ಬೆಂಗಳೂರು: ರಾಜಧಾನಿ ನಗರ ಭಾಗದಲ್ಲಿ ಆತ್ಮಹತ್ಯೆ (Suicide) ಯತ್ನ ಪ್ರಕರಣಗಳು ಹೆಚ್ಚಾಗುತ್ತಿವೆ. ಚಿಕ್ಕ ಪುಟ್ಟ ವಿಷಯಕ್ಕೂ ಸಾಯುವ ಯೋಚನೆ ಮಾಡುತ್ತಿರುವವರಲ್ಲಿ ವಿದ್ಯಾರ್ಥಿಗಳ ಸಹಿತ ಯುವಜನತೆಯೇ ಪಾಲೇ ಹೆಚ್ಚಿದೆ. ಆರೋಗ್ಯ ಇಲಾಖೆ ಸಂಗ್ರಹಿಸಿರುವ ಅಂಕಿ-ಅಂಶದಲ್ಲಿ ವಿಷಯ ಬಹಿರಂಗವಾಗಿದ್ದು, ದಿನಕ್ಕೆ ಸರಾಸರಿ 10 ಮಂದಿ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಕಂಡು ಬಂದಿದೆ.
ಇದು ಬೆಂಗಳೂರಿನ ಟಾಪ್ ಐದು ಸರ್ಕಾರಿ ಆಸ್ಪತ್ರೆಗಳಲ್ಲಿ ಕಂಡುಬರುತ್ತಿರುವ ಆತ್ಮಹತ್ಯೆ ಯತ್ನ ಪ್ರಕರಣಗಳು ಮಾತ್ರವೇ ಆಗಿದೆ. ಇನ್ನು ಉಳಿದ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಕಂಡುಬರುವ ಪ್ರಕರಣಗಳು ಲೆಕ್ಕಕ್ಕೆ ಸಿಕ್ಕಿಲ್ಲ. ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಪ್ರತಿ ದಿನ 2-3 ಪ್ರಕರಣ ಬೆಳಕಿಗೆ ಬಂದರೆ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರತಿ ದಿನ 5-6, ಬೌರಿಂಗ್ ಆಸ್ಪತ್ರೆಯಲ್ಲಿ 3-4, ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ 2-3, ಸಿ.ವಿ. ರಾಮನ್ ಆಸ್ಪತ್ರೆಯಲ್ಲಿ ಒಂದೆರಡು ಮಂದಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಐದು ಆಸ್ಪತ್ರೆಯಲ್ಲಿ ಪ್ರತಿ ತಿಂಗಳು 260- 300 ರಷ್ಟು ಆತ್ಮಹತ್ಯೆ ಯತ್ನ ಪ್ರಕರಣಗಳು ದಾಖಲಾಗುತ್ತಿವೆ.
ಇದನ್ನೂ ಓದಿ | Suicide | ಮನೆಯಲ್ಲಿ ಕೆಲಸ ಮಾಡಲ್ಲ ಎಂದು ಹೆತ್ತವರು ಬೈದಿದ್ದಕ್ಕೆ 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಚಿಕ್ಕಪುಟ್ಟ ವಿಷಯಕ್ಕೆ ಚಿಕ್ಕವರೇ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸುವವರಲ್ಲಿ ವಿದ್ಯಾರ್ಥಿಗಳು, ಯುವಜನತೆಯೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಚಿಕ್ಕ ಪುಟ್ಟ ವಿಷಯಗಳಿಗೆ ಆತ್ಮಹತ್ಯೆಗೆ ಮುಂದಾಗುತ್ತಿದ್ದು, ಕೆಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳಿಗೆ ಪೋಷಕರಿಂದ ಬರುತ್ತಿರುವ ಕಲಿಕಾ ಫಲಿತಾಂಶದ ಒತ್ತಡ, ಕಡಿಮೆ ಅಂಕ ಬರುತ್ತಿರುವುದಕ್ಕೆ, ಮಾನಸಿಕ ಹಿಂಸೆ, ಮೊಬೈಲ್ ಗೀಳು ಕೂಡ ಆತ್ಮಹತ್ಯೆ ಯತ್ನಕ್ಕೆ ಕಾರಣಗಳಾಗಿವೆ.
ಪದೇ ಪದೆ ಆತ್ಮಹತ್ಯೆಗೆ ಯತ್ನಿಸಿದವರ ಟ್ರ್ಯಾಕಿಂಗ್‌ಗಿಳಿದ ಇಲಾಖೆ
ಒಂದು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸುವ ವ್ಯಕ್ತಿ ಮತ್ತೆ ಮತ್ತೆ ಆತ್ಮಹತ್ಯೆಗೆ ಪ್ರಯತ್ನ ಮಾಡುತ್ತಿರುವುದು ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆ ಸಿದ್ಧಪಡಿಸಿರುವ ಆಂತರಿಕ ವರದಿಯಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ. ಹೀಗಾಗಿ, ಆತ್ಮಹತ್ಯೆಗೆ ಯತ್ನಿಸುವ ವ್ಯಕ್ತಿಗಳನ್ನು ಟ್ರ್ಯಾಕಿಂಗ್ ಮಾಡುವ ಕೆಲಸವನ್ನು ಆರೋಗ್ಯ ಇಲಾಖೆ ತಂಡ ಮಾಡುತ್ತಿದೆ. 20 ರಿಂದ 35 ವರ್ಷದೊಳಗಿನವರೇ ಹೆಚ್ಚು ಆತ್ಮಹತ್ಯೆಗೆ ಯತ್ನಿಸುತ್ತಿರುವುದರಿಂದ ಒಮ್ಮೆ ಯತ್ನಿಸಿದವರ ಮೇಲೆ ನಿಗಾ ಇಡಲಾಗುತ್ತಿದೆ. ಅವರು ಮತ್ತೊಮ್ಮೆ ಈ ಪ್ರಯತ್ನಕ್ಕೆ ಕೈ ಹಾಕದಂತೆ ಇಲಾಖೆ ಕ್ರಮವಹಿಸುತ್ತಿದೆ. ಆತ್ಮಹತ್ಯೆಗೆ ಯತ್ನಿಸಿದವರ ಡಾಟಾ ಸಂಗ್ರಹಿಸಿ, ಫೋನ್ ನಂಬರ್ ಪಡೆದು ಆಪ್ತ ಸಮಾಲೋಚನೆ ಮಾಡುವುದು ಸೇರಿದಂತೆ ಸೂಕ್ತ ಚಿಕಿತ್ಸೆ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮಾನಸಿಕ ಆರೋಗ್ಯ ವೈದ್ಯಕೀಯ ಸಲಹೆಗಾರ್ತಿ ಹಾಗೂ ಉಪ ನಿರ್ದೇಶಕಿ ಡಾ. ರಜಿನಿ ಪಿ, ಮಾಹಿತಿ ನೀಡಿದರು.
ಇದನ್ನೂ ಓದಿ | Sexual Assault | 13 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೈಹಿಕ ಶಿಕ್ಷಣ ಶಿಕ್ಷಕ; ಎಲ್ಲೆಲ್ಲೋ ಮುಟ್ಟುತ್ತಿದ್ದ