ತು ಡೊಳ್ಳು ಕುಣಿತದಂತಹ ಕರ್ನಾಟಕದ ನೃತ್ಯ ಪ್ರಕಾರಗಳನ್ನು ಆಯೋಜಿಸಿರುವುದು ವಿಶೇಷವಾಗಿದೆ.

Continue Reading

ಕರ್ನಾಟಕ

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Prajwal Revanna Case: ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಬಳಿಕ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಈಗ ಮತ್ತೊಂದು ದೇಶಕ್ಕೆ ಹಾರಿರುವ ಪ್ರಜ್ವಲ್‌ ರೇವಣ್ಣ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ, ಹಾಸನ ಸಂಸದನ ವಿರುದ್ಧ ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅಶ್ಲೀಲ ವಿಡಿಯೊ, ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಹಾಸನ ಜೆಡಿಎಸ್‌ ಸಂಸದ (Hassan JDS MP) ಪ್ರಜ್ವಲ್‌ ರೇವಣ್ಣ (Prajwal Revanna Case) ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ಮುಂದುವರಿಸಿದ್ದಾರೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಬಳಿಕ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಈಗ ಮತ್ತೊಂದು ದೇಶಕ್ಕೆ ಹಾರಿರುವ ಪ್ರಜ್ವಲ್‌ ರೇವಣ್ಣ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರು ನೋಟಿಸ್ ಹಾಗೂ ಕೊನೆಗೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದು, ರೇವಣ್ಣ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರೇವಣ್ಣ ಅವರು ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ನೀಡಿದೆ. ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

Continue Reading
Advertisement
IPL 2024
ಕ್ರೀಡೆ2 mins ago

IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

Nikhil Kumaraswamy
ಕರ್ನಾಟಕ19 mins ago

Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

PBKS vs CSK
ಕ್ರೀಡೆ30 mins ago

PBKS vs CSK: ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ; ಗಾಯಕ್ವಾಡ್​ಗೆ ಸೇಡಿನ ಪಂದ್ಯ

Road Accident in bagalakote
ಬಾಗಲಕೋಟೆ31 mins ago

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

MTR Karunadu Svada food festival inauguration in Bengaluru
ಕರ್ನಾಟಕ31 mins ago

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

Vijay Devarakonda announces new film
ಕಿರುತೆರೆ33 mins ago

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Amruthadhare Serial Bhumika-Gautham angryness has melted like ice
ಕಿರುತೆರೆ34 mins ago

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Gold smuggling
ದೇಶ38 mins ago

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Prajwal Revanna Case
ಕರ್ನಾಟಕ44 mins ago

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Money Guide
ಮನಿ-ಗೈಡ್53 mins ago

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌