ಮಂಗಳೂರು: ಇಲ್ಲಿನ ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯ ಆಡಳಿತ ಸೌಧಕ್ಕೆ ಎವಿಬಿಪಿ (Student Protest) ಸಂಘಟನೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಪರೀಕ್ಷೆ ಫಲಿತಾಂಶ ವಿಳಂಬ ಪ್ರಶ್ನಿಸಿ ಸುಮಾರು 500ಕ್ಕೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಸಭೆ ನಡೆಯುವಾಗಲೇ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು- ಕಾರ್ಯಕರ್ತರ ನಡುವೆ ನೂಕಾಟ ನಡೆಯಿತು. ಕಾರ್ಯಕರ್ತರು ಆವರಣಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ತಡೆಯಲು ಮುಂದಾಗಿದ್ದು, ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ನುಗ್ಗಲು ಯತ್ನಿಸಿದ್ದರು. ವಿದ್ಯಾರ್ಥಿಗಳನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
ವಿಶ್ವವಿದ್ಯಾಲಯವು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದ್ದಾರೆ. ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಆಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಇತ್ತ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್. ಯಡಪಡಿತ್ತಾಯ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು.
ಇದನ್ನೂ ಓದಿ | ಹಸುಗೂಸಿನೊಂದಿಗೆ ಚಳಿಗಾಲದ ಅಧಿವೇಶನಕ್ಕೆ ಬಂದ ಮಹಾರಾಷ್ಟ್ರ ಶಾಸಕಿ; ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಶಿಂಧೆ