ನವದೆಹಲಿ: ದಕ್ಷಿಣ ಭಾರತದಲ್ಲಿ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು, ಸಹಾಯ ಮಾಡಬೇಕು ಎಂದು ಕರ್ನಾಟಕದ ಕಬ್ಬು ಬೆಳೆಗಾರರ ನಿಯೋಗವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಪೀಯೂಷ್ ಗೋಯೆಲ್, ನರೇಂದ್ರ ಸಿಂಗ್ ತೋಮರ್ ಅವರುಗಳನ್ನು ಕಬ್ಬು ಬೆಳೆಗಾರರ ಸಂಘದ ನಿಯೋಗ ಭೇಟಿ ಮಾಡಿತು.
ನಂತರ ಮಾತನಾಡಿದ ನಿಯೋಗದ ಸದಸ್ಯರು, ದೇಶದ ಅನೇಕ ರಾಜ್ಯಗಳಿಂದ ನಿಯೋಗ ಭೇಟಿ ಮಾಡಿದ್ದೇವೆ. ದಕ್ಷಿಣ ಭಾರತದಲ್ಲಿ ಕಬ್ಬು ಬೆಳೆಗಾರರಿಗೆ ಕಷ್ಟವಾಗುತ್ತಿದೆ. ಕನಿಷ್ಟ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಬೇಕು. ದಕ್ಷಿಣ ಭಾರತದಲ್ಲಿ ಕಬ್ಬು ಇಳುವರಿ ಕಡಿಮೆ ಬರುತ್ತದೆ. ಇದರಿಂದ ರೈತರಿಗೆ ಬೆಳೆ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ.
ರೈತರಿಗೆ ಬ್ಯಾಂಕ್ ಸಾಲದ ಮೇಲೆ ಸಿಬಿಲ್ ಸ್ಕೋರ್ ಹೇರಲಾಗುತ್ತಿದೆ. ಇದರಿಂದ ರೈತರಿಗೆ ಸರಿಯಾದ ಸಮಯದಲ್ಲಿ ಸಾಲ ಸಿಗುತ್ತಿಲ್ಲ. ಇದನ್ನು ಕೂಡಲೆ ರದ್ದು ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ ಎಂದರು.
ಇದನ್ನೂ ಓದಿ | ನವದೆಹಲಿಯಲ್ಲಿ ಮೋದಿ ಭೇಟಿ ಮಾಡಿದ ಯಡಿಯೂರಪ್ಪ; ಪಕ್ಷದ ಸಂಘಟನೆ ಕುರಿತು ಚರ್ಚೆ