Site icon Vistara News

Suicide case | ಜನ್ಮದಿನವೇ ಆತ್ಮಹತ್ಯೆ ಮಾಡಿಕೊಂಡ ಕಾಲೇಜು ಉಪನ್ಯಾಸಕಿ

Suicide case_chamarajnagar

ಚಾಮರಾಜನಗರ: ತನ್ನ ಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ (Suicide case) ಮಾಡಿಕೊಂಡ ಪ್ರಕರಣ ಇಲ್ಲಿನ ಜೆಎಸ್‌ಎಸ್ ಹಾಸ್ಟೆಲ್‌ನಲ್ಲಿ ನಡೆದಿದೆ.

ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ (೨೬) ಮೃತ ಯುವತಿಯಾಗಿದ್ದು, ತಮ್ಮ ಸಾವಿಗೆ ತಾವೇ ಕಾರಣ ಎಂದು ಡೆತ್‌ನೋಟ್‌ ಬರೆದು ನೇಣಿಗೆ ಶರಣಾಗಿದ್ದಾರೆ. ಚಂದನಾ ಅವರು ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಆಗಸ್ಟ್‌ ೯ರಂದು ಚಂದನಾ ಅವರ ಹುಟ್ಟುಹಬ್ಬವಾಗಿದ್ದು, ಅದೇ ದಿನ ಅವರು ದುರಂತ ಅಂತ್ಯ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Heavy Rain | ಸತತ ಮಳೆಗೆ ಮುಂದುವರಿದ ಮನೆ ಕುಸಿತ ಅವಘಡ; ಬೆಳಗಾವಿಯಲ್ಲಿ ಜನಜೀವನ ಅಸ್ತವ್ಯಸ್ತ

Exit mobile version