ಆನೇಕಲ್: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ನೇಣಿಗೆ (Suicide Case) ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯ ಮನೆಯಲ್ಲಿ ದೀಕ್ಷಾ (21) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಪತಿ-ಪತ್ನಿ ನಡುವೆ ಆಗಾಗ ಜಗಳ ಆಗುತ್ತಿತ್ತು, ಕೆಲ ದಿನಗಳಿಂದ ಪತಿ ಪವನ್ ಮನೆಯವರಿಂದ ದೀಕ್ಷಾಳಿಗೆ ಕಿರುಕುಳ ನೀಡಲಾಗಿತ್ತು ಎನ್ನಲಾಗಿದೆ. ಇದರಿಂದಾಗಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಆಕೆಯ ಪೋಷಕರು ನೀಡಿದ ದೂರಿನನ್ವಯ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ | Suicide Case | ಮರಕ್ಕೆ ನೇಣು ಬಿಗಿದುಕೊಂಡು ಸಾಗರದ ವಿದ್ಯಾರ್ಥಿ ಆತ್ಮಹತ್ಯೆ