Site icon Vistara News

ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಶಾಲೆ ಪ್ರಭಾರಿ ಮುಖ್ಯ ಶಿಕ್ಷಕ ಸೇರಿ ನಾಲ್ವರ ಅಮಾನತು

ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದ 20ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರು ಸೇರಿ ನಾಲ್ಕು ಜನರು ಅಮಾನತುಗೊಂಡಿದ್ದಾರೆ.

ಡಿಡಿಪಿಐ ವೃಷಬೇಂದ್ರಯ್ಯ ಅಮಾನತು ಬಗ್ಗೆ ‌ ಮೌಖಿಕ‌ ಆದೇಶ ಹೊರಡಿಸಿದ್ದಾರೆ. ತಾಲೂಕಿನ ಅಮೀನಗಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಿದ್ದಬಸಯ್ಯ, ಶಿಕ್ಷಕರು ಸೇರಿದಂತೆ ಅಡುಗೆ ಕೆಲಸ ಮಾಡುತ್ತಿದ್ದವರು ಸೇರಿ ನಾಲ್ಕು ಜನರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ | ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬುಧವಾರ ಗೋಧಿ ‌ರವೆ ಉಪ್ಪಿಟ್ಟು ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣ ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿತ್ತು. ಘಟನೆ ಬಗ್ಗೆ ಸಂಪೂರ್ಣ ವಿಚಾರಣೆ ‌ನಡೆಸಿ ಡಿಡಿಪಿಐ ಮೌಖಿಕ‌‌ ಆದೇಶ ಹೊರಡಿಸಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಕವಿತಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ | ರಾಯಚೂರಿನ ನಂತರ ಬಳ್ಳಾರಿಯಲ್ಲಿ ಆತಂಕ: ಕಲುಷಿತ ನೀರು ಸೇವನೆಯಿಂದ ಓರ್ವ ಬಾಲಕಿ ಸಾವು, 20 ಮಂದಿ ಅಸ್ವಸ್ಥ

Exit mobile version