ಚಿಕ್ಕಮಗಳೂರು: ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಸಂಭವಿಸಿದ ದುರಂತಗಳಲ್ಲಿ ಇಬ್ಬರು ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ (Students death). ಚಿಕ್ಕಮಗಳೂರಿನಲ್ಲಿ 9ನೇ ತರಗತಿ ವಿದ್ಯಾರ್ಥಿ ಸಾವಿಗೆ ಶರಣಾಗಿದ್ದರೆ (Self Harming), ಹಾರಂಗಿ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ಬಾಲಕನೊಬ್ಬ ನಾಪತ್ತೆಯಾಗಿದ್ದಾನೆ (Boy Missing).
ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಖಾಸಗಿ ಶಾಲೆಯೊಂದರ (Koppa Private School) ಒಂಬತ್ತನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಲೆಯ ಹಾಸ್ಟೆಲ್‌ನಲ್ಲಿ ವಾಸವಾಗಿರುವ ಶ್ರೀನಿವಾಸ್ ಅಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಲೆಯಲ್ಲಿ ತನ್ನ ಪಾಡಿಗೆ ತಾನಿದ್ದುಕೊಂಡು ಗುಡ್ ಸ್ಟೂಡೆಂಟ್ ಎಂದು ಹೆಸರು ಪಡೆದಿದ್ದ ಶ್ರೀನಿವಾಸ್ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಶ್ರೀನಿವಾಸ್ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು, ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾರಂಗಿ ನಾಲೆಗೆ ಬಿದ್ದ ಶಾಲಾ ಬಾಲಕ ಕಣ್ಮರೆ
ಕೊಡಗು ಜಿಲ್ಲೆಯ ಕುಶಾಲ ನಗರ ತಾಲೂಕಿನ ಬ್ಯಾಡಗೊಟ್ಟದಲ್ಲಿರುವ ಹಾರಂಗಿ ನಾಲೆಗೆ (Harangi Channel) ಬಿದ್ದು ಒಬ್ಬ ಬಾಲಕ ಕಣ್ಮರೆಯಾಗಿದ್ದಾನೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರ ಬಳಿ ಈ ಘಟನೆ ನಡೆದಿದೆ.
ಸದ್ಗುರು ಅಪ್ಪಯ್ಯ ಸ್ವಾಮಿ ಶಾಲೆಯ ಬಾಲಕ ಅನಿತ್ ನೀರುಪಾಲಾದವನು. ಇಲ್ಲಿನ ನಿರಾಶ್ರಿತರ ಕೇಂದ್ರದ ಸಮೀಪದಲ್ಲೇ ಹಾರಂಗಿ ನಾಲೆ ಹಾದುಹೋಗಿದೆ.
ಬುಧವಾರ ಬೆಳಗ್ಗೆ ನಾಲೆಯಲ್ಲಿ ಏಡಿ ಹಿಡಿಯಲು ಹೋದ ಸಂದರ್ಭ ಬಾಲಕ ನೀರುಪಾಲಾಗಿದ್ದಾನೆ. ಆತನಿಗಾಗಿ ಎಲ್ಲ ಕಡೆ ಹುಡುಕಾಟ ನಡೆದಿದೆ. ಇದೀಗ ಜಲಾಶಯದಿಂದ ನಾಲೆಗೆ ಬರುವ ನೀರನ್ನು ಸ್ಥಗಿತಗೊಳಿಸಿ ಬಾಲಕನಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿಗೆ ಶರಣು
ಹೊಸಕೋಟೆ: ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಣ್ಣೂರಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಸಾವಿನ (Self Harming) ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಹಿಮಾ (18) ಶವವಾಗಿ ಪತ್ತೆಯಾದ ದ್ವಿತೀಯ ಪಿಯು ವಿದ್ಯಾರ್ಥಿನಿ. ಮುಳಬಾಗಿಲು ತಾಲೂಕಿನ ನಂಗಲಿ ಮೂಲದ ವಿದ್ಯಾರ್ಥಿನಿ, ಅಜ್ಜಿ ಮನೆಯಲ್ಲಿದ್ದು ಹೊಸಕೋಟೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಅಜ್ಜಿ ಬೆಳಗ್ಗೆ ಹೂವಿನ ವ್ಯಾಪಾರಕ್ಕೆ ಹೋದ ವೇಳೆ ಘಟನೆ ನಡೆದಿದೆ. ಫೋನ್ ಮಾಡಿದಾಗ ಹಿಮಾ ಕರೆ ಸ್ವೀಕರಿಸಿಲ್ಲ. ಹೀಗಾಗಿ ಪಕ್ಕದ ಮನೆಯವರನ್ನು ಕಳುಹಿಸಿ ನೋಡಿದಾಗ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಗಳ ಅಕಾಲಿಕ ಸಾವು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಇದನ್ನೂ ಓದಿ: Live Self Harming : ನಂಗೆ ಅವಳ ಜತೆ ಸಂಬಂಧ ಇಲ್ಲ ಇಲ್ಲ ಇಲ್ಲ; Liveನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ